ಬ್ರೇಕಿಂಗ್ ನ್ಯೂಸ್
19-06-24 11:19 am HK News Desk ದೇಶ - ವಿದೇಶ
ನವದೆಹಲಿ, ಜೂನ್.19: ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾದಲ್ಲಿ ಅತಿ ತಾಪಮಾನದಿಂದಾಗಿ 550ಕ್ಕೂ ಹೆಚ್ಚು ಮಂದಿ ಹಜ್ ಯಾತ್ರಿಗಳು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಧ್ಯಮ ಸಂಸ್ಥೆಗೆ ತಿಳಿಸಿದ್ದಾರೆ. ಈ ಪೈಕಿ ಬಹುಪಾಲು ಅಂದರೆ, 323 ಮಂದಿ ಈಜಿಪ್ಟ್ ದೇಶದ ಪ್ರಜೆಗಳು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
60 ಮಂದಿ ಜೋರ್ಡಾನ್ ಪ್ರಜೆಗಳು ಸಾವಿಗೀಡಾಗಿದ್ದಾರೆ. ಇಂಡೋನೇಶ್ಯಾ, ಇರಾನ್, ಸೆನೆಗಲ್ ದೇಶದ ಪ್ರಜೆಗಳು ಹೆಚ್ಚಾಗಿ ಸಾವು ಕಂಡಿದ್ದಾರೆ. ಹಗಲಿನ ವೇಳೆಯಲ್ಲಿ ಮೆಕ್ಕಾದಲ್ಲಿ 51.8 ಡಿಗ್ರಿ ಸೆಲ್ಶಿಯಸ್ ಉಷ್ಣತೆ ಇರುವುದಾಗಿ ಸೌದಿ ರಾಷ್ಟ್ರೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರತಿ ಹತ್ತು ವರ್ಷದಲ್ಲಿ 0.4 ಡಿಗ್ರಿ ಸೆಲ್ಶಿಯಸ್ ಉಷ್ಣತೆ ಹೆಚ್ಚುತ್ತಿದ್ದು, ಇದರಿಂದಾಗಿ ಮೆಕ್ಕಾದಲ್ಲಿ ಹಗಲಿನ ವೇಳೆಯಲ್ಲಿ ಜನರು ಕಾಲಿಡದ ಸ್ಥಿತಿಯಾಗಿದೆ ಎಂದು ಅಲ್ಲಿನ ಆಡಳಿತ ಮಾಹಿತಿ ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.
ಸೌದಿ ಆಡಳಿತದ ಮಾಹಿತಿ ಪ್ರಕಾರ, 2 ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥಕ್ಕೀಡಾಗಿದ್ದು, ಅವರಿಗೆ ಆರೈಕೆ ಮಾಡಲಾಗಿದೆ. ಆದರೆ ಎಷ್ಟು ಮಂದಿ ಸಾವಿಗೀಡಾಗಿದ್ದಾರೆ ಎನ್ನುವ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಇದೇ ವೇಳೆ, ಹಜ್ ಯಾತ್ರಿಗಳು ಕೊಡೆ ಹಿಡಿದು ಬಿಸಿಲಿನಿಂದ ದೂರ ಇರಬೇಕು, ಸಾಕಷ್ಟು ನೀರು ಕುಡಿಯಿರಿ, ಬಿಸಿಲಿನ ನೇರ ಹೊಡೆತದಿಂದ ದೂರವಿರಿ ಎಂದು ಸಲಹೆ ಮಾಡಿದೆ. ಈ ಬಾರಿ ಒಟ್ಟು 1.8 ಮಿಲಿಯನ್ ಹಜ್ ಯಾತ್ರಿಗಳು ಮೆಕ್ಕಾ ಯಾತ್ರೆ ಕೈಗೊಂಡಿದ್ದಾರೆ. ಕಳೆದ ವರ್ಷ 1.6 ಮಿಲಿಯನ್ ಜನರು ಹಜ್ ಯಾತ್ರೆ ಮಾಡಿದ್ದರು. ಮುಸ್ಲಿಮರಿಗೆ ಐದು ಕಡ್ಡಾಯ ನಿಮಯಗಳಲ್ಲಿ ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂಬುದೂ ಒಂದಾಗಿದೆ.
Diplomats on Tuesday said at least 550 pilgrims died during the Haj, underscoring the grueling nature of the pilgrimage which again unfolded in scorching temperatures this year. At least 323 of those who died were Egyptians, most of them succumbing to heat-related illnesses, two Arab diplomats coordinating their countries’ responses told AFP.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm