ಬ್ರೇಕಿಂಗ್ ನ್ಯೂಸ್
19-06-24 10:19 pm HK News Desk ದೇಶ - ವಿದೇಶ
ಲಕ್ನೋ, ಜೂನ್ 19: ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಕ್ಬರ್ ನಗರದಲ್ಲಿ ಮತ್ತೆ ಬುಲ್ಡೋಜರ್ ಸದ್ದು ಮಾಡಿದೆ. ಅಕ್ರಮವಾಗಿ ನಿರ್ಮಿಸಲಾಗಿದ್ದ ಮಸೀದಿ ಮತ್ತು ದೇವಸ್ಥಾನವನ್ನು ತಡರಾತ್ರಿ ಕೆಡವಲಾಗಿದೆ. ಸ್ಥಳೀಯ ಆಡಳಿತ ತಡರಾತ್ರಿಯಲ್ಲಿ ಬುಲ್ಡೋಜರ್ಗಳಿಂದ ಮಸೀದಿ ಮತ್ತು ಮದರಸಾವನ್ನು ನೆಲಸಮಗೊಳಿಸಿದೆ.
ಕಾರ್ಯಾಚರಣೆ ನಡೆಸುವುದಕ್ಕೂ ಮೊದಲು ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಮೂಲೆ ಮೂಲೆಯಲ್ಲಿ ಚೆಕ್ ಪೋಸ್ಟ್ ಅಳವಡಿಸಿದ್ದು, ನಗರದೊಳಕ್ಕೆ ಹೊರಗಿನವರು ಬರದಂತೆ ರಸ್ತೆಗಳನ್ನು ಬಂದ್ ಮಾಡಲಾಗಿತ್ತು.
ಕುಕ್ರೈಲ್ ನದಿಯ ದಂಡೆಯಲ್ಲಿ ನಿರ್ಮಿಸಲಾದ ಅಕ್ರಮ ಕಟ್ಟಡಗಳ ಮೇಲೆ ಬುಲ್ಡೋಜರ್ಗಳನ್ನು ಬಳಸಲಾಗಿದೆ ಎಂದು ಸ್ಥಳೀಯಾಡಳಿತ ಹೇಳಿದೆ. ಇಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 1169 ಮನೆಗಳು ಹಾಗೂ 101 ವಾಣಿಜ್ಯ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿ ಡಿಸೆಂಬರ್ 2023 ರಿಂದ ಅಕ್ರಮ ಕಟ್ಟಡಗಳನ್ನು ತೆರವು ಮಾಡುವ ಅಭಿಯಾನ ಕೈಗೊಳ್ಳಲಾಗಿತ್ತು. ಈವರೆಗೆ ಸುಮಾರು 24.5 ಎಕರೆ ಭೂಮಿಯಲ್ಲಿ ನಿರ್ಮಿಸಲಾಗಿದ್ದ 1800ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ.
ಕಂದಾಯ ಅಧಿಕಾರಿಗಳ ಸಮೀಕ್ಷೆಯಲ್ಲಿ ನದಿ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಡಗಳು ನಿರ್ಮಾಣವಾಗಿರುವುದು ಬೆಳಕಿಗೆ ಬಂದಿದೆ. ಯೋಗಿ ಆದಿತ್ಯನಾಥ್ ಸರ್ಕಾರ ಈ ಪ್ರದೇಶವನ್ನು ತೆರವುಗೊಳಿಸಿ ಪರಿಸರ ಪ್ರವಾಸೋದ್ಯಮದ ಕೇಂದ್ರವನ್ನಾಗಿ ಮಾಡಲಿದೆ. ಲಕ್ನೋ ಮೃಗಾಲಯವನ್ನು ಅದೇ ಸ್ಥಳಕ್ಕೆ ಸ್ಥಳಾಂತರಿಸುವ ಯೋಜನೆ ಇದೆ. ಉತ್ತರ ಪ್ರದೇಶ ರಾಜ್ಯ ಸರ್ಕಾರ ಕುಕ್ರೆಲ್ ನದಿ ಪುನರುಜ್ಜೀವನಕ್ಕಾಗಿ ಹೈಕೋರ್ಟ್ ನಿಂದ ಸುಪ್ರೀಂ ಕೋರ್ಟ್ ವರೆಗೆ ಹೋರಾಟ ನಡೆಸಿತ್ತು.
“The demolition work of illegal buildings on the river bed of Kukrail river in Akbarnagar has been completed,” officials of the Lucknow Development Authority (LDA) on June 19 said.“Around 1,169 illegal residential properties and more than 100 commercial properties were demolished using heavy machinery, including bulldozers,” they said.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 09:38 pm
Mangalore Correspondent
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm