ಬ್ರೇಕಿಂಗ್ ನ್ಯೂಸ್
21-06-24 11:35 am HK News Desk ದೇಶ - ವಿದೇಶ
ನವದೆಹಲಿ, ಜೂನ್.21: ಯುಜಿಸಿ ನಡೆಸುವ ನೀಟ್ ಮತ್ತು ನೆಟ್ ಪರೀಕ್ಷೆಯಲ್ಲಿ ಪೇಪರ್ ಸೋರಿಕೆ ಮತ್ತು ಅಕ್ರಮದ ವಿವಾದದ ನಡುವೆ ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) ಕಾರ್ಯ ನಿರ್ವಹಣೆ ಬಗ್ಗೆ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಯುಜಿಸಿ ನೆಟ್ ಪರೀಕ್ಷೆ ರದ್ದತಿ ಮತ್ತು ನೀಟ್ ಪರೀಕ್ಷೆಯಲ್ಲಿ ಆಗಿರುವ ಅಕ್ರಮಗಳ ವಿರುದ್ಧ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ನಿವಾಸದ ಹೊರಗೆ ಗುರುವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಪ್ರಧಾನ್, ಅಕ್ರಮದ ಘಟನೆಗಳು ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಉತ್ತೀರ್ಣರಾದ ವಿದ್ಯಾರ್ಥಿಗಳ ಸಾಧನೆಗಳನ್ನು ಮರೆಮಾಡಬಾರದು. ಯಾರು ತಪ್ಪು ಮಾಡಿದ್ದಾರೋ ಅವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಯಾವುದೇ ಎನ್ಟಿಎ ಅಧಿಕಾರಿಗಳ ತಪ್ಪಿತಸ್ಥರು ಎಂದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದರೆ, ನಮ್ಮ ವ್ಯವಸ್ಥೆ ಮತ್ತು ಕಾನೂನುಗಳ ನಮಗೆ ನಂಬಿಕೆ ಇಟ್ಟುಕೊಳ್ಳಿ. ಯಾವುದೇ ಅಕ್ರಮಗಳು ಅಥವಾ ದುಷ್ಕೃತ್ಯಗಳನ್ನು ಸರ್ಕಾರವು ಸಹಿಸುವುದಿಲ್ಲ. ಈ ವಿಷಯವನ್ನು ರಾಜಕೀಯಗೊಳಿಸದಂತೆ ವಿರೋಧ ಪಕ್ಷಗಳನ್ನು ಒತ್ತಾಯಿಸಿದರು.
ನೀಟ್ ಪರೀಕ್ಷೆ MBBS, BDS, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್ಗಳ ಪ್ರವೇಶಕ್ಕಾಗಿ NTA ದೇಶಾದ್ಯಂತ ನಡೆಸುವ ನಿರ್ಣಾಯಕ ಪರೀಕ್ಷೆಯಾಗಿದೆ. ಮೇ 5 ರಂದು 4,750 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಜೂನ್ 14 ರಂದು ಫಲಿತಾಂಶದ ನಿರೀಕ್ಷೆಯಿತ್ತು. ಆದರೆ, ಜೂನ್ 4ರಂದು ಲೋಕಸಭೆ ಫಲಿತಾಂಶ ದಿನವೇ ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಇದರಲ್ಲಿ 67 ವಿದ್ಯಾರ್ಥಿಗಳು ಪೂರ್ಣವಾಗಿ 720 ಅಂಕಗಳನ್ನು ಗಳಿಸಿರುವುದು ಭಾರೀ ಅಕ್ರಮದ ಬಗ್ಗೆ ಅನುಮಾನ ಹುಟ್ಟಿಸಿದೆ. ಅದರಲ್ಲೂ ಹೆಚ್ಚು ಅಂಕ ಗಳಿಸಿದವರ ಪೈಕಿ ಆರು ಮಂದಿ ಹರಿಯಾಣದ ಫರೀದಾಬಾದ್ನ ಒಂದೇ ಕೇಂದ್ರದವರು.
ನೀಟ್ ಪರೀಕ್ಷೆಯಲ್ಲಿ ಪೇಪರ್ ಸೋರಿಕೆಯಾಗಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ. ಎನ್ ಟಿಎಯಲ್ಲಿ ಭ್ರಷ್ಟಾಚಾರದ ಆರೋಪಗಳು ಆಧಾರ ರಹಿತವಾಗಿವೆ. ಇದು ಅತ್ಯಂತ ವಿಶ್ವಾಸಾರ್ಹ ಸಂಸ್ಥೆಯಾಗಿದೆ ಎಂದು ಧರ್ಮನ್ ಪ್ರಧಾನ್ ಜೂನ್ 13 ರಂದು ಹೇಳಿದ್ದರು. ಯುಜಿಸಿ-ನೆಟ್ ಪರೀಕ್ಷೆ ರದ್ದತಿ ಬಗ್ಗೆಯೂ ಪ್ರತಿಕ್ರಿಯಿಸಿದ ಪ್ರಧಾನ್, ಡಾಕ್ನೆಟ್ನಲ್ಲಿ ಪೇಪರ್ ಸೋರಿಕೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
Facing mounting pressure over the irregularities in the NEET exam, union education minister Dharmendra Pradhan on Thursday said that the Centre is forming a high-level committee to investigate the functioning of the National Testing Agency.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm