ಬ್ರೇಕಿಂಗ್ ನ್ಯೂಸ್
05-11-24 11:41 am HK News Desk ದೇಶ - ವಿದೇಶ
ಕಾಸರಗೋಡು, ನ.5: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಬದಿಯಡ್ಕ ಸಮೀಪದ ಬೋವಿಕ್ಕಾನದಲ್ಲಿ ನಡೆದಿದೆ.
ಭಾನುವಾರ ಸಂಜೆ ಕಾರ್ಯಕ್ರಮ ನಿಮಿತ್ತ ಸ್ವಾಮೀಜಿ ತಮ್ಮ ಕಾರಿನಲ್ಲಿ ಬೋವಿಕ್ಕಾನ - ಇರಿಯಣ್ಣಿ ಮಾರ್ಗ ಮಧ್ಯೆ ಸಂಚರಿಸುತ್ತಿದ್ದಾಗ ಪುಂಡರ ತಂಡ ಅಡ್ಡಹಾಕಿದೆ. ವಾಹನ ತಡೆದು ತಗಾದೆ ತೆಗೆದಿದ್ದು ಬಳಿಕ ಸ್ವಾಮೀಜಿ ಮಾತನಾಡದೆ ಮುಂದುವರಿದಿದ್ದರು. ಕಾರ್ಯಕ್ರಮ ಮುಗಿಸಿ ಅದೇ ದಾರಿಯಲ್ಲಿ ಹಿಂತಿರುಗುತ್ತಿದ್ದಾಗ ಅಡ್ಡಹಾಕಿದ ದುಷ್ಕರ್ಮಿಗಳ ತಂಡವು ದೊಣ್ಣೆಯಲ್ಲಿ ಕಾರಿನ ಗ್ಲಾಸ್ ಪುಡಿಗಟ್ಟಿ ಹಲ್ಲೆಗೆ ಯತ್ನಿಸಿದೆ. ಕಾರನ್ನು ಹಿಂಬಾಲಿಸಿ ಬಂದಿದ್ದ ತಂಡವು ಬಾವಿಕ್ಕೆರೆ ಎಂಬಲ್ಲಿ ಕೃತ್ಯ ನಡೆಸಿದೆ.
ಕಾರಿನ ಮುಂದಿನ ಗಾಜಿಗೆ ದೊಣ್ಣೆಯಲ್ಲಿ ಹೊಡೆದು ಹಾನಿ ಮಾಡಿದ್ದಾರೆ. ಅಲ್ಲದೆ, ಸ್ವಾಮೀಜಿಗೆ ಬೆದರಿಕೆ ಹಾಕಿ ಸ್ಥಳದಲ್ಲಿ ಭಯ ಮೂಡಿಸಿದ್ದಾರೆ. ಸ್ವಾಮೀಜಿ ಬಳಿಕ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ಇಂದು ಬೋವಿಕ್ಕಾನದಲ್ಲಿ ಹಿಂದು ಐಕ್ಯವೇದಿ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹಿಂದು ಶ್ರದ್ಧಾಕೇಂದ್ರದ ಗುರುಗಳಿಗೆ ಅಪಮಾನ ಎಸಗಿದರೆ ಸಾಮಾನ್ಯ ಜನರ ಪಾಡೇನು ಎಂದು ಐಕ್ಯವೇದಿ ಪ್ರಶ್ನಿಸಿದ್ದು ಹಿಂದು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿದೆ.
Edneer Math Swamiji car attacked in Kerala Kasaragod. The incident occurred on Sunday while he was on hisbway to kerala after which Miscreants attacked his car.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm