ಬ್ರೇಕಿಂಗ್ ನ್ಯೂಸ್
01-09-24 07:57 pm HK News Desk ದೇಶ - ವಿದೇಶ
ಮುಂಬೈ, ಸೆ.1: ರಾಜ್‌ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತವನ್ನು ಪ್ರತಿಭಟಿಸಿ ವಿರೋಧ ಪಕ್ಷಗಳು ಮುಂಬೈ ನಗರದ ಗೇಟ್ ವೇ ಆಫ್ ಇಂಡಿಯಾ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಮತ್ತು ಶಿವಸೇನೆ ಉದ್ಧವ್ ಬಣದ ಕಾರ್ಯಕರ್ತರು ಸೇರಿ ಪ್ರತಿಭಟನಾ ಧರಣಿ ನಡೆಸಿದ್ದಾರೆ. ಮಾಜಿ ಸಿಎಂ ಉದ್ಧವ್ ಠಾಕ್ರೆ ಮಾತನಾಡಿ, ಮಹಾರಾಷ್ಟ್ರದ ಜನರು ಶಿವಾಜಿ ಪ್ರತಿಮೆ ಕುಸಿತವನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.
ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದರೂ ಕಾರ್ಯಕರ್ತರು ಬೃಹತ್ ಮೆರವಣಿಗೆ ನಡೆಸಿದ್ದಾರೆ. ಮಹಾ ವಿಕಾಸ್ ಅಘಾಡಿ ನೇತೃತ್ವದ ಪ್ರತಿಭಟನಾ ಮೆರವಣಿಗೆಯಲ್ಲಿ ಬೃಹತ್ ಸಂಖ್ಯೆಯ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯ ಕುಸಿತಕ್ಕಾಗಿ ಎಂವಿಎ ನಾಯಕರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡರು. ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಕ್ಷಮೆಯಾಚನೆಯನ್ನು ಒಂದು “ದುರಹಂಕಾರಕ್ಕೆ ಹೊಡೆತ” ಎಂದು ಬಣ್ಣಿಸಿದರು. ಆದರೆ ಶರದ್ ಪವಾರ್ ಈ ಪ್ರಕರಣ ಭ್ರಷ್ಟಾಚಾರಕ್ಕೆ ಉದಾಹರಣೆ ಎಂದು ಹೇಳಿದರು.
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಯಾಚನೆಯನ್ನು ಉಲ್ಲೇಖಿಸಿ, ಅದರಲ್ಲಿನ ದುರಹಂಕಾರವನ್ನು ನೀವು ಗಮನಿಸಿದ್ದೀರಾ? ಇದು ದುರಹಂಕಾರದ ಪರಮಾವಧಿ. ಪೌರಾಣಿಕ ಹಿನ್ನೆಲೆಯ ರಾಜನಿಗೆ ಆಗಿರುವ ಅವಮಾನವನ್ನು ಮಹಾರಾಷ್ಟ್ರದ ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಪ್ರತಿಪಾದಿಸಿದರು. ಪ್ರತಿಮೆ ಕುಸಿತ, ರಾಮ ಮಂದಿರದಲ್ಲಿನ ಸೋರಿಕೆ ಮತ್ತು ಹೊಸ ಸಂಸತ್ತಿನ ಸಂಕೀರ್ಣ ಸೋರಿಕೆಯನ್ನು ಮೋದಿಯ “ಗ್ಯಾರಂಟಿ” ಘೋಷಣೆಗೆ ಸಾಕ್ಷಿ ಅಣಕಿಸಿದರು.
“ಪ್ರಧಾನಿ ಯಾವುದಕ್ಕಾಗಿ ಕ್ಷಮೆ ಕೇಳುತ್ತಿದ್ದರು? ಎಂಟು ತಿಂಗಳ ಹಿಂದೆ ಅವರು ಉದ್ಘಾಟಿಸಿದ ಪ್ರತಿಮೆಗಾಗಿಯೇ? ಅದರಲ್ಲಿ ಆಗಿರುವ ಭ್ರಷ್ಟಾಚಾರಕ್ಕಾಗಿಯೇ? ಶಿವಾಜಿ ಮಹಾರಾಜರನ್ನು ಅವಮಾನಿಸಿದ ಶಕ್ತಿಗಳನ್ನು ಸೋಲಿಸಲು ಎಂವಿಎ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಮೆಯ ಕುಸಿತವು ಮಹಾರಾಷ್ಟ್ರದ ಆತ್ಮಕ್ಕೆ ಮಾಡಿದ ಅವಮಾನ ಎಂದು ಅವರು ಪ್ರತಿಪಾದಿಸಿದರು.
Congress spokesperson Pawan Khera said on Sunday that the collapse of Chhatrapati Shivaji Maharaj's statue in Maharashtra's Sindhudurg district has broken the hearts of people in the country who draw inspiration from the legendary warrior king. Addressing a press conference here, Khera accused Deputy Chief Minister Devendra Fadnavis of spreading fake narratives over the incident.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am