ಬ್ರೇಕಿಂಗ್ ನ್ಯೂಸ್
18-05-24 09:15 pm HK News Desk ದೇಶ - ವಿದೇಶ
ಹೈದರಾಬಾದ್, ಮೇ.18: ಐದು ದಿನಗಳ ಹಿಂದಷ್ಟೇ ಬೆಂಗಳೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿ ಸೀರಿಯಲ್ ನಟಿ ಪವಿತ್ರಾ ಜಯರಾಮ್ ಸಾವನ್ನಪ್ಪಿದ್ದರು. ಅದೇ ಕಾರಿನಲ್ಲಿದ್ದು ಗಾಯಗೊಂಡು ಬದುಕಿ ಉಳಿದಿದ್ದ ನಟಿಯ ಆಪ್ತ ಸ್ನೇಹಿತರಾಗಿದ್ದ ನಟ ಚಂದ್ರಕಾಂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪವಿತ್ರಾ ಜಯರಾಮ್ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದ್ರಕಾಂತ್ ಹೈದರಾಬಾದ್ ನಗರದ ಮಣಿಕೊಂಡದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್ ಜೊತೆ ಚಂದ್ರು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದರು. ಇವತ್ತು ಪವಿತ್ರಾ ಹುಟ್ಟುಹಬ್ಬ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಚಂದ್ರು, ಅದೇ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಸಾವಿನ ನಂತರ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಚಂದು ತನಗೂ ಮಿದುಳಿನ ಕಾಯಿಲೆ ಇದ್ದು, ಹೆಚ್ಚು ದಿನ ಇರೋದಿಲ್ಲ, ಸಾಯುತ್ತೇನೆ ಎಂದಿದ್ದರು.

ನಾಲ್ಕು ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಚಂದು ಅವರು ಮಂಡ್ಯಕ್ಕೆ ಬಂದಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುವಾಗ, ತೀವ್ರ ಭಾವುಕರಾಗಿದ್ದರು. 2015ರಲ್ಲಿ ಯುವತಿಯೊಬ್ಬಳನ್ನು ಮದುವೆಯಾಗಿದ್ದ ಚಂದ್ರುಗೆ ಇಬ್ಬರು ಮಕ್ಕಳಿದ್ದರು. ಇತ್ತೀಚಿನ ದಿನಗಳಲ್ಲಿ ನಟಿ ಪವಿತ್ರಾ ಜಯರಾಮ್ ಜೊತೆಗೆ ಆಪ್ತರಾಗಿದ್ದರು.
Telugu TV serial actor Chandrakanth allegedly died by suicide at a flat here, days after the death of his co-star Pavithra Jayaram, who was killed in a road accident recently, police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm