ಬ್ರೇಕಿಂಗ್ ನ್ಯೂಸ್
08-09-24 11:07 pm HK News Desk ದೇಶ - ವಿದೇಶ
ನವದೆಹಲಿ, ಸೆ.8: ಅಮೇರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆ ಕಣ ರಂಗೇರಿದೆ. ಭಾರತೀಯ ಮೂಲದ ಕಮಲಾ ಹ್ಯಾರಿಸ್ ಈ ಬಾರಿಯ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಇದೇ ವೇಳೆ, ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಅಮೇರಿಕಾದಿಂದ ಸ್ಪೆಷಲ್ ಆಹ್ವಾನ ಬಂದಿರುವುದು ಕುತೂಹಲ ಮೂಡಿಸಿದೆ.
ಡಿಕೆ ಶಿವಕುಮಾರ್ ಭಾರತದಲ್ಲಿ ಮಾತ್ರವಲ್ಲ ಅಮೇರಿಕಾ ಚುನಾವಣೆ ವಿಚಾರದಲ್ಲಿಯೂ ಪ್ರಭಾವ ಬೀರಿದ್ದಾರಾ? ಅಲ್ಲಿಯ ಚುನಾವಣೆಗೂ ಡಿಕೆಶಿ ಟ್ರಬಲ್ ಶೂಟರ್ ಆಗಲಿದ್ದಾರಾ? ಎನ್ನುವ ಗುಸುಗುಸು ಶುರುವಾಗಿದೆ. ಆದರೆ, ಅಸಲಿ ವಿಚಾರವೆಂದರೆ ಡಿ.ಕೆ.ಶಿವಕುಮಾರ್ ಅವರಿಗೆ ಕಮಲಾ ಹ್ಯಾರಿಸ್ ಅವರಿಂದಲೇ ಆಹ್ವಾನ ಬಂದಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಕುಟುಂಬದೊಂದಿಗೆ ಭಾನುವಾರ ರಾತ್ರಿಯೇ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೇರಿಕಾಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ. ಅಮೇರಿಕಾದ ನಾರ್ಥ್ ಕ್ಯಾರೋಲಿನಾದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಕುಟುಂಬ ಭಾಗಿಯಾಗಲಿದೆ. ಒಂದು ವಾರ ಕಾಲ ಇವರು ಅಮೇರಿಕಾದಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ.
ಕಮಲಾ ಹ್ಯಾರಿಸ್ ಅವರು ಭಾರತ ಮೂಲದ ಕನ್ನಡಿಗರಿಗಾಗಿ ಖಾಸಗಿ ಕಾರ್ಯಕ್ರಮ ಆಯೋಜಿಸಿದ್ದು, ಇದರಲ್ಲಿ ಭಾಗವಹಿಸುವಂತೆ ಡಿಕೆಶಿಗೆ ಆಹ್ವಾನ ನೀಡಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಮೇರಿಕಾದತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಮಲಾ ಹ್ಯಾರಿಸ್ ಅವರ ತಾಯಿ ಶ್ಯಾಮಲಾ ಗೋಪಾಲನ್ ಅವರ ಟ್ರಸ್ಟ್‌ವೊಂದರ ಜೊತೆ ಡಿ.ಕೆ.ಶಿವಕುಮಾರ್ ನಂಟು ಹೊಂದಿದ್ದಾರೆ. ಈ ಟ್ರಸ್ಟ್‌ಗೆ ಡಿಕೆಶಿ ನೆರವು ಕೂಡ ನೀಡಿದ್ದರು ಎನ್ನಲಾಗಿದೆ. ಹಾಗಾಗಿ ಉಭಯ ನಾಯಕರು ಉತ್ತಮ ಬಾಂಧವ್ಯ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅಮೇರಿಕಾಗೆ ಬರುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ಕರೆ ನೀಡಿದ್ದಾರೆ.
ಪ್ರಜಾಪ್ರಭುತ್ವ ಕುರಿತಾದ ಸಂವಾದದಲ್ಲಿ ಕೂಡ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಬಳಿಕ ಚಿಕಾಗೋ ನಗರಕ್ಕೆ ಡಿಕೆಶಿ ಕುಟುಂಬ ಪ್ರಯಾಣ ಬೆಳೆಸಲಿದೆ. ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಕೂಡ ಭೇಟಿಯಾಗಿ, ಸೌಹಾರ್ದ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Karnataka Deputy Chief Minister DK Shivakumar on Sunday refuted reports of him meeting top US leaders in their country and clarified that he was going to Washington on a private visit with his family and not meeting anyone there.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm