ಬ್ರೇಕಿಂಗ್ ನ್ಯೂಸ್
28-07-24 02:45 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 28: ದೆಹಲಿಯ ಹಳೆ ರಾಜಿಂದರ್ ನಗರದಲ್ಲಿರುವ ರಾವ್ಸ್ ಐಎಎಸ್ ಸ್ಟಡಿ ಸರ್ಕಲ್ನ ನೆಲಮಹಡಿಗೆ ಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಖಡಕ್ ಕ್ರಮ ಕೈಗೊಂಡಿದ್ದಾರೆ. ರಾಜಿಂದರ್ ನಗರ ಠಾಣೆ ಪೊಲೀಸರು ಕೋಚಿಂಗ್ ಕೇಂದ್ರದ ವಿರುದ್ಧ ಪ್ರಕರಣ ದಾಖಲಿಸಿದ್ದು, ಮಾಲೀಕ ಹಾಗು ಸಂಯೋಜಕರನ್ನು ಬಂಧಿಸಿದ್ದಾರೆ.
ನೀರು ತುಂಬಿದ ನೆಲಮಾಳಿಗೆಯಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿಗಳನ್ನು ಶ್ರೇಯಾ ಯಾದವ್ (ಅಂಬೇಡ್ಕರ್ ನಗರ, ಉತ್ತರ ಪ್ರದೇಶ), ತಾನ್ಯಾ ಸೋನಿ (ತೆಲಂಗಾಣ) ಮತ್ತು ನವೀನ್ ಡೆಲ್ವಿನ್ (ಎರ್ನಾಕುಲಂ, ಕೇರಳ) ಎಂದು ಗುರುತಿಸಲಾಗಿದೆ.





"ಕೋಚಿಂಗ್ ಸೆಂಟರ್ ವಿರುದ್ಧ ಸೆಕ್ಷನ್ 105, 106 (1), 152, 290 ಮತ್ತು 35ರ ಅಡಿಯಲ್ಲಿ ರಾಜಿಂದರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕೋಚಿಂಗ್ ಕೇಂದ್ರದ ಮಾಲೀಕರು, ಸಂಯೋಜಕರು ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ದೆಹಲಿ ಕೇಂದ್ರ ಡಿಸಿಪಿ ಎಂ.ಹರ್ಷವರ್ಧನ್ ಮಾಹಿತಿ ನೀಡಿದರು.
"ನೆಲಮಾಳಿಗೆಯಲ್ಲಿ ನೀರು ತುಂಬುತ್ತಿರುವ ಬಗ್ಗೆ ಮಾಹಿತಿ ಪಡೆದ ನಂತರ ರಾತ್ರಿಯಿಂದಲೇ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ದೆಹಲಿ ಪೊಲೀಸ್, ದೆಹಲಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಎನ್‌ಡಿಆರ್‌ಎಫ್ ತಂಡಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಈ ಸಂದರ್ಭದಲ್ಲಿ ಮೂರು ವಿದ್ಯಾರ್ಥಿಗಳ ಮೃತದೇಹಗಳನ್ನು ಪತ್ತೆ ಹಚ್ಚಿದ್ದು, ಕುಟುಂಬದವರಿಗೆ ಮಾಹಿತಿ ನೀಡಲಾಯಿತು" ಎಂದು ಡಿಸಿಪಿ ತಿಳಿಸಿದರು.
ನೆಲಮಾಳಿಗೆಯು ಸುಮಾರು 12 ಅಡಿಗಳಷ್ಟು ನೀರಿನಿಂದ ತುಂಬಿಕೊಂಡಿತ್ತು. ಮಳೆ ಮತ್ತು ಚರಂಡಿ ನೀರು ದಿಢೀರ್ ತುಂಬಿದ್ದರಿಂದ ಗ್ರಂಥಾಲಯದಲ್ಲಿ ಮೂವರು ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದರು.
After the death of a UPSC student due to an electric shock, three more died just because water flooded the basement of Rao IAS academy. See how poor the drainage system of Delhi is. The capital with the poor drainage and electricity system is taking the lives of innocents. Yet no… pic.twitter.com/ULab3PIIdD
— Shubham Sharma (@Shubham_fd) July 28, 2024
Three civil services aspirants died after the basement of a coaching centre in Delhi's Old Rajinder Nagar flooded due to heavy rain. UPSC aspirants held a night-long protest, demanding immediate action from the authorities following the incident at the coaching institute.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm