ಬ್ರೇಕಿಂಗ್ ನ್ಯೂಸ್
02-10-24 02:10 pm HK News Desk ದೇಶ - ವಿದೇಶ
ಚೆನ್ನೈ, ಅ.2: ಕೊಯಮತ್ತೂರಿನ ಇಶಾ ಫೌಂಡೇಶನ್ ಆಶ್ರಮದ ಮೇಲೆ 150 ಪೊಲೀಸರು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಇಶಾ ಫೌಂಡೇಶನ್ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳ ವರದಿಯನ್ನು ನೀಡುವಂತೆ ಮದ್ರಾಸ್ ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾಳಿ ನಡೆಸಲಾಗಿದೆ.
ನಿವೃತ್ತ ಪ್ರಾಧ್ಯಾಪಕ ಡಾ. ಕಾಮರಾಜ್ ಹೈಕೋರ್ಟ್ ನಲ್ಲಿ ದೂರು ಸಲ್ಲಿಸಿ, ತನ್ನ ಇಬ್ಬರು ಪುತ್ರಿಯರಾದ ಗೀತಾ ಕಾಮರಾಜ್ (42) ಮತ್ತು ಲತಾ ಕಾಮರಾಜ್ (39) ಅವರನ್ನು ಬಲವಂತವಾಗಿ ಫೌಂಡೇಶನ್‌ನಲ್ಲಿ ಇರಿಸಲಾಗಿದೆ ಎಂದು ಆರೋಪಿಸಿದ್ದರು. ಇಶಾ ಫೌಂಡೇಶನ್ ತನ್ನಿಬ್ಬರು ಮಕ್ಕಳನ್ನು ಸನ್ಯಾಸಿಗಳನ್ನಾಗಿ ಮಾಡಿ ಅವರ ಕುಟುಂಬದೊಂದಿಗೆ ಸಂಪರ್ಕ ಕಡಿದುಕೊಳ್ಳುವಂತೆ ಮಾಡಿದೆ ಎಂದು ಪ್ರಾಧ್ಯಾಪಕರು ಆರೋಪಿಸಿದ್ದಾರೆ.


ನ್ಯಾಯಮೂರ್ತಿ ಎಸ್.ಎಂ. ಸುಬ್ರಮಣ್ಯಂ ಮತ್ತು ವಿ.ಶಿವಗಣನಂ ಅವರ ದ್ವಿಸದಸ್ಯ ಪೀಠವು ತಮ್ಮ ಮಗಳಿಗೆ ಮದುವೆ ಮಾಡಿ ಸುಖಮಯ ಜೀವನ ನೀಡಿದ ಸದ್ಗುರುಗಳು ಇತರ ಯುವತಿಯರಿಗೆ ತಲೆ ಬೋಳಿಸಿಕೊಂಡು ತಪಸ್ಸಿನ ಜೀವನ ನಡೆಸುವಂತೆ ಪ್ರೇರೇಪಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿತ್ತು. ಇಶಾ ಫೌಂಡೇಶನ್ ವೈದ್ಯರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ತನ್ನ ಒಬ್ಬಳು ಪುತ್ರಿಯನ್ನು ಜೂನ್ 15ರಂದು ಫೋನಲ್ಲಿ ಸಂಪರ್ಕಿಸಿದಾಗ, ಆಕೆ ಉಪವಾಸ ವ್ರತದಲ್ಲಿದ್ದು ಅದೇ ರೀತಿ ಸಾಯುವುದಕ್ಕಾಗಿ ದೇಹತ್ಯಾಗ ಮಾಡಲು ನಿರ್ಧರಿಸಿದ್ದಾಗಿ ತಿಳಿಸಿದ್ದಳೆಂದು ಕಾಮರಾಜ್ ದೂರಿನಲ್ಲಿ ತಿಳಿಸಿದ್ದಾರೆ. ಹೈಕೋರ್ಟ್ ವಿಚಾರಣೆ ಬಳಿಕ ಕೊಯಂಬತ್ತೂರು ಪೊಲೀಸರಿಗೆ ಫೌಂಡೇಶನ್ ಕುರಿತ ಆರೋಪ, ವಾಸ್ತವ ಸ್ಥಿತಿಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು.
ನಾವು ಯಾರಿಗೂ ಸೂಚನೆ ಕೊಡುವುದಿಲ್ಲ
ಈ ನಡುವೆ, ಇಶಾ ಫೌಂಡೇಶನ್ ಕಡೆಯಿಂದ ಮಂಗಳವಾರ ಹೇಳಿಕೆ ನೀಡಲಾಗಿದ್ದು ನಾವು ಯಾರನ್ನೂ ಮದುವೆಯಾಗಿ ಅಥವಾ ಸನ್ಯಾಸಿ ಆಗಿ ಎಂದು ಹೇಳುವುದಿಲ್ಲ. ಜನರಿಗೆ ಯೋಗ, ಆಧ್ಯಾತ್ಮ ಬಗ್ಗೆ ತಿಳಿಸುವುದಕ್ಕಾಗಿ ಇಶಾ ಫೌಂಡೇಶನ್ ಅನ್ನು ಸದ್ಗುರು ಸ್ಥಾಪಿಸಿದ್ದಾರೆ. ಇಲ್ಲಿಗೆ ಬರುವ ವಯಸ್ಕರು ತಮ್ಮ ದಾರಿಯನ್ನು ಕಂಡುಕೊಳ್ಳಲು ಅವರೇ ಸ್ವತಂತ್ರರಿದ್ದಾರೆ. ನಾವು ಮದುವೆಯಾಗಿ ಅಥವಾ ಸನ್ಯಾಸಿಯಾಗಿ ಎಂದು ಯಾರಿಗೂ ಸೂಚಿಸುವುದಿಲ್ಲ. ಇವೆಲ್ಲ ವ್ಯಕ್ತಿಯ ವೈಯಕ್ತಿಕ ನಿರ್ಧಾರಗಳು. ಇಶಾ ಫೌಂಡೇಶನ್ ಸಾವಿರಾರು ಮಂದಿಗೆ ಆಶ್ರಯ ನೀಡಿದೆ. ಅವರೆಲ್ಲ ಸನ್ಯಾಸಿಗಳಲ್ಲ. ಕೆಲವರಷ್ಟೇ ಬ್ರಹ್ಮಚರ್ಯ ಅಥವಾ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಈಗ ವಿಷಯ ಕೋರ್ಟಿಗೆ ಹೋಗಿದ್ದು ಸತ್ಯ ಹೊರಬರಲಿದೆ. ಅನಗತ್ಯವಾಗಿ ವಿವಾದ ಸೃಷ್ಟಿಸುವುದಕ್ಕೆ ಕೊನೆ ಬೀಳಲಿದೆ ಎಂದು ತಿಳಿಸಿದ್ದಾರೆ.
Police personnel and officials of the Social Welfare Department conducted an inquiry at the Isha Yoga Center in Coimbatore on Tuesday, a day after the Madras High Court directed the police to submit a status report on the allegations raised by a petitioner against the Isha Foundation.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am