ಬ್ರೇಕಿಂಗ್ ನ್ಯೂಸ್
05-06-24 03:59 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 5: ಲೋಕಸಭೆ ಫಲಿತಾಂಶದ ಬಳಿಕ ಬುಧವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, 17ನೇ ಲೋಕಸಭೆಯನ್ನು ವಿಸರ್ಜಿಸಲಾಗಿದೆ. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಪ್ರಧಾನಿ ಮೋದಿ ರಾಜೀನಾಮೆ ಸಲ್ಲಿಸಿದ್ದು ನೂತನ ಸರ್ಕಾರ ರಚನೆಗೆ ಅವಕಾಶ ಕೋರಿದರು.
ಪ್ರಧಾನ ಮಂತ್ರಿಗಳು ಹಾಗೂ ಸಂಪುಟ ಸದಸ್ಯರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿಗಳು ಹೊಸ ಸರ್ಕಾರ ರಚನೆಯಾಗುವ ವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಮನವಿ ಮಾಡಿದರು ಎಂದು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ತಿಳಿಸಿದೆ.
ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆತ ಹಿನ್ನೆಲೆಯಲ್ಲಿ ಜೂನ್ 8ರಂದು ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಅದೇ ದಿನ ಕೇಂದ್ರ ಸಚಿವ ಸಂಪುಟ ಸದಸ್ಯರ ಪ್ರಮಾಣ ವಚನ ಸ್ವೀಕಾರವೂ ನಡೆಯುವ ಸಾಧ್ಯತೆ ಇದೆ.
ಜೂನ್ 8 ರಂದು ರಾಷ್ಟ್ರಪತಿ ಅವರಿಂದ ನರೇಂದ್ರ ಮೋದಿಯವರು ಪ್ರಮಾಣವಚನ ತೆಗೆದುಕೊಂಡು ಪ್ರಧಾನಿ ಹುದ್ದೆಗೆ ಏರಲಿದ್ದಾರೆ. ಎನ್ಡಿಎ ಮೈತ್ರಿಕೂಟಗಳ ಜೊತೆ ಸೇರಿ ಮೋದಿ ಸರ್ಕಾರ ರಚನೆ ಮಾಡಲಿದ್ದಾರೆ. 2014, 2019ರಲ್ಲಿ 2 ಬಾರಿ ಪ್ರಧಾನಿ ಆಗಿದ್ದ ಮೋದಿ ಈ ಬಾರಿ 2024ರಲ್ಲೂ ಪ್ರಧಾನಿಯಾದರೆ 3ನೇ ಬಾರಿಗೆ ದೇಶದ ಅತ್ಯುನ್ನತ ಸ್ಥಾನ ಸ್ವೀಕಾರ ಮಾಡಿದಂತಾಗುತ್ತದೆ.
ಬುಧವಾರ ಸಂಜೆ ದೆಹಲಿಯಲ್ಲಿ ನಡೆಯುವ ಎನ್ಡಿಎ ಸಭೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ಆಂಧ್ರದ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು, ಬಿಹಾರ ಸಿಎಂ ನಿತೀಶ್ ಕುಮಾರ್, ಆರ್ಜೆಡಿಯ ತೇಜಸ್ವಿ ಯಾದವ್ ಸೇರಿದಂತೆ ಪ್ರಮುಖರು ದೆಹಲಿ ವಿಮಾನವನ್ನು ಹತ್ತಿದ್ದಾರೆ. ಸಭೆಯಲ್ಲಿ ಪಾಲ್ಗೊಂಡು ಕೇಂದ್ರದಲ್ಲಿ ಸರ್ಕಾರ ರಚನೆ ಬಗ್ಗೆ ಮಹತ್ವದ ಚರ್ಚೆ ಮಾಡಲಿದ್ದಾರೆ. ಈ ಬಾರಿ ಉಪಪ್ರಧಾನಿ ಹುದ್ದೆ ಕೂಡ ರಚನೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.
Prime Minister Narendra Modi on June 5 called on President Murmu and tendered his resignation along with the Union Council of Ministers after the Union Cabinet recommended the dissolution of the 17th Lok Sabha. Mr. Modi and the Union Council of Ministers will continue in office till the new Government is formed at the request of the President, the Rashtrapati Bhawan said. The term of the current Lok Sabha ends on June 16.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm