ಬ್ರೇಕಿಂಗ್ ನ್ಯೂಸ್
18-11-24 01:09 pm HK News Desk ದೇಶ - ವಿದೇಶ
ನವದೆಹಲಿ, ನ.18: ದೆಹಲಿಯಲ್ಲಿ ಶ್ರದ್ಧಾ ವಾಳ್ಕರ್ ಎಂಬ ಯುವತಿಯನ್ನು ಹತ್ಯೆಗೈದು 33 ತುಂಡುಗಳನ್ನಾಗಿಸಿ ಕಾಡಿಗೆಸೆದು ಸಾಕ್ಷ್ಯ ನಾಶ ಮಾಡಿದ್ದ ಪ್ರಕರಣದಲ್ಲಿ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಹತ್ಯೆಗೈಯಲು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಂಚು ಹೂಡಿದೆ. ಬಿಷ್ಣೋಯಿ ಗ್ಯಾಂಗಿನ ಟಾರ್ಗೆಟ್ ಲಿಸ್ಟ್ ನಲ್ಲಿ ಈತನ ಹೆಸರೂ ಇದೆಯೆಂದು ಪೊಲೀಸರು ತಿಳಿಸಿದ್ದಾರೆ.
2022ರ ಮೇನಲ್ಲಿ ಶ್ರದ್ಧಾ ವಾಳ್ಕರ್ ಎಂಬ ಮಹಾರಾಷ್ಟ್ರ ಮೂಲದ ಯುವತಿಯನ್ನು ಅಫ್ತಾಬ್ ಪೂನಾವಾಲಾ ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ದೆಹಲಿಗೆ ಕರೆದೊಯ್ದು ಜೊತೆಯಾಗಿ ರೂಂ ಮಾಡಿಕೊಂಡಿದ್ದರು. ಇಬ್ಬರ ನಡುವೆ ಜಗಳವುಂಟಾಗಿ ಆಕೆಯನ್ನು ಕೊಲೆಗೈದು ಬಳಿಕ ದೇಹವನ್ನು 33 ತುಂಡುಗಳಾಗಿ ಕತ್ತರಿಸಿ ಫ್ರಿಜ್ ನಲ್ಲಿ ಇಟ್ಟಿದ್ದ. ಈ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪೈಶಾಚಿಕ ರೀತಿಯಲ್ಲಿ ಕೊಲೆಗೈದು ಸಾಕ್ಷ್ಯ ಮಾಡಿದ್ದಕ್ಕಾಗಿ ಆಕ್ರೋಶ ಕೇಳಿಬಂದಿತ್ತು.
ಇದೀಗ ಶ್ರದ್ಧಾ ವಾಳ್ಕರ್ ಹತ್ಯೆಗೆ ಬಿಷ್ಣೋಯಿ ಗ್ಯಾಂಗ್ ಸೇಡು ತೀರಿಸಲು ಮುಂದಾಗಿದ್ದು ಆರೋಪಿ ಹತ್ಯೆಗೆ ಸ್ಕೆಚ್ ಹಾಕಿದೆ ಎನ್ನಲಾಗುತ್ತಿದೆ. ಬಿಷ್ಣೋಯಿ ಗ್ಯಾಂಗ್ ಹಲವರನ್ನು ಹಿಟ್ ಲಿಸ್ಟ್ ಮಾಡಿಕೊಂಡಿದ್ದು ಇದಕ್ಕಾಗಿ ಶಾರ್ಪ್ ಶೂಟರ್ ಗಳನ್ನು ಛೂಬಿಟ್ಟಿದೆ. ಹೀಗಾಗಿ ಆರೋಪಿ ಅಫ್ತಾಬ್ ಸುರಕ್ಷತೆ ಬಗ್ಗೆ ಜೈಲು ಆಡಳಿತವು ಅಲರ್ಟ್ ಆಗಿದೆ ಎಂದು ತಿಹಾರ್ ಜೈಲಿನ ಮೂಲಗಳು ತಿಳಿಸಿವೆ.
ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಆರೋಪಿ ಶಿವಕುಮಾರ್ ಗೌತಮ್, ಅಫ್ತಾಬ್ನನ್ನು ಕೊಲ್ಲಲು ಬಯಸುವುದಾಗಿ ಪೊಲೀಸರಿಗೆ ಹೇಳಿದ್ದಾನೆ. ತಿಹಾರ್ ಜೈಲಿನಲ್ಲಿಯೇ ಅಫ್ತಾಬ್ ಹತ್ಯೆಗೆ ಸಂಚು ರೂಪಿಸಲಾಗುತ್ತಿದೆ. 2022ರ ಮೇನಲ್ಲಿ ದೆಹಲಿಯ ಛತ್ತರ್‌ಪುರ ಪ್ರದೇಶದಲ್ಲಿ ಶ್ರದ್ಧಾ ವಾಕರ್ ಳನ್ನು ಕೊಲೆ ಮಾಡಲಾಗಿತ್ತು.
Aftab Poonawala, accused of murdering his live-in partner Shraddha Walkar in May 2022, is reportedly on the hit list of the Lawrence Bishnoi gang, according to Mumbai Police sources.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm