ಬ್ರೇಕಿಂಗ್ ನ್ಯೂಸ್
28-10-24 05:56 pm HK News Desk ದೇಶ - ವಿದೇಶ
ನವದೆಹಲಿ, ಅ.28: ಸಾಮಾಜಿಕ ಜಾಲತಾಣದಲ್ಲಿ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿಕೆಯಿತ್ತ ಇರಾನ್‌ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರ ಟ್ವಿಟರ್ ಖಾತೆಯನ್ನು ರದ್ದುಪಡಿಸಲಾಗಿದೆ.
ಇರಾನ್ ಮೇಲೆ ಇಸ್ರೇಲ್ ನಡೆಸಿರುವ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ಎಕ್ಸ್ ಖಾತೆಯನ್ನು ಸ್ಥಗಿತ ಮಾಡಲಾಗಿದೆ. ಖಮೇನಿ ಅವರು ತಮ್ಮ ಪೋಸ್ಟ್‌ನಲ್ಲಿ ಇಸ್ರೇಲ್ ತಪ್ಪು ಮಾಡುತ್ತಿದೆ. ಇರಾನ್ ಮೇಲಿನ ಅದರ ಲೆಕ್ಕಾಚಾರ ತಪ್ಪಾಗಿದೆ. ಇರಾನ್ ಎಷ್ಟು ಸಾಮರ್ಥ್ಯ ಹೊಂದಿದೆ ಎಂಬುದನ್ನು ನಾವು ಇಸ್ರೇಲ್‌ಗೆ ಅರ್ಥ ಮಾಡಿಸುತ್ತೇವೆ ಎಂದು ಬರೆದುಕೊಂಡಿದ್ದರು.
ಶನಿವಾರ ಇರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ನಂತರ ಖಮೇನಿ ಇಸ್ರೇಲ್‌ನಲ್ಲಿ ಮಾತನಾಡುವ ಹೀಬ್ರೂ ಭಾಷೆಯಲ್ಲಿ ಪೋಸ್ಟ್ ಮಾಡಲು ಖಾತೆಯನ್ನು ತೆರೆದಾಗ, ನಿಯಮ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ ಎಕ್ಸ್ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ತೋರಿಸಿದ್ದಾಗಿ ಹೇಳಲಾಗುತ್ತಿದೆ.
ಇಸ್ರೇಲ್ ಕಡೆಯಿಂದ ಟೆಹ್ರಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮಿಲಿಟರಿ ತಾಣಗಳನ್ನು ಗುರಿಯಾಗಿಟ್ಟು ವೈಮಾನಿಕ ದಾಳಿ ನಡೆಸಲಾಗಿತ್ತು. ಘಟನೆಯಲ್ಲಿ ನಾಲ್ವರು ಇರಾನ್ ಸೈನಿಕರು ಸಾವನ್ನಪ್ಪಿದ್ದರು. ಇದು ಇಸ್ರೇಲ್ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ್ದ ರಾಕೆಟ್ ದಾಳಿಗೆ ಪ್ರತಿಕ್ರಿಯೆಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿತ್ತು.
Iranian Supreme Leader Ali Khamenei's Hebrew language account on the social media platform X was suspended a day after it was opened amid the escalating tensions between Israel and Iran.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm