ಬ್ರೇಕಿಂಗ್ ನ್ಯೂಸ್
20-09-24 04:42 pm HK News Desk ದೇಶ - ವಿದೇಶ
ನವದೆಹಲಿ, ಸೆ.20: ಕೋಟ್ಯಂತರ ಹಿಂದುಗಳ ಆರಾಧ್ಯ ದೇವಸ್ಥಾನ ತಿರುಪತಿಯಲ್ಲಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಜನ್ಯ ಕೊಬ್ಬು, ಮೀನಿನೆಣ್ಣೆ ಬಳಸಲಾಗಿತ್ತು ಎಂಬ ಮಾಹಿತಿ ಬಗ್ಗೆ ಸಮಗ್ರ ವರದಿ ನೀಡುವಂತೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಆಂಧ್ರಪ್ರದೇಶ ಸರ್ಕಾರಕ್ಕೆ ಕೇಳಿದ್ದಾರೆ.
ವೈಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಸಿಎಂ ಆಗಿದ್ದಾಗ ಲಡ್ಡು ತಯಾರಿಗೆ ಬಳಸಿದ ತುಪ್ಪದ ಮಾದರಿಗಳಲ್ಲಿ ಬೀಫ್ ಟಾಲೋ, ಮೀನಿನ ಎಣ್ಣೆ ಮತ್ತು ಹಂದಿ ಕೊಬ್ಬು ಇತ್ತು ಎಂಬ ಪ್ರಯೋಗಾಲಯ ವರದಿ ಬಗ್ಗೆ ಚಂದ್ರಬಾಬು ನಾಯ್ಡು ಮಾಹಿತಿ ಹೊರಗೆಡವಿದ್ದು ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಪ್ರಯೋಗಾಲಯ ವರದಿ ಬಗ್ಗೆ ಸಿಎಂ ಚಂದ್ರಬಾಬು ನಾಯ್ಡು ಮತ್ತು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಜಗನ್ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪುಣ್ಯಕ್ಷೇತ್ರ ತಿರುಪತಿ ದೇವಾಲಯವನ್ನು ಅಪವಿತ್ರಗೊಳಿಸಿದ್ದಾರೆ. 'ಸನಾತನ ಧರ್ಮ'ದ ಕೋಟ್ಯಂತರ ಭಕ್ತರನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.
)
ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂಜಯ್ ಬಂಡಿ ಇದನ್ನು "ಕ್ಷಮಿಸಲಾಗದ ಪಾಪ" ಎಂದು ಕರೆದಿದ್ದಾರೆ. ತುಪ್ಪದ ಕಲಬೆರಕೆ ಉದ್ದೇಶಕ್ಕಾಗಿ ಇತರ ಧರ್ಮೀಯರನ್ನು ತಿರುಪತಿ ಆಡಳಿತ ಮಂಡಳಿಗೆ ಸೇರಿಸಿಕೊಳ್ಳಲಾಗಿತ್ತೇ ಎಂದು ಪ್ರಶ್ನಿಸಿದ್ದಾರೆ. ಇದರ ಬಗ್ಗೆ ಮಾಜಿ ಸಿಎಂ ಜಗನ್ ರೆಡ್ಡಿ ಮತ್ತು ಹಿಂದಿನ ತಿರುಮಲ ಆಡಳಿತ ಮಂಡಳಿ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
Union Health Minister J.P. Nadda on Friday (September 20, 2024) said he had spoken to Andhra Pradesh Chief Minister N. Chandrababu Naidu and sought a full report on the Tirupati laddu issue. Mr. Nadda said the matter would be examined by the Food Safety and Standards Authority of India (FSSAI) and suitable action taken.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am