ಬ್ರೇಕಿಂಗ್ ನ್ಯೂಸ್
06-06-24 10:23 pm HK News Desk ದೇಶ - ವಿದೇಶ
ಚಂಡೀಗಢ, ಜೂನ್ 6: ಬಾಲಿವುಡ್ ನಟಿ, ಬಿಜೆಪಿಯ ನೂತನ ಸಂಸದೆ ಕಂಗನಾ ರನೌತ್ ಮೇಲೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬಂದಿಯೊಬ್ಬರು ಹಲ್ಲೆ ನಡೆಸಿದ್ದಾರೆ.
ಸಂಸದೆಯಾದ ಬಳಿಕ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದು ತಪಾಸಣೆಗೆ ಒಳಗಾಗಿದ್ದಾಗ ಮಹಿಳಾ ಸೆಕ್ಯುರಿಟಿ ಸಿಬಂದಿ ಕುಲ್ವಿಂದರ್ ಸಿಂಗ್ ಎಂಬವರು ಮಾತಿಗೆ ಮಾತು ಬೆಳೆಸಿ ಜಟಾಪಟಿ ನಡೆಸಿದ್ದು, ಆನಂತರ ಕಂಗನಾ ಕೆನ್ನೆಗೆ ಬಾರಿಸಿದ್ದಾರೆ. ಪಂಜಾಬ್ ನಲ್ಲಿ ರೈತರ ಪ್ರತಿಭಟನೆ ವಿಚಾರದಲ್ಲಿ ಕಂಗನಾ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕುಲ್ವಿಂದರ್ ಕೌರ್ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ತಕ್ಷಣವೇ ಹಲ್ಲೆಗೈದ ಸಿಬಂದಿಯನ್ನು ಅಮಾನತು ಮಾಡಿದ್ದು, ಘಟನೆ ಬಗ್ಗೆ ಎಫ್ಐಆರ್ ದಾಖಲು ಮಾಡಲಾಗಿದೆ. ಕಂಗನಾ ಈ ಬಗ್ಗೆ ವಿಡಿಯೋ ಮಾಡಿ ಟ್ವೀಟ್ ಮಾಡಿದ್ದು, ಪಂಜಾಬಿನಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆಯನ್ನು ಹೇಗೆ ನಿಯಂತ್ರಣ ಮಾಡೋದು ಎಂದು ಪ್ರಶ್ನೆ ಮಾಡಿದ್ದಾರೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಚೆಕ್ ಮಾಡುತ್ತಿದ್ದಾಗ ಘಟನೆ ನಡೆದಿದೆ. ಮಹಿಳಾ ಸಿಬಂದಿಯಿಂದ ತಪಾಸಣೆಗೆ ಕಾಯುತ್ತಿದ್ದಾಗಲೇ ಒಬ್ಬಾಕೆ ಬಂದು ಹಲ್ಲೆ ನಡೆಸಿದ್ದಾಳೆ. ನನ್ನನ್ನು ತುಚ್ಛವಾಗಿ ನಿಂದಿಸಿದ್ದಾಳೆ. ಪ್ರಶ್ನೆ ಮಾಡಿದ್ದಕ್ಕೆ, ನಾನು ಪಂಜಾಬಿ ರೈತರ ಪರವಾಗಿದ್ದೇನೆ ಎಂದು ಆಕೆ ತಿಳಿಸಿದ್ದಾನೆ. ನಾನು ಸ್ವಸ್ಥಳಿದ್ದೇನೆ. ಆದರೆ ಪ್ರಶ್ನೆ ಇರುವುದು, ಪಂಜಾಬಿನಲ್ಲಿ ಬೆಳೆಯುತ್ತಿರುವ ಈ ರೀತಿಯ ಆತಂಕವಾದ ಮತ್ತು ಅಲ್ಲಿನ ಜನರಲ್ಲಿ ಹಿಂಸೆಯ ಬಗ್ಗೆ ಎಂದು ಹೇಳಿದ್ದಾರೆ.
ಇದೇ ವೇಳೆ, ಮತ್ತೊಂದು ವಿಡಿಯೋ ವೈರಲ್ ಆಗಿದ್ದು ಅದರಲ್ಲಿ ಹಲ್ಲೆಗೈದ ಮಹಿಳಾ ಸಿಬಂದಿ ತನ್ನ ತಾಯಿಯೂ ಅಂದು ರೈತರ ಪ್ರತಿಭಟನೆಯಲ್ಲಿದ್ದರು, ಅದಕ್ಕಾಗಿ ಸಿಟ್ಟು ಇತ್ತು ಎಂಬ ಮಾತನ್ನು ಹೇಳುತ್ತಿದ್ದಾಳೆ. ಆಕೆಯನ್ನು ಕೂಡಲೇ ಹಿರಿಯ ಅಧಿಕಾರಿಗಳು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ದೆಹಲಿಗೆ ತೆರಳಿದ ಬಳಿಕ ಕಂಗನಾ ರನೌತ್ ಅವರು ಸಿಐಎಸ್ಎಫ್ ಡಿಜಿ ನೈನಾ ಸಿಂಗ್ ಮತ್ತಿತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದು, ಘಟನೆಯ ಬಗ್ಗೆ ವಿವರಿಸಿದ್ದಾರೆ. ಕಂಗನಾ ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ.
Kangana Ranaut, Bollywood actor and BJP’s MP-elect from Himachal Pradesh's Mandi, on Thursday alleged that a CISF security official at Chandigarh Airport slapped her while she was travelling to Delhi.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm