ಬ್ರೇಕಿಂಗ್ ನ್ಯೂಸ್
20-08-24 03:23 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 20: ಕೊಲ್ಕೊತ್ತಾದಲ್ಲಿ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ದೇಶಾದ್ಯಂತ ಕಳವಳ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಿದ್ದು, ಆರೋಗ್ಯ ಸೇವಾ ಕೇಂದ್ರಗಳಲ್ಲಿ ಭದ್ರತೆ ಬಗ್ಗೆ ಏಕರೂಪದ ಪ್ರೋಟೋಕಾಲ್ ಜಾರಿಗೆ ತರುವ ಬಗ್ಗೆ ಶಿಫಾರಸುಗಳನ್ನು ನೀಡಲು ಹತ್ತು ಮಂದಿಯ ಟಾಸ್ಕ್ ಫೋರ್ಸ್ ಕಮಿಟಿಯನ್ನು ನೇಮಕ ಮಾಡುವುದಾಗಿ ಹೇಳಿದೆ.
ಪಶ್ಚಿಮ ಬಂಗಾಳದ ಮಹಿಳಾ ವೈದ್ಯೆಯ ಕೊಲೆ ಪ್ರಕರಣದ ಕುರಿತ ವಿಚಾರಣೆ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠವು ಈ ಅಭಿಪ್ರಾಯ ಪಟ್ಟಿದೆ. ವೈದ್ಯರನ್ನು ಒಳಗೊಂಡ ಹತ್ತು ಮಂದಿಯ ಕಮಿಟಿಯು, ಸೇವಾ ಕೇಂದ್ರಗಳಲ್ಲಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಸುರಕ್ಷೆ ಬಗ್ಗೆ ಏಕರೂಪದ ಮಾರ್ಗದರ್ಶಿ ಸೂತ್ರಗಳನ್ನು ನೀಡುವಂತೆ ಹೇಳಿದೆ. ಆರೋಗ್ಯ ಸೇವೆ ನಿರತ ಮಹಿಳಾ ವೈದ್ಯರ ಸುರಕ್ಷೆ ಬಗ್ಗೆ ಖಾತರಿಪಡಿಸುವುದು ದೇಶದ ಆದ್ಯತೆಯಾಗಿದ್ದು, ದೇಶ ಮತ್ತೊಂದು ಈ ರೀತಿಯ ಅತ್ಯಾಚಾರ, ಕೊಲೆ ಘಟನೆಯನ್ನು ನೋಡಲು ಬಯಸುವುದಿಲ್ಲ ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.
ಹತ್ತು ಮಂದಿಯ ಸಮಿತಿ ಮೂರು ವಾರಗಳಲ್ಲಿ ಈ ಕುರಿತು ಶಿಫಾರಸುಗಳನ್ನು ಒಳಗೊಂಡ ಮಧ್ಯಂತರ ವರದಿಯನ್ನು ಕೋರ್ಟಿಗೆ ಸಲ್ಲಿಸಲಿದೆ. ಅಂತಿಮ ವರದಿ ಇನ್ನೆರಡು ತಿಂಗಳಲ್ಲಿ ಸಲ್ಲಿಕೆಯಾಗುವ ನಿರೀಕ್ಷೆಯಿದೆ. ವಿಚಾರಣೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಸರಕಾರದ ನಡೆಯನ್ನು ಟೀಕಿಸಿದ್ದು, ಪೊಲೀಸರು ಎಫ್ಐಆರ್ ಮಾಡುವಾಗ ವಿಳಂಬ ಮಾಡಿದ್ದೇಕೆ ಮತ್ತು ಘಟನೆ ಕುರಿತು ಆಸ್ಪತ್ರೆ ಆಡಳಿತದ ವರ್ತನೆಯನ್ನು ಪ್ರಶ್ನೆ ಮಾಡಿದೆ. ಕೊಲ್ಕತಾ ಘಟನೆ ಹಿನ್ನೆಲೆಯಲ್ಲಿ ದೇಶಾದ್ಯಂತ ಆರೋಗ್ಯ ಕಾರ್ಯಕರ್ತರು, ವೈದ್ಯರು ಪ್ರತಿಭಟನೆ, ಕ್ಯಾಂಡಲ್ ಮಾರ್ಚ್ ನಡೆಸಿದ್ದು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಇದೇ ವೇಳೆ, ಕೊಲ್ಕೊತ್ತಾದ ಆರ್.ಜಿ ಕಾರ್ ಆಸ್ಪತ್ರೆಗೆ ಸಿಐಎಸ್ಎಫ್ ಮತ್ತು ಸಿಆರ್ ಪಿಎಫ್ ಭದ್ರತೆಯನ್ನು ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ವೈದ್ಯರು ಪ್ರತಿಭಟನೆ ಕೈಬಿಟ್ಟು ತಮ್ಮ ಕರ್ತವ್ಯಕ್ಕೆ ಮರಳುವಂತೆ ಕೇಳಿಕೊಂಡಿದೆ. ಅಲ್ಲದೆ, ಪೊಲೀಸರು ಎಫ್ಐಆರ್ ಹಾಕುವುದಕ್ಕೆ ಮರುದಿನ ಮಧ್ಯರಾತ್ರಿ ವರೆಗೆ ಯಾಕೆ ಕಾಯಬೇಕಾಯಿತು. ಆರಂಭದಲ್ಲಿ ಆಸ್ಪತ್ರೆ ಅಧಿಕಾರಿಗಳು ಆತ್ಮಹತ್ಯೆ ಎಂದು ಬಿಂಬಿಸಿದ್ದು ಯಾಕೆ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಆಸ್ಪತ್ರೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ.
Amid escalating nationwide protests over the rape and murder of a trainee doctor at Kolkata’s RG Kar Medical College and Hospital, the Supreme Court of India, led by Chief Justice of India DY Chandrachud, has initiated a suo motu case to address the incident. The court has constituted a National Task Force, including Surgeon Vice Admiral RK Sarin and Doctor Nageshwar Reddy of the Asian Institute of Gastroenterology, to oversee the investigation and recommend measures to prevent future occurrences.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm