ಬ್ರೇಕಿಂಗ್ ನ್ಯೂಸ್
01-06-24 05:19 pm HK News Desk ದೇಶ - ವಿದೇಶ
ಮುಂಬೈ, ಜೂ 01: ಮುಂಬೈ: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಮೇಲೆ ದಾಳಿಗೆ ಸಂಚು ರೂಪಿಸಿರುವ ಆರೋಪದ ಮೇರೆಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ನಾಲ್ವರು ಸದಸ್ಯರನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸಲ್ಮಾನ್ ಖಾನ್ ಅವರ ಬಾಂದ್ರಾ ಮನೆಯ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ಹಿನ್ನೆಲೆಯಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಪನ್ವೆಲ್ ಫಾರ್ಮ್ಹೌಸ್ನಲ್ಲಿ ನಟನ ಮೇಲೆ ದಾಳಿ ಮಾಡಲು ಸಂಚು ರೂಪಿಸಿರುವ ಬಗ್ಗೆ ಸುಳಿವು ಪಡೆದ ನವಿ ಮುಂಬೈ ಪೊಲೀಸರು ಕಳೆದ ತಿಂಗಳಿಂದ ತನಿಖೆಯನ್ನು ಪ್ರಾರಂಭಿಸಿತ್ತು. ತನಿಖೆಯಲಿ ಫಾರ್ಮ್ ಹೌಸ್ ಬಳಿ, ಸಲ್ಮಾನ್ ಬರುವಿಕೆಗಾಗಿ ನಾಲ್ವರು ಹೊಂಚು ಹಾಕಿ ಕುಳಿತಿದ್ದರು ಎಂಬ ಸ್ಪೋಟಕ ವಿಚಾರ ಗೊತ್ತಾಗಿದ್ದೆ. ಎಕೆ-47 ಗನ್ ಸಮೇತ ಕಾರಿನಲ್ಲಿಯೇ ಕಾಯುತ್ತಿದ್ದ ಬಿಷ್ಣೋಯ್ ಗ್ಯಾಂಗ್ನ ನಾಲ್ವರು ಶಾರ್ಪ್ ಶೂಟರ್ಗಳನ್ನು ಈಗ ಪೊಲೀಸರು ಬಂಧಿಸಿದ್ದಾರೆ. ಎಕೆ-47 ರೈಫಲ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಧನಂಜಯ್ ಅಲಿಯಾಸ್ ಅಜಯ್ ಕಶ್ಯಪ್, ಗೌರವ್ ಭಾಟಿಯಾ ಅಲಿಯಾಸ್ ನಹ್ವಿ, ವಾಸ್ಪಿ ಖಾನ್ ಅಲಿಯಾಸ್ ವಾಸಿಂ ಚಿಕ್ನಾ ಮತ್ತು ರಿಜ್ವಾನ್ ಖಾನ್ ಅಲಿಯಾಸ್ ಜಾವೇದ್ ಖಾನ್ ಎಂದು ಗುರುತಿಸಲಾಗಿದೆ.
ಇನ್ನೂ.. ಸಲ್ಮಾನ್ ಖಾನ್ ಅವರನ್ನ ಕೊಲ್ಲಲು M16, AK-47 ಮತ್ತು AK-92 ರೈಫಲ್ಗಳನ್ನು ಖರೀದಿಸಲು ಪಾಕಿಸ್ತಾನದಲ್ಲಿರುವ ಡೋಗಾ ಎಂಬ ಶಸ್ತ್ರಾಸ್ತ್ರ ವ್ಯಾಪಾರಿಯೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಸ್ಪೋಟಕ ಮಾಹಿತಿಯನ್ನು ಬಂಧಿತ ಆರೋಪಿ ಅಜಯ್ ಕಶ್ಯಪ್ ಪೊಲೀಸ್ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಸಲ್ಮಾನ್ ಖಾನ್ ಅವರನ್ನ ಕೊಲ್ಲುವಲ್ಲಿ ಈ ಬಾರಿ ಯಶಸ್ವಿ ಆದರೆ ಬಂಧಿತ ಆರೋಪಿಗಳಿಗೆ ದೊಡ್ಡ ಮೊತ್ತದ ಹಣ ನೀಡುವುದಾಗಿ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಕೆನಡಾದ ಗೋಲ್ಡಿ ಬ್ರಾರ್ ಭರವಸೆಯನ್ನ ನೀಡಿದ್ದರು ಎಂಬ ಮಾಹಿತಿ ಕೂಡ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.
ಕೃಷ್ಣಮೃಗಗಳನ್ನು ಬಿಷ್ಣೋಯ್ ಸಮುದಾಯವು ಪವಿತ್ರವೆಂದು ಪರಿಗಣಿಸುತ್ತದೆ. ಆದರೆ ಸಲ್ಮಾನ್ ಖಾನ್ ಮೇಲೆ ಕೃಷ್ಣ ಮೃಗ ಬೇಟೆಯಾಡಿದ ಆರೋಪ ಇತ್ತು. ಹತ್ತಾರು ಬಾರಿ ಸಲ್ಮಾನ್ ಈ ಪ್ರಕರಣದಲ್ಲಿ ಕೋರ್ಟು-ಕಛೇರಿ ಎಂದು ಅಲೆದಾಡಿದ್ದು ಇದೆ. ಆದರೆ 2016ರಲ್ಲಿ ಈ ಪ್ರಕರಣದಲ್ಲಿ ಸಲ್ಮಾನ್ ಖಾನ್ ಖುಲಾಸೆಯಾಗಿತ್ತು. ಆ ದಿನ ಆ ಕ್ಷಣದಿಂದ ಸಲ್ಮಾನ್ ಖಾನ್ ಬೆನ್ನು ಹತ್ತಿರುವ ಲಾರೆನ್ಸ್ ಬಿಷ್ಣೋಯ್ ಜೈಲಿನಲ್ಲಿ ಇದ್ದುಕೊಂಡೆ ಸಲ್ಮಾನ್ ಖಾನ್ ಗೆ ಅನೇಕ ಬಾರಿ ಸ್ಕೆಚ್ ಹಾಕಿದ್ದಾನೆ. ಎರಡು ಮೂರು ಬಾರಿ ಸಲ್ಮಾನ್ ಖಾನ್ ಅವರನ್ನ ಕೊಲ್ಲುವ ಪ್ರಯತ್ನವನ್ನೂ ಮಾಡಿದ್ದಾನೆ.
ಉಳಿದಂತೆ ಉತ್ತರ ಭಾರತದ ಕುಖ್ಯಾತ ದರೋಡೆಕೋರ. ಕೊಲೆ ಮತ್ತು ಸುಲಿಗೆ ಸೇರಿದಂತೆ ಅನೇಕ ಕ್ರಿಮಿನಲ್ ಆರೋಪಗಳನ್ನು ಹೊತ್ತಿರುವ ಲಾರೆನ್ಸ್ ಬಿಷ್ಣೋಯ್, ಖಲಿಸ್ತಾನ್ ಚಳವಳಿ ಮತ್ತು ಇತರ ರೀತಿಯ ದೇಶ ವಿರೋಧಿ ಚಟುವಟಿಕೆಗಳಿಗೆ ಕೂಡ ಹೆಸರುವಾಸಿ. ಇನ್ನೂ ಗಾಯಕ ಸಿದ್ದು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿಯೂ ಈ ವ್ಯಕ್ತಿಯ ಕೈವಾಡ ಇದೆ ಎಂದು ಹಿಂದೆ ಸುದ್ದಿಯಾಗಿತ್ತು
After the firing at the Bandra residence of Bollywood actor Salman Khan more than a month ago, the Navi Mumbai police on June 1 said that another attempt was planned to attack the actor at his farmhouse in Panvel. In connection with the same, the police have arrested four people recently.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm