ಬ್ರೇಕಿಂಗ್ ನ್ಯೂಸ್
23-09-24 07:01 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.23: ತಿರುಪತಿ ಲಡ್ಡು ಪ್ರಾಣಿಜನ್ಯ ಕೊಬ್ಬಿನ ಕಾರಣಕ್ಕೆ ವಿವಾದಕ್ಕೀಡಾಗಿರುವಾಗಲೇ ತಿರುಪತಿ ಲಡ್ಡಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾದ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.
ಖಮ್ಮಂ ಜಿಲ್ಲೆಯ ಗ್ರಾಮಾಂತರ ಮಂಡಲ ವ್ಯಾಪ್ತಿಯ ಗೊಲ್ಲಗುಡೆಂ ಪಂಚಾಯತ್ ಕಾರ್ತಿಕೇಯ ಟೌನ್ಶಿಪ್ನ ನಿವಾಸಿ ಪದ್ಮಾವತಿ ಎಂಬವರು ಸೆಪ್ಟೆಂಬರ್ 19 ರಂದು ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಹಿಂತಿರುಗುವಾಗ ತನ್ನ ಸಂಬಂಧಿಕರಿಗೆ ಹಂಚಿಕೊಳ್ಳಲು ಶ್ರೀವಾರಿ ಲಡ್ಡು ಪ್ರಸಾದವನ್ನು ತಂದಿದ್ದರು. ಭಾನುವಾರ (ಸೆಪ್ಟೆಂಬರ್ 22) ಪ್ರಸಾದ ಹಂಚಲು ಲಡ್ಡು ತೆಗೆದು ನೋಡಿದಾಗ ಅದರಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿದೆ.
ಲಡ್ಡುವಿನಲ್ಲಿ ಗೋಡಂಬಿ, ಒಣ ದ್ರಾಕ್ಷಿ, ಬಾದಾಮಿ ಜೊತೆಗೆ ಗುಟ್ಕಾ ಪ್ಯಾಕೆಟ್ ಕೂಡ ಇರುವುದು ಆಶ್ಚರ್ಯವಾಗಿದೆ. ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿ, ಅದರ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಹೀಗೆ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಸಿಕ್ಕಿರುವುದು ಇದೇ ಮೊದಲಲ್ಲ. 2012ರಲ್ಲೂ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿತ್ತು.
ಈಗಾಗಲೇ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಕಲಬೆರಕೆ ಆಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಡುವೆ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿರುವುದು ಮತ್ತೆ ಕಳಪೆ ಗುಣಮಟ್ಟದ ಲಡ್ಡು ತಯಾರಿ ಚರ್ಚೆಗೆ ಗ್ರಾಸವಾಗಿದೆ.
A devotee from Gollagudem, Khammam district, Donthu Padmavathi, has levelled an allegation that she found a piece of a gutka packet and traces of tobacco in a laddu prasadam that she had brought from Tirumala. Padmavathi, a resident of Karteekeya Township in Khammam Rural mandal, said she had visited Tirumala on September 19 for darshan of Lord Venkateshwara Swamy.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
27-01-26 06:46 am
HK News Desk
ಪ್ರವಾಸಿಗರನ್ನು ವಿಹಾರಕ್ಕೆ ಒಯ್ಯುತ್ತಿದ್ದ ದೋಣಿ ಸಮು...
26-01-26 05:05 pm
ರೌಡಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ; ಪೊಲೀಸರ ಕೈಗೆ...
24-01-26 11:23 pm
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
27-01-26 12:22 pm
HK News Desk
ಗಣರಾಜ್ಯೋತ್ಸವ ಸಂದರ್ಭದಲ್ಲೇ ರಾಜಸ್ಥಾನದಲ್ಲಿ ಹತ್ತು...
26-01-26 03:03 pm
ಅಮಾನ್ಯ ನೋಟಿನ 400 ಕೋಟಿ ದರೋಡೆ ಪ್ರಕರಣ ; ಗುಜರಾತ್...
25-01-26 10:11 pm
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm