ಬ್ರೇಕಿಂಗ್ ನ್ಯೂಸ್
04-10-24 07:10 pm HK News Desk ದೇಶ - ವಿದೇಶ
ನವದೆಹಲಿ, ಅ.4: ತಿರುಪತಿ ದೇವಸ್ಥಾನದ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆಗೆ ಸಿಬಿಐ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ನೇಮಿಸಿ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಈ ವಿಷಯದ ಬಗ್ಗೆ ರಾಜಕೀಯ ಡ್ರಾಮವನ್ನು ಬಯಸುವುದಿಲ್ಲ, ಏಕೆಂದರೆ ಇದು ಪ್ರಪಂಚದಾದ್ಯಂತ ಇರುವ ಲಕ್ಷಾಂತರ ಭಕ್ತರ ನಂಬಿಕೆಯ ವಿಷಯವಾಗಿದೆ ಎಂದು ನ್ಯಾಯಪೀಠ ಹೇಳಿದೆ.
ಎಸ್‌ಐಟಿ ತಂಡವು ಇಬ್ಬರು ಸಿಬಿಐ ಅಧಿಕಾರಿಗಳು, ಇಬ್ಬರು ರಾಜ್ಯ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಆಹಾರ ನಿಯಂತ್ರಕ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಹಿರಿಯ ಅಧಿಕಾರಿಗಳನ್ನು ಒಳಗೊಂಡಿರುತ್ತದೆ. ಆರೋಪ ಮತ್ತು ಪ್ರತ್ಯಾರೋಪಗಳ ವಿಚಾರಕ್ಕೆ ಹೋಗುವುದಿಲ್ಲ. ನ್ಯಾಯಾಲಯವನ್ನು ರಾಜಕೀಯಕ್ಕೆ ಬಳಸಲು ನಾವು ಅನುಮತಿಸುವುದೂ ಇಲ್ಲ ಎಂದು ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರ ಪೀಠವು ಹೇಳಿದೆ.
ಈಗಾಗಲೇ ಆಂಧ್ರಪ್ರದೇಶ ರಾಜ್ಯ ಸರ್ಕಾರ ರಚಿಸಿರುವ ಎಸ್ಐಟಿ ತಂಡದ ಬಗ್ಗೆ ಯಾವುದೇ ಅನುಮಾನವಿಲ್ಲ. ಆದರೆ ಈ ವಿಷಯ ಕೋಟ್ಯಂತರ ಭಕ್ತರ ಭಾವನೆಗೆ ಸಂಬಂಧಿಸಿರುವ ಕಾರಣ ಸಿಬಿಐ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖಾ ತಂಡ ತನಿಖೆ ನಡೆಸುವುದು ಸೂಕ್ತ ಎಂದು ಪೀಠ ಹೇಳಿದೆ.
ನಾವು ಆರೋಪಗಳು ಮತ್ತು ಪ್ರತ್ಯಾರೋಪಗಳ ಒಳ ಹೊಕ್ಕಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇವೆ. ರಾಜಕೀಯ ಹಿನ್ನೆಲೆಯಲ್ಲಿ ನ್ಯಾಯಾಲಯವನ್ನು ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಆಂಧ್ರ ಪ್ರದೇಶದ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡೆಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಹಿಂದಿನ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಕಳಪೆ ಹಾಗೂ ಕಲಬೆರಕೆ ತುಪ್ಪ ಮತ್ತು ಸಾಮಗ್ರಿಗಳನ್ನು ಬಳಸಿ ಲಡ್ಡು ತಯಾರಿಸಿದೆ ಎಂದು ಹಾಲಿ ಸಿಎಂ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಆರೋಪಿಸಿತ್ತು. ಲಡ್ಡು ವಿಚಾರ ಆಂಧ್ರದಲ್ಲಿ ತೀವ್ರ ರಾಜಕೀಯ ಬಿರುಗಾಳಿ ಎಬ್ಬಿಸಿತ್ತು.
Stating that it will “not allow the court to be used as a political battleground”, the Supreme Court Friday ordered that a new “independent” Special Investigation Team (SIT) will probe into the allegations of adulterated ghee being used in laddus distributed at Andhra Pradesh’s Tirupati temple under the previous YSRCP government.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am