ಬ್ರೇಕಿಂಗ್ ನ್ಯೂಸ್
21-08-24 10:27 pm HK News Desk ದೇಶ - ವಿದೇಶ
ಅಮರಾವತಿ, ಆ 21: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್ ಸ್ಫೋಟ ಸಂಭವಿಸಿ 17 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಸುಮಾರು 41 ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ ಎಂದು ಜಿಲ್ಲಾಧಿಕಾರಿ ವಿಜಯ ಕೃಷ್ಣನ್ ತಿಳಿಸಿದ್ದಾರೆ.
ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಸ್ಫೋಟ ಸಂಭವಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಎನ್‌ಟಿಆರ್ ಆಸ್ಪತ್ರೆಗೆ ರವಾನಿಸಲಾಗಿದೆ.


ಕಾರ್ಮಿಕರು ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ನಡೆದ ಸ್ಫೋಟದಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದಟ್ಟ ಹೊಗೆ ಆವರಿಸಿದೆ. ಘಟನೆ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಇನ್ನೂ ಅವಘಡ ಸಂಭವಿಸಿದ ವೇಳೆ ಕರ್ಖಾನೆ ಘಟಕದಲ್ಲೇ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಸುಮಾರು 1,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಅತಿದೊಡ್ಡ ಫಾರ್ಮಾ ಕಂಪನಿಗಳಲ್ಲಿ ಇದು ಸಹ ಒಂದಾಗಿದೆ ಎಂದು ವರದಿಯಾಗಿದೆ.
ಇನ್ನೂ ಘಟನೆ ಬಳಿಕ ಕಾರ್ಖಾನೆ ಮುಂದೆ ಜಮಾಯಿಸಿದ ಕಾರ್ಮಿಕರು ಮೃತ ಸಂತ್ರಸ್ತರ ಕುಟುಂಬಗಳಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರ ನೀಡಬೇಕು ಹಾಗೂ ರಿಯಾಕ್ಟರ್ ಸ್ಫೋಟಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.
At least 17 people died and 41 were injured after an explosion in Andhra Pradesh's Anakapalle. The explosion took place at the Achutapuram Special Economic Zone.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am