ಬ್ರೇಕಿಂಗ್ ನ್ಯೂಸ್
12-10-24 01:49 pm HK News Desk ದೇಶ - ವಿದೇಶ
ಕಾಸರಗೋಡು, ಅ.12: ಆಟೋ ರಿಕ್ಷಾ ಚಾಲಕ ಅಬ್ದುಲ್ ಸತ್ತಾರ್ ಆತ್ಮಹತ್ಯೆಗೆ ಸಂಬಂಧಿಸಿ ಆರೋಪಕ್ಕೆ ಒಳಗಾದ ಚಂದೇರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪಿ. ಅನೂಪ್ ಅವರನ್ನು ಕಾಸರಗೋಡು ಎಸ್ಪಿ ಅಮಾನತುಗೊಳಿಸಿದ್ದಾರೆ.
ಕಾಸರಗೋಡು ನಗರ ಠಾಣೆ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಪಿ. ಅನೂಪ್ ಅವರನ್ನು ಕರ್ತವ್ಯ ಲೋಪ ಆರೋಪದಲ್ಲಿ ಚಂದೇರ ಠಾಣೆಗೆ ವರ್ಗಾಯಿಸಲಾಗಿತ್ತು. ಸೋಮವಾರ ಆಟೋ ಚಾಲಕ ಅಬ್ದುಲ್ ಸತ್ತಾರ್ ರೈಲ್ವೇ ನಿಲ್ದಾಣ ಸಮೀಪದ ಕ್ವಾಟ್ರಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಕಾಸರಗೋಡು ನಗರದ ರಸ್ತೆಯಲ್ಲಿ ಸಾರ್ವಜನಿಕರ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದನ್ನು ಪ್ರಶ್ನಿಸಿ ಅಬ್ದುಲ್ ಸತ್ತಾರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾವನ್ನು ಅನೂಪ್ ನೇತೃತ್ವದ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದರು. ಆನಂತರ, ಆರೋಪಿ ಅಬ್ದುಲ್ ಸತ್ತಾರ್ ಠಾಣೆಗೆ ಹೋಗಿ ಆಟೋ ಕೊಡುವಂತೆ ಕೇಳಿಕೊಂಡರೂ ಬಿಟ್ಟು ಕೊಟ್ಟಿರಲಿಲ್ಲ. ಇದರಿಂದ ಬೇಸತ್ತ ಅಬ್ದುಲ್ ಸತ್ತಾರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
ಘಟನೆ ಬಗ್ಗೆ ಮುಸ್ಲಿಂ ಮುಖಂಡರಿಂದ ಆಕ್ರೋಶ ಕೇಳಿಬರುತ್ತಿದ್ದಂತೆ ತನಿಖೆ ನಡೆಸಿ ವರದಿ ನೀಡುವಂತೆ ಎಎಸ್ಪಿ ಬಾಲಕೃಷ್ಣನ್ ನಾಯರ್ ಗೆ ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಶಿಲ್ಪಾ ಸೂಚಿಸಿದ್ದರು. ವರದಿ ಪಡೆದ ಬಳಿಕ ಸಬ್ ಇನ್ಸ್ ಪೆಕ್ಟರ್ ಅನೂಪ್ ಅವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶ ಮಾಡಿದ್ದಾರೆ. ಅನೂಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಟೋ ಚಾಲಕರ ಸಂಘ, ಮುಸ್ಲಿಂ ರಾಜಕೀಯ ಮುಖಂಡರು, ಸಂಘಟನೆಗಳು ಒತ್ತಾಯಿಸಿದ್ದವು. ಆಟೋ ಚಾಲಕ ಸಾರ್ವಜನಿಕರ ಜೊತೆಗೆ ಅನುಚಿತವಾಗಿ ವರ್ತಿಸಿದ್ದಕ್ಕೆ ಆತನ ಕಾಲರ್ ಹಿಡಿದು ಪೊಲೀಸರು ವಶಕ್ಕೆ ಪಡೆದ ವಿಡಿಯೋ ಹರಿದಾಡಿತ್ತು. ಅದೇ ನೆಪದಲ್ಲಿ ಎಸ್ಐ ಅನೂಪ್ ವಿರುದ್ಧ ಕ್ರಮಕ್ಕೆ ಮುಸ್ಲಿಂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು.
In another heartbreaking case of police high-handedness, a veteran autorickshaw driver took his own life, driven by despair and in protest, after the Kasaragod Town Police Sub-Inspector refused to release his vehicle for five days over a petty offence.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am