ಬ್ರೇಕಿಂಗ್ ನ್ಯೂಸ್
05-06-24 01:08 pm HK News Desk ದೇಶ - ವಿದೇಶ
ನವದೆಹಲಿ, ಜೂನ್.5: ಎನ್ ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೇರುತ್ತಾ ಎನ್ನುವ ಕುತೂಹಲದ ಪ್ರಶ್ನೆ ಎದ್ದಿರುವಾಗಲೇ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಎನ್ ಡಿಎ ಜೊತೆಗೇ ಇರುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಐದು ವರ್ಷಗಳ ಹೋರಾಟದ ಬಳಿಕ ಟಿಡಿಪಿ ಇಂದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷದ ಕಾರ್ಯಕರ್ತರ ಶ್ರಮವಿದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
![]()
ದೆಹಲಿಯಲ್ಲಿ ಎನ್ ಡಿಎ ಸಭೆಗೆ ತೆರಳುವ ಮುನ್ನ ವಿಜಯವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಂದ್ರಬಾಬು ನಾಯ್ಡು, ದೇಶದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳನ್ನು ನೋಡಿದ್ದೇನೆ. ಇದರ ಬಗ್ಗೆ ನನಗೆ ಬಹಳಷ್ಟು ಅನುಭವವಿದೆ. ನಾವು ಎನ್ಡಿಎ ಮೈತ್ರಿ ಕೂಟದಲ್ಲಿಯೇ ಇರಲಿದ್ದೇವೆ. ಇವತ್ತು ದೆಹಲಿಯಲ್ಲಿ ನಡೆಯಲಿರುವ ಎನ್ಡಿಎ ಸಭೆಯಲ್ಲಿ ಭಾಗಿಯಾಗುತ್ತೇನೆ. ಮುಂದಿನ ಬೆಳವಣಿಗೆ ಬಗ್ಗೆ ನಿಮಗೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಚುನಾವಣೆ ಫಲಿತಾಂಶ ಘೋಷಣೆಯ ನಂತರ ಬಿಜೆಪಿಗೆ ಸ್ವಂತ ಬಲದ ಬಹುಮತ ದೊರೆಯದೆ ಇರುವುದರಿಂದ ಮೈತ್ರಿ ಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯು ನೆರವಿನೊಂದಿಗೆ ಸರಕಾರ ರಚಿಸಬೇಕಾದ ಒತ್ತಡಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಇಂಡಿಯಾ ಒಕ್ಕೂಟ, ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರನ್ನು ತನ್ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಇದರ ಬೆನ್ನಲ್ಲೇ ಚಂದ್ರಬಾಬು ನಾಯ್ಡು ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದ್ದು, ಅಧಿಕಾರಕ್ಕೇರುವ ಆಸೆಯಲ್ಲಿದ್ದ ಕಾಂಗ್ರೆಸ್ ಒಕ್ಕೂಟಕ್ಕೆ ನಿರಾಸೆ ಮೂಡಿಸಿದೆ. ಅತ್ತ ನಿತೀಶ್ ಕುಮಾರ್ ಚುನಾವಣೆ ಬಳಿಕದ ಗುಟ್ಟು ಬಿಟ್ಟು ಕೊಟ್ಟಿಲ್ಲ.
As the BJP faces the challenge of possibly falling short in its Lok Sabha numbers, its partner, the Telugu Desam Party (TDP), has firmly committed its support to the National Democratic Alliance (NDA), rejecting any rumors about switching allegiance to the INDIA bloc.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm