ಬ್ರೇಕಿಂಗ್ ನ್ಯೂಸ್
23-08-24 09:29 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.23: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿದ ಬಳಿಕದ ಬೆಳವಣಿಗೆ, ಮುಖ್ಯಮಂತ್ರಿ ರಾಜಿನಾಮೆಗೆ ವಿಪಕ್ಷಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಪಕ್ಷದ ಹೈಕಮಾಂಡ್ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ, ಎಲ್ಲ ರೀತಿಯ ಹೋರಾಟ ನಡೆಸುವುದಕ್ಕೂ ಅನುಮತಿ ನೀಡಿದ್ದಾರೆ.
ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯೇ ಅಸಾಂವಿಧಾನಿಕ. ನಾವು ಕೋರ್ಟ್ ಮತ್ತು ಕಾನೂನು ಮೇಲೆ ಗೌರವ ಇಟ್ಟಿದ್ದೇವೆ, ಸಂವಿಧಾನದ ಮೇಲೆ ನಂಬಿಕೆ ಇರಿಸಿದ್ದೇವೆ. ಸರಕಾರ ಅಸ್ಥಿರಗೊಳಿಸುವ ಪ್ರಯತ್ನವನ್ನು ನಾವು ಒಗ್ಗಟ್ಟಿನಿಂದ ಎದುರಿಸುತ್ತೇವೆ ಎಂದು ಹೇಳಿದ್ದಾರೆ. ಈ ಬಗ್ಗೆ ರಾಷ್ಟ್ರಪತಿ ಭೇಟಿ ಮಾಡುತ್ತೀರಾ ಎಂಬ ಪ್ರಶ್ನೆಗೆ, ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ, ಕಾದು ನೋಡುತ್ತಿದ್ದೇವೆ ಎಂದರು.
ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ಮೊದಲಾಗಿ ನಮ್ಮ ಪರವಾಗಿ ನಿಂತ ಪಕ್ಷದ ಹೈಕಮಾಂಡ್ ನಾಯಕರಿಗೆ ಅಭಿನಂದನೆ ಹೇಳುತ್ತೇನೆ. ರಾಜ್ಯದಲ್ಲಾದ ಎಲ್ಲ ಬೆಳವಣಿಗೆ ಬಗ್ಗೆಯೂ ಪಕ್ಷದ ನಾಯಕರಿಗೆ ವಿವರಣೆ ನೀಡಿದ್ದೇವೆ. ನಮ್ಮ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾವು ಈ ನೆಲದ ಕಾನೂನು, ಕೋರ್ಟ್ ಬಗ್ಗೆ ನಂಬಿಕೆ ಇರಿಸಿದ್ದೇವೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸುರ್ಜೇವಾಲಾ, ವೇಣುಗೋಪಾಲ್ ಅವರಿಗೆ ಥ್ಯಾಂಕ್ಸ್ ಹೇಳುತ್ತೇನೆ ಎಂದು ಹೇಳಿದರು.
ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಪಕ್ಷದ ನಾಯಕರ ಜೊತೆಗೆ ಸಭೆಯನ್ನು ನಡೆಸಿದ್ದೇವೆ. ಸರ್ಕಾರವನ್ನು ಅಭದ್ರಗೊಳಿಸಲು ಪ್ರಯತ್ನದ ಬಗ್ಗೆ ಮನದಟ್ಟು ಮಾಡಿದ್ದೇವೆ. ಬಡವರಿಗೋಸ್ಕರ ಐದು ಗ್ಯಾರಂಟಿಗಳನ್ನು ಕೊಡುತ್ತಿದ್ದು ಇಡೀ ದೇಶದ ಗಮನ ಸೆಳೆದಿದೆ. ಇದಕ್ಕಾಗಿ ಸರ್ಕಾರವನ್ನು ಅಸ್ಥಿರಗೊಳಿಸಲು ನೋಡುತ್ತಿದ್ದಾರೆ. ಹೈಕಮಾಂಡ್ ನಾಯಕರು ಒಗ್ಗಟ್ಟಿನಿಂದ ನಿಮ್ಮ ಜೊತೆಗಿದ್ದೇವೆ ಎಂದು ಅಭಯ ನೀಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಜೊತೆಗೆ ಪಕ್ಷ ಇದೆಯೆಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದರಿಂದ ಲೋಕಾಯುಕ್ತ ಅಥವಾ ಇನ್ನಾವುದೇ ತನಿಖಾ ಸಂಸ್ಥೆ ಎಫ್ಐಆರ್ ದಾಖಲು ಮಾಡಿದರೆ, ಹುದ್ದೆ ಬಿಟ್ಟು ಕೊಡಬೇಕಾದೀತು ಎನ್ನುವ ಚರ್ಚೆಯ ನಡುವಲ್ಲೇ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜೊತೆಗೆ ದೆಹಲಿಗೆ ತೆರಳಿ ಪಕ್ಷದ ನಾಯಕರ ಸಹಮತವನ್ನು ಪಡೆದಿದ್ದಾರೆ. ಸದ್ಯಕ್ಕೆ ಆಗಸ್ಟ್ 29ರ ವರೆಗೆ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದ್ದರೂ, ಕೋರ್ಟಿನಲ್ಲಿ ಪ್ರಾಸಿಕ್ಯೂಶನ್ ಬಗ್ಗೆ ಅನುಮತಿ ನೀಡಿದರೂ ಮುಖ್ಯಮಂತ್ರಿ ಹುದ್ದೆಗೆ ಯಾವುದೇ ತೊಂದರೆ ಮಾಡಿಕೊಳ್ಳಬೇಕಿಲ್ಲ ಎನ್ನುವ ಸಂದೇಶವನ್ನು ಸಿದ್ದರಾಮಯ್ಯ ಅವರಿಗೆ ದೆಹಲಿ ಹೈಕಮಾಂಡ್ ನೀಡಿರುವಂತಿದೆ.
Karnataka Chief Minister Siddaramaiah and Deputy Chief Minister D K Shivakumar arrived in the national capital on Friday (August 23, 2024) for crucial meetings with top Congress leaders.
22-11-24 05:16 pm
HK News Desk
Kodava News, children : ಕೊಡವ ಜನಸಂಖ್ಯೆ ಹೆಚ್ಚಿಸ...
22-11-24 03:53 pm
Dinesh Gundu Rao, Bangalore: ಸರ್ಕಾರಿ ಆಸ್ಪತ್ರೆ...
21-11-24 09:32 pm
Bangalore Fire showroom: ಇಲೆಕ್ಟ್ರಿಕ್ ವಾಹನ ಶೋರ...
20-11-24 09:57 pm
Liquor Bandh, Mangalore: ನ.20ರ ಮದ್ಯ ವ್ಯಾಪಾರ ಬ...
19-11-24 11:05 pm
18-11-24 03:54 pm
HK News Desk
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
ಭಾರತೀಯ ರೈಲ್ವೇ ಹೊಸ ಇತಿಹಾಸದತ್ತ ಹೆಜ್ಜೆ ; ವಿದ್ಯುತ...
14-11-24 11:11 pm
ಅಮೆರಿಕದ ಗುಪ್ತಚರ ಸಂಸ್ಥೆ ಮುಖ್ಯಸ್ಥರಾಗಿ ಹಿಂದು ಮಹಿ...
14-11-24 05:58 pm
ಸುದೀರ್ಘ 18 ವರ್ಷಗಳ ಹಿಂದೆ ಕೊಲೆಯಾದ ಕೊಡಗಿನ ಸಫಿಯಾಗ...
12-11-24 09:00 pm
22-11-24 11:55 am
Mangalore Correspondent
Kundapura Accident, Udupi: ಕುಂಭಾಶಿ ; ಹೆದ್ದಾರಿ...
21-11-24 11:08 pm
Mangalore, Rev Hannibal Cabral, Rachitha Cabr...
21-11-24 09:57 pm
Mangalore, Belthangady, Elephant attack: ಬೆಳ್...
21-11-24 09:22 pm
Saket Rajan encounter, Vikram Gowda e counter...
21-11-24 06:19 pm
22-11-24 04:14 pm
Bangalore Correspondent
Belthangady, Mangalore, Crime : ಟೋರ್ನ್ ಜೀನ್ಸ್...
22-11-24 03:04 pm
Mangalore court, crime, Rape: ಅಜ್ಜಿ ಮನೆಯಲ್ಲಿ...
22-11-24 01:33 pm
Naxal leader Vikram Gowda Encounter, Ground R...
19-11-24 07:40 pm
Hassan Murder, Dowry; ಹಾಸನ ; ಗರ್ಭಿಣಿ ಪತ್ನಿಗೆ...
19-11-24 05:56 pm