ಬ್ರೇಕಿಂಗ್ ನ್ಯೂಸ್
28-08-24 01:26 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 28: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಈ ಸ್ಥಾನ ಅಲಂಕರಿಸಿದ ಅತಿ ಕಿರಿಯ ವ್ಯಕ್ತಿಯೆಂಬ ಗರಿಮೆಗೆ ಪಾತ್ರರಾಗಿದ್ದಾರೆ.
ಹಾಲಿ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿ ನವೆಂಬರ್ 30ರಂದು ಕೊನೆಗೊಳ್ಳಲಿದೆ. ಸತತ ಎರಡನೇ ಬಾರಿಗೆ ಹುದ್ದೆ ಅಲಂಕರಿಸಿದ್ದ ಅವರು ಮೂರನೇ ಅವಧಿಗೆ ಸ್ಪರ್ಧಿಸುವುದಿಲ್ಲ ಎಂದಿದ್ದರು. ಐಸಿಸಿ ಅಧ್ಯಕ್ಷರು ತಲಾ ಎರಡು ವರ್ಷಗಳ ಮೂರು ಅವಧಿಗೆ ಸ್ಥಾನದಲ್ಲಿ ಮುಂದುವರಿಯಲು ಅರ್ಹತೆ ಹೊಂದಿರುತ್ತಾರೆ. ಆದರೆ ನ್ಯೂಜಿಲೆಂಡ್ ಮೂಲದ ಗ್ರೆಗ್ ಬಾರ್ಕ್ಲೇ ನಾಲ್ಕು ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ. ಬಾರ್ಕ್ಲೇ 2020ರ ನವೆಂಬರ್ ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದರು.
ನಿಯಮಗಳ ಪ್ರಕಾರ, ಅಧ್ಯಕ್ಷರ ಚುನಾವಣೆಯಲ್ಲಿ 16 ಮತಗಳಿದ್ದು, ಗೆಲ್ಲಲು 9 ಮತಗಳ (51%) ಸರಳ ಬಹುಮತದ ಅಗತ್ಯವಿದೆ. ಈ ಹಿಂದೆ, ಅಧ್ಯಕ್ಷರಾಗಲು ಹಾಲಿ ಇರುವವರು ಮೂರನೇ ಎರಡರಷ್ಟು ಬಹುಮತವನ್ನು ಹೊಂದಿರಬೇಕಾಗಿತ್ತು. ಅಲ್ಲದೆ, ಪ್ರಸಕ್ತ ನಿರ್ದೇಶಕರಾಗಿರುವವರು 2024ರ ಆಗಸ್ಟ್ 27ರೊಳಗೆ ಮುಂದಿನ ಅಧ್ಯಕ್ಷ ಗಾದಿಗೆ ನಾಮನಿರ್ದೇಶನ ಸಲ್ಲಿಸಬೇಕಿತ್ತು. ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ, ಚುನಾವಣೆ ನಡೆಯಲಿತ್ತು. ಆದರೆ ಜಯ್ ಶಾ ಒಬ್ಬರ ಹೆಸರು ಮಾತ್ರ ನಾಮನಿರ್ದೇಶನ ಆಗಿದ್ದರಿಂದ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರ ಅಧಿಕಾರಾವಧಿ 2024ರ ಡಿಸೆಂಬರ್ 1ರಿಂದ ಪ್ರಾರಂಭವಾಗುತ್ತದೆ.
ಬಿಸಿಸಿಐ ಸೆಕ್ರಟರಿಯಾಗಿರುವ ಜಯ್ ಶಾ ಐಸಿಸಿ ಮಂಡಳಿಯಲ್ಲಿ ಅತ್ಯಂತ ಪ್ರಭಾವಶಾಲಿಯಾಗಿ ಬೆಳೆದಿದ್ದಾರೆ. ಹಾಲಿ ಐಸಿಸಿ ಮಂಡಳಿಯಲ್ಲಿ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಉಪ ಸಮಿತಿಯ ಮುಖ್ಯಸ್ಥರಿದ್ದಾರೆ. 16 ನಿರ್ದೇಶಕರಲ್ಲಿ ಹೆಚ್ಚಿನ ಸದಸ್ಯರೊಂದಿಗೆ ಉತ್ತಮ ಸಂಬಂಧವನ್ನೂ ಹೊಂದಿದ್ದಾರೆ. ಹೀಗಾಗಿ ಬಿಸಿಸಿಐ ಕಾರ್ಯದರ್ಶಿ ಸ್ಥಾನದ ಅವಧಿ ಒಂದು ವರ್ಷ ಇರುವಾಗಲೇ ಐಸಿಸಿ ಪಟ್ಟಕ್ಕೇರಿದ್ದಾರೆ. ಜಯ್ ಶಾ 35ನೇ ವಯಸ್ಸಿಗೆ ಐಸಿಸಿ ಅಧ್ಯಕ್ಷರಾಗಿದ್ದು ಐಸಿಸಿ ಇತಿಹಾಸದಲ್ಲಿ ಅತಿ ಕಿರಿಯ ಅಧ್ಯಕ್ಷ ಎಂಬ ಹೆಗ್ಗಳಿಕೆ ಪಡೆಯಲಿದ್ದಾರೆ. ಈ ಹಿಂದೆ ಭಾರತ ಮೂಲದ ಜಗಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್.ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ಐಸಿಸಿಯನ್ನು ಮುನ್ನಡೆಸಿದ್ದರು.
BCCI Secretary Jay Shah was elected unopposed as the new Chairman of the International Cricket Council (ICC). Shah, currently serving as the Secretary of the Board of Control for Cricket in India (BCCI), will officially assume the role on December 1, 2024. This election marks a significant milestone as Shah becomes the youngest person to lead the global cricket governing body.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm