ಬ್ರೇಕಿಂಗ್ ನ್ಯೂಸ್
18-08-24 05:46 pm HK News Desk ದೇಶ - ವಿದೇಶ
ಕೊಝಿಕ್ಕೋಡ್, ಆ 18: ಬ್ಯಾಂಕ್ ಮ್ಯಾನೇಜರ್ ಒಬ್ಬ ತನ್ನ ಶಾಖೆಯಲ್ಲಿ ಗಿರವಿ ಇಟ್ಟಿದ್ದ 17 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಆರೋಪಿಯನ್ನು ತಮಿಳುನಾಡಿನ ಮೆಟ್ಟುಪಾಳ್ಯಂ ಪತಿ ಸ್ಟ್ರೀಟ್ ನಿವಾಸಿ ಮಾಧಾ ಜಯಕುಮಾರ್ (34) ಎಂದು ಗುರುತಿಸಲಾಗಿದೆ.
ಜಯಕುಮಾರ್ ಬ್ಯಾಂಕ್ ಆಫ್ ಮಹಾರಾಷ್ಟ್ರದ ವಡಕರ ಶಾಖೆಯಲ್ಲಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದ. ಜಯಕುಮಾರ್ 26 ಕೆಜಿಗಳಷ್ಟು ಚಿನ್ನಾಭರಣದೊಂದಿಗೆ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ. ಶಾಖೆಯಲ್ಲಿ ಮರು ಮೌಲ್ಯಮಾಪನ ಪ್ರಕ್ರಿಯೆ ನಡೆಸುತ್ತಿರುವ ಸಂದರ್ಭದಲ್ಲಿ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಗ್ರಾಹಕರು ಗಿರವಿ ಇಟ್ಟಿದ್ದ ಅಸಲಿ ಚಿನ್ನವನ್ನು ನಕಲಿ ಚಿನ್ನದಿಂದ ಬದಲಾಯಿಸಿರುವುದು ಗೊತ್ತಾಗಿದೆ. ಈ ಸಂಬಂಧ ವಡಕರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬ್ಯಾಂಕ್ನ ನೂತನ ವ್ಯವಸ್ಥಾಪಕ ವಿ. ಇರ್ಷಾದ್ ಈ ಅಕ್ರಮವನ್ನು ಬಯಲಿಗೆಳೆದಿದ್ದಾರೆ.
ಕಳೆದ ಮೂರು ವರ್ಷಗಳಿಂದ ವಡಕರ ಶಾಖೆಯ ವ್ಯವಸ್ಥಾಪಕರಾಗಿದ್ದ ಮಾಧಾ ಜಯಕುಮಾರ್ ಅವರನ್ನು ಇತ್ತೀಚೆಗೆ ಜುಲೈನಲ್ಲಿ ಎರ್ನಾಕುಲಂನ ಪಲರಿವಟ್ಟಂ ಶಾಖೆಗೆ ವರ್ಗಾಯಿಸಲಾಗಿತ್ತು. ಆದರೆ ಆ ಶಾಖೆಯ ಕರ್ತವ್ಯಕ್ಕೆ ಹಾಜರಾಗಿಲ್ಲ. ಕಳೆದ ಜೂನ್ 13 ರಿಂದ ಜುಲೈ 6, 2024 ರ ನಡುವೆ ಗ್ರಾಹಕರು ಗಿರವಿ ಇಟ್ಟಿದ್ದ 42 ಖಾತೆಗಳಿಗೆ ಸಂಬಂಧಿಸಿದ ಚಿನ್ನವನ್ನು ಕದ್ದೊಯ್ಯಲಾಗಿದೆ. ವಡಕರ ವೃತ್ತ ನಿರೀಕ್ಷಕ ಸುನೀಲ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಸೆಕ್ಷನ್ 409 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ
A bank manager allegedly absconded with gold worth more than Rs 17 crore pledged in a Bank of Maharashtra branch in Kerala's Kozhikode replacing the same with fake gold. The accused, identified as Madha Jayakumar (34), a resident of Mettupalayam Pathi Street in Tamil Nadu, served as the manager of the Bank of Maharashtra's Vadakara branch. Jayakumar allegedly disappeared with over 26 kilograms of gold, which was discovered missing during a re-appraisal process at the branch.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm