ಬ್ರೇಕಿಂಗ್ ನ್ಯೂಸ್
25-06-24 02:56 pm HK News Desk ದೇಶ - ವಿದೇಶ
ಅಯೋಧ್ಯೆ, ಜೂನ್ 25: ಜನವರಿ 22ರಂದು ತರಾತುರಿಯಲ್ಲಿ ಲೋಕಾರ್ಪಣೆಗೊಂಡಿದ್ದ ಪ್ರಭು ಶ್ರೀರಾಮಚಂದ್ರನ ಅಪೂರ್ವ ಮಂದಿರದ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆ ಆಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಎರಡು ದಿನಗಳ ಹಿಂದೆ ಶನಿವಾರ ರಾತ್ರಿ ಮೊದಲ ಮಳೆಗೇ ಸೋರಿಕೆ ಆಗಿರುವುದನ್ನು ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಖಚಿತಪಡಿಸಿದ್ದಾರೆ.
ವಿಷಯ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಎಚ್ಚೆತ್ತುಕೊಂಡ ಮಂದಿರ ನಿರ್ವಹಣಾ ಸಿಬ್ಬಂದಿ ಗರ್ಭಗುಡಿಯ ಮೇಲ್ಚಾವಣಿ ಸರಿಪಡಿಸಲು ಕ್ರಮ ಕೈಗೊಂಡಿದ್ದಾರೆ. ಸೋರಿಕೆ ದೃಢಪಡಿಸಿರುವ ಮಂದಿರ ನಿರ್ಮಾಣ ಉಸ್ತುವಾರಿ ಹೊತ್ತಿದ್ದ ನೃಪೇಂದ್ರ ಮಿಶ್ರಾ, ''ಗುರು ಮಂಟಪ ಇರುವ ಮೊದಲ ಮಹಡಿಗೆ ಯಾವುದೇ ಮೇಲ್ಚಾವಣಿ ಇಲ್ಲ. ಹೀಗಾಗಿ ಮಳೆ ನೀರು ತುಂಬಿಕೊಂಡು ಗರ್ಭಗುಡಿಯ ಮೂಲಕ ಸೋರಿಕೆಯಾಗಿದೆ. ಶೀಘ್ರವೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಮೊದಲ ಮಹಡಿಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಅದು ಈ ವರ್ಷದ ಜುಲೈ ವೇಳೆಗೆ ಅಂತ್ಯಗೊಳ್ಳಲಿದೆ. ಡಿಸೆಂಬರ್ ಕೊನೆಗೆ ದೇವಸ್ಥಾನ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಮಿಶ್ರಾ ತಿಳಿಸಿದ್ದಾರೆ. ಮೇಲ್ಛಾವಣಿಯನ್ನು ತುರ್ತು ದುರಸ್ತಿಗೊಳಿಸಲು ಮತ್ತು ಅದನ್ನು ವಾಟರ್‌ಫ್ರೂಫ್ ಮಾಡುವಂತೆ ಸೂಚನೆ ನೀಡಿದ್ದಾರೆ.
ಬಾಲರಾಮನ ವಿಗ್ರಹದ ಮುಂದೆ ಅರ್ಚಕರು ಕೂರುವ ಸ್ಥಳದಲ್ಲೇ ಮಳೆ ನೀರು ಸೋರಿಕೆಯಾಗುತ್ತಿದೆ. ಜತೆಗೆ ವಿಐಪಿ ದರ್ಶನಕ್ಕಾಗಿ ಜನರು ಬರುವ ಸ್ಥಳದಲ್ಲಿಯೂ ನೀರು ಬೀಳುತ್ತಿದೆ ಎಂದು ಅರ್ಚಕರು ತಿಳಿಸಿದ್ದಾರೆ. ದೇಶದ ಮೂಲೆ ಮೂಲೆಯಿಂದ ಬಂದ ಎಂಜಿನಿಯರ್‌ಗಳು ರಾಮ ಮಂದಿರವನ್ನು ನಿರ್ಮಿಸುತ್ತಿರುವುದು ಬಹಳ ಅಚ್ಚರಿ ಮೂಡಿಸುತ್ತಿದೆ. ಜನವರಿ 22ರಂದು ಮಂದಿರವನ್ನು ಉದ್ಘಾಟಿಸಲಾಗಿತ್ತು. ಆದರೆ ಮಳೆ ಬಂದರೆ ಛಾವಣಿ ಸೋರಲಿದೆ ಎಂದು ಒಬ್ಬರಿಗೂ ತಿಳಿಯಲಿಲ್ಲ. ವಿಶ್ವ ಪ್ರಸಿದ್ಧ ದೇವಸ್ಥಾನದ ಛಾವಣಿ ಸೋರುತ್ತಿರುವುದು ಅಚ್ಚರಿಯ ವಿಷಯ. ಇದು ಏಕೆ ಆಯಿತು? ಅಷ್ಟು ದೊಡ್ಡ ಎಂಜಿನಿಯರ್‌ಗಳ ಹಾಜರಿಯಲ್ಲಿ ಇಂತಹ ಘಟನೆ ನಡೆಯುತ್ತಿರುವುದು ದೊಡ್ಡ ತಪ್ಪು" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Water was leaking from the roof of the sanctum sanctorum at the Ram temple after the first heavy showers since it was opened to the public, chief priest of Ram Janmabhoomi temple Acharya Satyendra Das said on Monday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm