ಬ್ರೇಕಿಂಗ್ ನ್ಯೂಸ್
08-09-24 02:45 pm HK News Desk ದೇಶ - ವಿದೇಶ
ಕೊಲ್ಕತ್ತಾ, ಸೆ.8: ಕೊಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರ ನಿರ್ವಹಿಸಿದ ರೀತಿಯನ್ನು ಖಂಡಿಸಿ ಟಿಎಂಸಿ ರಾಜ್ಯಸಭಾ ಸದಸ್ಯ ಜವಾಹರ್ ಸಿರ್ಕಾರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಮಾಜಿ ಅಧಿಕಾರಿಯಾಗಿರುವ ಸಿರ್ಕಾರ್, 2021ರಲ್ಲಿ ಟಿಎಂಸಿ ಸೇರಿ ರಾಜ್ಯಭೆ ಸದಸ್ಯರಾಗಿದ್ದರು. ಅದಕ್ಕೂ ಹಿಂದೆ 2009ರಿಂದ 2012ರ ವರೆಗೆ ಕೇಂದ್ರ ಸರಕಾರದ ಸಾಂಸ್ಕೃತಿಕ ಕಾರ್ಯದರ್ಶಿಯಾಗಿದ್ದ ಸಿರ್ಕಾರ್, 2016ರಲ್ಲಿ ಪ್ರಸಾರ ಭಾರತಿ ಸಿಇಓ ಆಗಿದ್ದರು. ಸಿಇಓ ಸ್ಥಾನದ ಅವಧಿ ಮುಗಿಯಲು ನಾಲ್ಕು ತಿಂಗಳು ಇರುವಾಗಲೇ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಬಗ್ಗೆ ಮುನಿಸಿಕೊಂಡು ರಾಜಿನಾಮೆ ನೀಡಿದ್ದರು. ಇದೀಗ ಟಿಎಂಸಿ ಸದಸ್ಯತ್ವಕ್ಕೂ ರಾಜಿನಾಮೆ ನೀಡಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಸಿರ್ಕಾರ್ ಪತ್ರ ಬರೆದಿದ್ದಾರೆ.
ಇದೇ ವೇಳೆ, ಕೊಲ್ಕತ್ತಾ ಆರ್.ಕಾರ್ ವೈದ್ಯಕೀಯ ಆಸ್ಪತ್ರೆ ಎದುರು ಹಗಲು – ರಾತ್ರಿ ಪ್ರತಿಭಟನೆ ಮುಂದುವರಿದಿದ್ದು, ಕಲಾವಿದರು, ನಟ-ನಟಿಯರು, ಸಂಗೀತಕಾರರು, ಪೈಂಟರ್ ಬೇರೆ ಬೇರೆ ವೃತ್ತಿಯವರು ಕೂಡ ಪ್ರತಿಭಟನೆಗೆ ಕೈಜೋಡಿಸಿದ್ದಾರೆ. ಎರಡು ದಿನಗಳ ಹಿಂದೆ ಆರ್.ಕಾರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಸಂದೀಪ್ ಘೋಷ್ ನನ್ನು ಸಿಬಿಐ ಬಂಧಿಸಿದ್ದು, ಪ್ರಕರಣ ಸಂಬಂಧಿಸಿ ಹಲವರನ್ನು ವಶಕ್ಕೆ ಪಡೆದಿದೆ. ಆದರೂ ಕೊಲ್ಕತ್ತಾದಲ್ಲಿ ರಾತ್ರಿ ಹಗಲು ಪ್ರತಿಭಟನೆ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಪ್ರತಿಭಟನೆಯ ಕಾವು ಹೆಚ್ಚುತ್ತಿರುವುದು ಪಶ್ಚಿಮ ಬಂಗಾಳ ಸರಕಾರಕ್ಕೆ ಸವಾಲಾಗಿದೆ. ಕೊಲ್ಕತ್ತಾ ಘಟನೆ ಹಿನ್ನೆಲೆಯಲ್ಲಿ ಟಿಎಂಸಿ ಸರಕಾರ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆಯನ್ನೂ ಅಧಿವೇಶನದಲ್ಲಿ ಮಂಡಿಸಿದ್ದು ದೇಶದ ಗಮನ ಸೆಳೆದಿದೆ.
ಆಗಸ್ಟ್ 9ರಂದು ವೈದ್ಯಕೀಯ ಎಂಡಿ ವಿದ್ಯಾರ್ಥಿನಿಯನ್ನು ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ಕ್ರೂರವಾಗಿ ಅತ್ಯಾಚಾರಗೈದು ಕೊಲೆ ಮಾಡಲಾಗಿತ್ತು. ಕೃತ್ಯದ ಹಿನ್ನೆಲೆಯಲ್ಲಿ ದೇಶಾದ್ಯಂತ ವೈದ್ಯರ ಆಕ್ರೋಶ ವ್ಯಕ್ತವಾಗಿತ್ತು.
Trinamool Congress Rajya Sabha MP Jawhar Sircar on Sunday (September 8, 2024) wrote to Trinamool Congress chairperson and West Bengal CM Mamata Banerjee announcing his decision to resign as MP from the Upper House over the rape and murder of a post-graduate trainee doctor at R.G. Kar Medical College and Hospital and related corruption at the hospital.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am