ಬ್ರೇಕಿಂಗ್ ನ್ಯೂಸ್
01-08-24 02:10 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 1: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿಯೇ ಅತ್ಯಂತ ಹಿಂದುಳಿದ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠ, SC, ST ಒಳ ಮೀಸಲಾತಿ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ. ಹೆಚ್ಚು ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡುವುದನ್ನು ಖಚಿತ ಪಡಿಸಿಕೊಳ್ಳಲು ರಾಜ್ಯಗಳು ಎಸ್‌ಸಿ ಮತ್ತು ಎಸ್‌ಟಿಗಳಲ್ಲಿಯೇ ಒಳ ಮೀಸಲಾತಿ ನೀಡಬಹುದು ಮತ್ತು ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಈ ಮೀಸಲಾತಿ ಜಾರಿಗೆ ತರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಏಳು ನ್ಯಾಯಮೂರ್ತಿಗಳ ಪೈಕಿ ಆರು ಮಂದಿ ಒಳಮೀಸಲಾತಿಯ ಪರ ತೀರ್ಪು ನೀಡಿದ್ದು, ಒಬ್ಬರು ಮಾತ್ರ(ನ್ಯಾ. ಬೇಲಾ ತ್ರಿವೇದಿ) ಒಳ ಮೀಸಲಾತಿ ವಿರುದ್ಧವಾಗಿ ತೀರ್ಪು ನೀಡಿದ್ದಾರೆ. ಹಾಗಾಗಿ 6:1 ರ ಅನುಪಾತದಡಿ, ಉಪ ವರ್ಗೀಕರಣ ಆಧಾರಿತ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಬಹುಮತದ ತೀರ್ಪು ಈ ಹಿಂದೆ ಒಳ ಮೀಸಲಾತಿಯನ್ನು ತಿರಸ್ಕರಿಸಿದ್ದ ಇವಿ ಚಿನ್ನಯ್ಯ ವರ್ಸಸ್ ಆಂಧ್ರಪ್ರದೇಶ ಪ್ರಕರಣದಲ್ಲಿ ಐವರು ನ್ಯಾಯಾಧೀಶರ ಸಂವಿಧಾನ ಪೀಠ ನೀಡಿದ್ದ 2004 ರ ತೀರ್ಪನ್ನು ರದ್ದುಗೊಳಿಸಿದೆ. ಮೀಸಲಾತಿ ವರ್ಗದ ಸಮುದಾಯಗಳ ಒಳ ಮೀಸಲಾತಿ ಒಳಗೊಂಡಿರುವ ಪಂಜಾಬ್ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ(ಸೇವೆಗಳಲ್ಲಿ ಮೀಸಲಾತಿ) ಕಾಯಿದೆ, 2006 ರ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈ ತೀರ್ಪು ಪ್ರಕಟಿಸಿದೆ.
The Supreme Court on Thursday said individual States’ decision to provide preferential allotment of reservation benefits to the most backward groups or “the untouchables among the untouchables” will not amount to tinkering with the power of the Parliament to include or exclude Scheduled Castes or Scheduled Tribes from the Presidential list.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm