ಬ್ರೇಕಿಂಗ್ ನ್ಯೂಸ್
18-07-24 11:25 am HK News Desk ದೇಶ - ವಿದೇಶ
ಲಕ್ನೋ, ಜುಲೈ.18: ಇಸ್ಲಾಂಗೆ ಮತಾಂತರಗೊಂಡ ಹಿಂದು ಧರ್ಮದ ಯುವಕ ಮತ್ತು ಯುವತಿಯರಿಗೆ ಸಾಮೂಹಿಕ ವಿವಾಹ ನಡೆಸಲು ಅನುಮತಿ ನೀಡುವಂತೆ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ (ಐಎಂಸಿ) ಮಾಡಿದ್ದ ಪ್ರಸ್ತಾಪಕ್ಕೆ ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು ಸಾಮೂಹಿಕ ಮತಾಂತರ ಕಾರ್ಯಕ್ರಮ ವಿವಾದಕ್ಕೆ ಕಾರಣವಾಗಿದೆ.
ಐಎಂಸಿಯಿಂದ ಸರ್ಕಾರಿ ಶಾಲೆಯೊಂದರಲ್ಲಿ ಜುಲೈ 21ರಂದು ಸಾಮೂಹಿಕ ವಿವಾಹ ಮತ್ತು ಮತಾಂತರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿಂದು ಧರ್ಮದ ಐದು ಜೋಡಿಗಳನ್ನು ಇಸ್ಲಾಂ ಪದ್ಧತಿಯಂತೆ ನಿಕಾಹ್ ಮಾಡಿಸುವುದು ಯೋಜನೆಯಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದು ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದ್ದರಿಂದ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಐಎಂಸಿ ಮುಖ್ಯಸ್ಥ ಮೌಲಾನಾ ತೌಕೀರ್ ರಜಾ ಖಾನ್ ಪ್ರತಿಕ್ರಿಯೆ ನೀಡಿದ್ದು ಜಿಲ್ಲಾಡಳಿತದ ಅನುಮತಿ ಪಡೆದ ನಂತರವೇ ಸಾಮೂಹಿಕ ನಿಕಾಹ್ ಸಮಾರಂಭವನ್ನು ಆಯೋಜಿಸಲಾಗುವುದು. ಈ ಬಗ್ಗೆ ಆಡಳಿತದಿಂದ ಅನುಮತಿ ಕೋರಿದ್ದೆವು, ಆದರೆ ನಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.
ಸಾಮೂಹಿಕ ನಿಕಾಹ್ ಮತ್ತು ಮತಾಂತರ ಕಾರ್ಯಕ್ರಮಗಳನ್ನು ಆಯೋಜಿಸಲು ಐಎಂಸಿ ಅನುಮತಿ ಕೇಳಿದ್ದು ಅವಕಾಶ ನೀಡಲಾಗಿಲ್ಲ ಎಂದು ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಹೇಳಿದ್ದಾರೆ.
ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವಕ-ಯುವತಿಯರಿಗೆ ನಿಕಾಹ್ ನಡೆಸಲಿದ್ದೇವೆ. ಮೊದಲ ಹಂತದಲ್ಲಿ ಐದು ಜೋಡಿಗಳ ವಿವಾಹ ನಡೆಸಲಾಗುವುದು ಎಂದು ಐಎಂಸಿ ಮುಖ್ಯಸ್ಥ ಖಾನ್ ತಿಳಿಸಿದ್ದು ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಜುಲೈ 21ರಂದು ಬೆಳಗ್ಗೆ 11 ಗಂಟೆಗೆ ಖಲೀಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಾಮೂಹಿಕ ನಿಕಾಹ್ ಸಮಾರಂಭ ನಡೆಯಲಿದೆ ಎಂದು ಖಾನ್ ಹೇಳಿದ್ದರು. ಖಾನ್ ವಿರುದ್ಧ ಮಂಗಳವಾರ ಬರೇಲಿಯಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು.
The Ittehad-e-Millat Council (IMC) has said that it would not hold the mass marriage ceremony of those who converted to Islam in Bareilly after the district administration denied permission.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm