ಬ್ರೇಕಿಂಗ್ ನ್ಯೂಸ್
02-06-24 07:39 pm HK News Desk ದೇಶ - ವಿದೇಶ
ನವದೆಹಲಿ, ಜೂನ್.2: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧಿಸಿ ಮಧ್ಯಂತರ ಜಾಮೀನು ಪೂರ್ತಿಗೊಂಡ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾನುವಾರ ಸಂಜೆ ತಿಹಾರ್ ಜೈಲಿಗೆ ಶರಣಾಗಿದ್ದಾರೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ಜೂನ್ 1 ರಂದು ಕೊನೆಗೊಂಡಿತ್ತು. ಹೀಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ತಿಹಾರ್ ಜೈಲಿಗೆ ಬಂದು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.
ಲೋಕಸಭೆ ಚುನಾವಣೆಗೆ ಪ್ರಚಾರ ನಡೆಸಲು ಕೇಜ್ರಿವಾಲ್ ಗೆ ಷರತ್ತಿನ ಜಾಮೀನು ನೀಡಲಾಗಿತ್ತು. ಶರಣಾಗುವ ಮುನ್ನ ಕೇಜ್ರಿವಾಲ್ ಅವರು ರಾಜ್ ಘಾಟ್ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ಕನ್ನಾಟ್ ನಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದಕ್ಕೂ ಮೊದಲು ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ವೇಳೆ, ''ನಾನು ಮತ್ತೆ ಜೈಲಿಗೆ ಹೋಗುತ್ತಿರುವುದು ಭ್ರಷ್ಟಾಚಾರದಲ್ಲಿ ತೊಡಗಿದ್ದಕ್ಕಾಗಿ ಅಲ್ಲ, ನಾನು ಸರ್ವಾಧಿಕಾರದ ವಿರುದ್ಧ ಧ್ವನಿ ಎತ್ತಿದ್ದರಿಂದ ಜೈಲಿಗೆ ಹೋಗುತ್ತಿದ್ದೇನೆ. ನನಗೆ ಸುಪ್ರೀಂ ಕೋರ್ಟ್ 21 ದಿನಗಳ ಅವಕಾಶ ನೀಡಿತ್ತು. ಈ 21 ದಿನಗಳು ಅವಿಸ್ಮರಣೀಯ. ನಾನು ಒಂದು ನಿಮಿಷವೂ ವ್ಯರ್ಥ ಮಾಡಲಿಲ್ಲ. ನಾನು ದೇಶವನ್ನು ಉಳಿಸಲು ಪ್ರಚಾರ ಮಾಡಿದ್ದೇನೆ. ಎಎಪಿಗಿಂತ ಮೊದಲು ನನಗೆ ನನ್ನ ದೇಶ ಮುಖ್ಯ ಎಂದು ಕೇಜ್ರಿವಾಲ್ ಹೇಳಿದರು. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಮೂರನೇ ಬಾರಿಗೆ ಅಧಿಕಾರಿದ ಗದ್ದುಗೆ ಏರಲಿದೆ ಎಂಬ ಭವಿಷ್ಯ ನುಡಿಯುವ ಎಲ್ಲಾ ಎಕ್ಸಿಟ್ ಪೋಲ್ಗಳು "ನಕಲಿ" ಎಂದು ಕೇಜ್ರಿವಾಲ್ ಪ್ರತಿಪಾದಿಸಿದರು.
Delhi Chief Minister Arvind Kejriwal on Sunday surrender at the Tihar jail after 21 days interim bail granted to him by the Supreme Court to campaign for Lok Sabha elections ended.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm