ಬ್ರೇಕಿಂಗ್ ನ್ಯೂಸ್
04-07-24 05:57 pm HK News Desk ದೇಶ - ವಿದೇಶ
ರಾಂಚಿ, ಜುಲೈ 4: ಜಾರ್ಖಂಡ್ 13ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೈಲಿನಿಂದ ಹೊರಬಂದ ನಾಲ್ಕೇ ದಿನದಲ್ಲಿ ಮತ್ತೆ ಅಧಿಕಾರ ಗಿಟ್ಟಿಸಿದ ಸೊರೇನ್ ಅವರಿಗೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಪ್ರಮಾಣ ವಚನ ಬೋಧಿಸಿದರು.
ನಿನ್ನೆಯಷ್ಟೇ ಚಂಪೈ ಸೊರೆನ್ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಮತ್ತು ಆರ್ಜೆಡಿ ಮುಖಂಡ ಸತ್ಯಾನಂದ್ ಭೋಕ್ತಾ ಅವರೊಂದಿಗೆ ರಾಜಭವನಕ್ಕೆ ತೆರಳಿ ರಾಜಿನಾಮೆ ನೀಡಿದ್ದರು.
ಭೂಹಗರಣ, ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನಿನಲ್ಲಿ ಜೈಲಿನಿಂದ ಹೊರಗೆ ಬಂದಿರುವ ಹೇಮಂತ್ ಸೊರೇನ್ ಮತ್ತೆ ಅಧಿಕಾರಕ್ಕೇರಲು ತನ್ನ ಪರವಾಗಿದ್ದ ಚಂಪೈ ಸೊರೇನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದರು.
ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜೈಲು ಸೇರಿದ್ದ ಸೊರೇನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿದ ಜೂನ್ 28 ರಂದು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಜನವರಿ 31 ರಂದು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಂಧನಕ್ಕೂ ಮುನ್ನ ಸೊರೇನ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೊರೇನ್ ಜೈಲಿನಿಂದ ಹೊರಬಂದ ಕೂಡಲೇ ಜುಲೈ 2ರಂದು ಸಭೆ ಸೇರಿದ್ದ ಶಾಸಕರು ಸೊರೇನ್ ಅವರನ್ನೇ ತಮ್ಮ ಶಾಸಕಾಂಗ ನಾಯಕನಾಗಿ ಆಯ್ಕೆ ಮಾಡಿದ್ದರು.
ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದರೆ ಮತ್ತೆ ಜೈಲು ಸೇರುವ ಸಾಧ್ಯತೆಯಿದೆ.
Jharkhand chief minister Champai Soren resigned on Wednesday and Hemant Soren, who is out on bail in a money laundering case, staked claim to form the government, hours after leaders of the JMM-led alliance in the state unanimously elected him as the legislature party leader.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm