ಬ್ರೇಕಿಂಗ್ ನ್ಯೂಸ್
16-08-24 08:32 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.16: ಬಾಂಗ್ಲಾ ಸರ್ಕಾರದ ಹಂಗಾಮಿ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರು ಪ್ರಧಾನಿ ಮೋದಿಗೆ ಕರೆ ಮಾಡಿದ್ದು ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ರಕ್ಷಿಸುವುದಾಗಿ ಭರವಸೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಾಂಗ್ಲಾದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾದ ಮೊಹಮ್ಮದ್ ಯೂನಸ್ ತಮಗೆ ಕರೆ ಮಾಡಿದ್ದು ಬಾಂಗ್ಲಾದಲ್ಲಿ ಹಿಂದೂಗಳಿಗೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆಂದು ಮೋದಿ ಟ್ವೀಟ್ ನಲ್ಲಿ ಹೇಳಿದ್ದಾರೆ.
ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದರಲ್ಲದೆ, ಅಲ್ಲಿನ ಸ್ಥಿತಿ ಶೀಘ್ರದಲ್ಲೇ ಸಹಜ ಸ್ಥಿತಿಗೆ ಮರಳುತ್ತದೆ ಎಂದು ಆಶಿಸುವುದಾಗಿ ಹೇಳಿದ್ದರು. ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದ್ದೇನೆ. ಅಲ್ಲಿನ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ಹೇಳಿಕೊಂಡಿದ್ದಾರೆ. ಪ್ರಜಾಸತ್ತಾತ್ಮಕ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತ ಬೆಂಬಲಿಸುವುದಾಗಿ ಅವರಿಗೆ ತಿಳಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಬಾಂಗ್ಲಾ ಸರ್ಕಾರದ ಮುಖ್ಯಸ್ಥರು ಬಾಂಗ್ಲಾದೇಶದ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ರಕ್ಷಣೆ ಮತ್ತು ಭದ್ರತೆಯ ಬಗ್ಗೆ ಭರವಸೆ ನೀಡಿದರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಯೂನಸ್ ಅವರು ರಾಜಧಾನಿ ಢಾಕಾದಲ್ಲಿರುವ ಢಾಕೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಅಲ್ಲಿನ ಹಿಂದೂಗಳೊಂದಿಗೆ ಮಾತನಾಡಿದ್ದರು. ಇತ್ತೀಚಿನ ಹಿಂಸಾಚಾರ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಮೇಲೆ ಹಲ್ಲೆ ನಡೆಸಿದವರನ್ನು ಶಿಕ್ಷಿಸುವುದಾಗಿ ಅವರು ಭರವಸೆ ನೀಡಿದ್ದಾರೆ.
Prime Minister of India Narendra Modi announced on Friday that he had received a phone call from Muhammad Yunus, the head of Bangladesh’s caretaker government, assuring New Delhi of the “protection, safety, and security” of Hindus in the country. This conversation comes in the wake of escalating violence in Bangladesh, where Hindu communities have been targeted following the resignation and flight of Prime Minister Sheikh Hasina.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm