ಬ್ರೇಕಿಂಗ್ ನ್ಯೂಸ್
25-10-24 03:03 pm HK News Desk ದೇಶ - ವಿದೇಶ
ಕಾಸರಗೋಡು, ಅ.25: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದು ಒಟ್ಟು ಎರಡು ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಶಾಲಾ ಶಿಕ್ಷಕಿ, ಪೆರ್ಲ ಮೂಲದ ಡಿವೈಎಫ್ಐ ನಾಯಕಿ ಸಚಿತಾ ರೈ ಅವರನ್ಜು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
12ಕ್ಕೂ ಹೆಚ್ಚು ಮಂದಿಗೆ ಸರ್ಕಾರಿ ಉದ್ಯೋಗ ಕೊಡುವುದಾಗಿ ವಂಚಿಸಿದ ಬಗ್ಗೆ ವಿವಿಧೆಡೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ವಿದ್ಯಾನಗರ ಪೊಲೀಸರು ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಆಕೆಯ ವಿರುದ್ಧ ಉಪ್ಪಿನಂಗಡಿ, ಬದಿಯಡ್ಕ, ಕುಂಬಳೆ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಸಚಿತಾ ರೈ ತಲೆಮರೆಸಿಕೊಂಡಿದ್ದರು. ಗುರುವಾರ ಸಂಜೆ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆಯಲು ಯತ್ನಿಸುತ್ತಿದ್ದಾಗಲೇ ಆಕೆಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಸಿಪಿಸಿಆರ್‌ಐ, ಕೇಂದ್ರೀಯ ವಿದ್ಯಾಲಯ, ಕರ್ನಾಟಕ ಅಬಕಾರಿ ಇಲಾಖೆ, ಅರಣ್ಯ ಇಲಾಖೆ, ಎಸ್‌ಬಿಐ ಮುಂತಾದ ವಿವಿಧ ಇಲಾಖೆ, ಬ್ಯಾಂಕುಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹಲವು ವ್ಯಕ್ತಿಗಳಿಂದ 10ರಿಂದ 20 ಲಕ್ಷದಷ್ಟು ಮೊತ್ತವನ್ನು ಸಚಿತಾ ಸಂಗ್ರಹಿಸಿದ್ದರು. ಕುಂಬಳೆ ಕಿದೂರಿನ ನಿಶ್ಮಿತಾ ಶೆಟ್ಟಿ ಎಂಬವರು ಮೊದಲ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಇತರ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಸಿಪಿಸಿಆರ್‌ಐನಲ್ಲಿ ಕೆಲಸ ಕೊಡಿಸುವುದಾಗಿ ಸಚಿತಾ ನಿಶ್ಮಿತಾ ಶೆಟ್ಟಿಗೆ ಸುಮಾರು 15 ಲಕ್ಷ ರೂಪಾಯಿ ವಂಚಿಸಿದ್ದಾರೆ. ಅಲ್ಲದೆ ಕೇಂದ್ರೀಯ ವಿದ್ಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ದೇಲಂಪಾಡಿಯ ಸುಚಿತ್ರಾ ರಾವ್ ಎಂಬವರಿಂದ 7,31,500 ರೂ. ವಂಚಿಸಿದ್ದಾರೆ. ಸಚಿತಾ ರೈ ಡಿವೈಎಫ್‌ಐ ಜಿಲ್ಲಾ ಸಮಿತಿಯ ಸದಸ್ಯೆಯಾಗಿದ್ದು, ಪೆರ್ಲ ಬಾಡೂರಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
The Vidyanagar police on Thursday evening arrested a school teacher accused of defrauding people by promising them jobs in exchange for large sums of money.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
03-10-26 01:00 pm
HK News Staffer
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
03-10-26 01:27 pm
HK News Staffer
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
03-10-26 03:41 pm
HK News Staffer
Mumbai police, gold chain: ಚಿನ್ನದ ಸರ ನುಂಗಿದ ಕ...
02-10-26 10:19 pm
ಕೊಲ್ಲೂರು ; ಬೀಡಾಡಿ ದನವನ್ನು ಕಾರಿನಲ್ಲಿ ತುಂಬಿಸಿಕೊ...
02-10-26 05:24 pm
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am