ಬ್ರೇಕಿಂಗ್ ನ್ಯೂಸ್
09-06-24 09:36 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 8: ಮೋದಿ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಸಿಗದೇ ಇದ್ದುದಕ್ಕೆ ಎನ್ ಸಿಪಿ ಅಜಿತ್ ಪವಾರ್ ಬಣ ಅಸಮಾಧಾನಗೊಂಡಿದೆ. ಕೇಂದ್ರದ ಕಡೆಯಿಂದ ರಾಜ್ಯ ಸಚಿವ ಸ್ಥಾನ ನೀಡುವ ಬಗ್ಗೆ ಆಫರ್ ಬಂದಿದ್ದನ್ನು ಅಜಿತ್ ಪವಾರ್ ನಿರಾಕರಿಸಿದ್ದಾರೆ.
ರಾಜ್ಯ ಸಚಿವ ಸ್ಥಾನ ನೀಡುವುದು ನಮಗೆ ಹಿನ್ನಡೆ ಎಂದು ಭಾವಿಸುತ್ತೇವೆ. ಕ್ಯಾಬಿನೆಟ್ ಸಚಿವ ಸ್ಥಾನ ಸಿಗಬೇಕೆಂದು ನಮ್ಮ ಬೇಡಿಕೆ. ಅದಕ್ಕಾಗಿ ಕಾಯಲು ಸಿದ್ಧರಿದ್ದೇವೆ ಎಂದು ಅಜಿತ್ ಪವಾರ್ ಹೇಳಿದ್ದಾರೆ. ಅಜಿತ್ ಪವಾರ್ ಬಣದ ಪ್ರಫುಲ್ ಪಟೇಲ್ ಅವರಿಗೆ ರಾಜ್ಯ ಸಚಿವ ಸ್ಥಾನ (ಸ್ವತಂತ್ರ ಖಾತೆ) ನೀಡುವ ಬಗ್ಗೆ ಆಫರ್ ನೀಡಲಾಗಿತ್ತು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಘಟಕದ ಬಿಜೆಪಿ ರಾಜ್ಯಾಧ್ಯಕ್ಷ ದೇವೇಂದ್ರ ಫಡ್ನವಿಸ್, ಮುಂದಿನ ಬಾರಿ ಸಚಿವ ಸಂಪುಟ ವಿಸ್ತರಣೆಗೊಳ್ಳುವ ಸಂದರ್ಭದಲ್ಲಿ ಆದ್ಯತೆ ಸಿಗಬಹುದು. ಸ್ವತಂತ್ರ ರಾಜ್ಯ ಖಾತೆಯ ಆಫರ್ ನೀಡಲಾಗಿತ್ತು. ಆದರೆ ನಿರಾಕರಣೆ ಮಾಡಿದ್ದಾರೆ. ಮೈತ್ರಿ ಪಕ್ಷಗಳ ಸರಕಾರ ರಚನೆ ಸಂದರ್ಭದಲ್ಲಿ ಹಲವು ವಿಚಾರಗಳನ್ನು ಪರಿಗಣಿಸಬೇಕಾಗುತ್ತದೆ. ಒಂದು ಪಕ್ಷದ ಕಾರಣಕ್ಕಾಗಿ ಮಾನದಂಡಗಳನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಹಾಗಿದ್ದರೂ, ಅಜಿತ್ ಪವಾರ್ ಅವರು ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಪ್ರಫುಲ್ ಪಟೇಲ್ ಈ ಹಿಂದೆ ಕೇಂದ್ರ ಸಚಿವರಾಗಿ ಕರ್ತವ್ಯ ನಿಭಾಯಿಸಿದ್ದಾರೆ. ಹಾಗಿರುವಾಗ, ಈಗ ರಾಜ್ಯ ಖಾತೆಯನ್ನು ಒಪ್ಪಿಕೊಳ್ಳುವುದು ಸರಿಯಾಗಲ್ಲ. ನಾವು ಈಗಾಗಲೇ ಬಿಜೆಪಿಗೆ ತಿಳಿಸಿದ್ದೇವೆ, ಕಾಯಲು ಸಿದ್ಧರಿದ್ದೇವೆ. ಆದರೆ ನಮಗೆ ಕ್ಯಾಬಿನೆಟ್ ಸ್ಥಾನವೇ ಕೊಡಬೇಕು ಎಂದು ಅಜಿತ್ ಪವಾರ್ ಹೇಳಿದ್ದಾರೆ. ಶರದ್ ಪವಾರ್ ನೇತೃತ್ವದ ಎನ್ ಸಿಪಿ ಪಕ್ಷದಿಂದ ಸಿಡಿದು ಹೊರಬಂದಿರುವ ಅಜಿತ್ ಪವಾರ್, ಈ ಬಾರಿ ಬಿಜೆಪಿ ಮೈತ್ರಿಕೂಟದಲ್ಲಿದ್ದು ಚುನಾವಣೆ ಎದುರಿಸಿದ್ದರು.
The Ajit Pawar camp of the NCP, part of Mahayuti alliance in Maharashtra, has been left disappointed after their request for a Cabinet berth in the new Modi government was not accommodated. The NCP was instead offered the post of a Minister of State with independent charge, which party leader Praful Patel called a “demotion”.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm