ಬ್ರೇಕಿಂಗ್ ನ್ಯೂಸ್
01-09-24 03:03 pm HK News Desk ದೇಶ - ವಿದೇಶ
ನವದೆಹಲಿ, ಸೆ.1: ಸಸ್ಯಾಹಾರಿ ಎಂದು ಮಾರಾಟವಾಗುವ ಪತಂಜಲಿ ಬ್ರ‍್ಯಾಂಡ್‌ನ ಹರ್ಬಲ್ ಟೂತ್ ಪೌಡರ್ ‘ದಿವ್ಯ ಮಂಜನ್’ನಲ್ಲಿ ಮಾಂಸಾಹಾರಿ ಅಂಶಗಳಿವೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ಗೆ ದೂರು ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ಹೈಕೋರ್ಟ್ ಪತಂಜಲಿ ಕಂಪನಿ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ವಕೀಲ ಯತಿನ್ ಶರ್ಮಾ ಅವರು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಪತಂಜಲಿಯ ದಿವ್ಯ ಮಂಜನ್ ಪ್ಯಾಕೇಜಿಂಗ್ ಸಸ್ಯಾಹಾರಿ ಉತ್ಪನ್ನಗಳನ್ನು ಸೂಚಿಸುವ ಹಸಿರು ಚುಕ್ಕೆಯನ್ನು ಹೊಂದಿದೆ. ಹೀಗಾಗಿ ನಾನು ದೀರ್ಘಕಾಲದಿಂದ ಬಳಸುತ್ತಿದ್ದೇನೆ. ಆದರೆ ಈ ಹಲ್ಲಿನ ಪುಡಿಯಲ್ಲಿ ಸೆಪಿಯಾ ಅಫಿಷಿನಾಲಿಸ್ ಅಥವಾ ಮೀನಿನ ಸಾರ ಇದೆ ಎಂದು ಸಂಶೋಧನೆಯೊಂದು ಹೇಳಿದೆ.

ದಿವ್ಯ ಮಂಜನ್’ನಲ್ಲಿ ಸಮುದ್ರ ಫೆನ್ ಪ್ರಾಣಿ ಆಧಾರಿತ ಉತ್ಪನ್ನವಾಗಿದೆ ಎಂದು ರಾಮ್‌ದೇವ್ ಸ್ವತಃ ಯೂಟ್ಯೂಬ್ ವೀಡಿಯೊದಲ್ಲಿ ಒಪ್ಪಿಕೊಂಡಿದ್ದಾರೆ. ಇದನ್ನು ತಪ್ಪಾಗಿ ಪ್ಯಾಕೇಜ್ ಮಾಡಿದ್ದು ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯ ಉಲ್ಲಂಘನೆಯಾಗಿದೆ. ಇದರಿಂದ ಗ್ರಾಹಕರ ಧಾರ್ಮಿಕ ನಂಬಿಕೆಗಳು ಹಾನಿಯಾಗಿದೆ. ಈ ಸಂಶೋಧನೆಯು ತನಗೆ ಮತ್ತು ಕುಟುಂಬಕ್ಕೆ ವಿಶೇಷವಾಗಿ ನೋವು ನೀಡಿದೆ ಎಂದು ಶರ್ಮಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ದೆಹಲಿ ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್ ಮತ್ತು ಆಯುಷ್ ಸಚಿವಾಲಯ ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಿಗೆ ದೂರು ಸಲ್ಲಿಸಿದ್ದರೂ ಸಹ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.
ಅರ್ಜಿಯನ್ನು ಕೈಗೆತ್ತಿಕೊಂಡ ದೆಹಲಿ ಹೈಕೋರ್ಟ್ ಪತಂಜಲಿ ಆಯುರ್ವೇದ, ಬಾಬಾ ರಾಮ್‌ದೇವ್, ಕೇಂದ್ರ ಸರ್ಕಾರ ಮತ್ತು ಉತ್ಪನ್ನವನ್ನು ತಯಾರಿಸುವ ಪತಂಜಲಿಯ ದಿವ್ಯ ಫಾರ್ಮಸಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 28ರಂದು ನಿಗದಿಪಡಿಸಲಾಗಿದೆ.
In fresh legal trouble for Yoga guru Baba Ramdev, a plea has been filed in the Delhi High Court against his Patanjali Ayurved, alleging that the brand's herbal tooth powder, ‘Divya Manjan’, which is marketed as vegetarian, contains non-vegetarian ingredients.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am