ಬ್ರೇಕಿಂಗ್ ನ್ಯೂಸ್
23-11-24 04:33 pm HK News Desk ದೇಶ - ವಿದೇಶ
ಮುಂಬೈ, ನ.23: ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಭರ್ಜರಿ ಜಯಭೇರಿ ಬಾರಿಸಿದೆ. 288 ಕ್ಷೇತ್ರಗಳ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 225ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ- ಶಿವಸೇನೆ- ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಒಳಗೊಂಡ ಮಹಾಯುತಿ ಮೈತ್ರಿಕೂಟ ಸ್ಪಷ್ಟ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಪಕ್ಷಕ್ಕೆ ಜನರು ಎರಡನೇ ಬಾರಿ ನಿರೀಕ್ಷೆಗೂ ಮೀರಿದ ಬೆಂಬಲ ನೀಡಿರುವುದು ದೊಡ್ಡ ಬೆಳವಣಿಗೆಯಾಗಿದೆ.
ಬಿಜೆಪಿ 149 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, 125 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಏಕನಾಥ ಶಿಂಧೆ ಬಣದ ಶಿವಸೇನೆ 81 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 50ಕ್ಕೂ ಹೆಚ್ಚು ಕಡೆ ಗೆಲ್ಲುವ ಮುನ್ಸೂಚನೆ ನೀಡಿದೆ. ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ 59 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು 40 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಇದೇ ವೇಳೆ, ಕಾಂಗ್ರೆಸ್ 101, ಉದ್ಧವ್ ಠಾಕ್ರೆ ಬಣದ ಶಿವಸೇನೆ 95 ಹಾಗೂ ಶರದ್ ಪವಾರ್ ನೇತೃತ್ವದ ಎನ್ ಸಿಪಿ 86 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿತ್ತು. ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿ ಮೈತ್ರಿಕೂಟ ಲಗಾಡಿಯಾಗಿದ್ದು, ಕೇವಲ 52 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 18, ಶರದ್ ಪವಾರ್ ನೇತೃತ್ವದ ಎನ್ಸಿಪಿ 81ರಲ್ಲಿ 11, ಉದ್ಧವ್ ಬಣವು 95ರಲ್ಲಿ 20 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಗಳಿಸಿದೆ.
ಹೆಚ್ಚಿನ ಸಮೀಕ್ಷೆಗಳಲ್ಲಿ ಅತಂತ್ರ ಫಲಿತಾಂಶ ನೀಡಲಾಗಿತ್ತು. ಕೆಲವದರಲ್ಲಿ ಮಾತ್ರ ಬಿಜೆಪಿ ಕೂಟಕ್ಕೆ ಸರಳ ಬಹುಮತದ (ಮ್ಯಾಜಿಕ್ ನಂಬರ್ 145) ಭವಿಷ್ಯ ನುಡಿಯಲಾಗಿತ್ತು. ಚುನಾವಣೆಗೆ ಕೆಲವೇ ತಿಂಗಳಿರುವಾಗ ಎನ್ ಸಿಪಿ ಪಕ್ಷವನ್ನು ಒಡೆದು ಅಜಿತ್ ಪವಾರ್ ಬಿಜೆಪಿ ಮೈತ್ರಿಕೂಟ ಸೇರಿದ್ದು ಕಾಂಗ್ರೆಸ್ ಕೂಟಕ್ಕೆ ದೊಡ್ಡ ಹಿನ್ನಡೆಯಾಗಿತ್ತು. ಇದೀಗ ಮತದಾರ ನಿರೀಕ್ಷೆಗೂ ಮೀರಿದ ಫಲಿತಾಂಶವನ್ನು ಬಿಜೆಪಿ ಮೈತ್ರಿಕೂಟ ಪರವಾಗಿ ನೀಡಿದ್ದು, ಬಿಜೆಪಿಯವರಿಗೇ ನಂಬಲಾಗದ ಗೆಲುವು ಸಿಕ್ಕಂತಾಗಿದೆ.
2019ರ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 105 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಶಿವಸೇನೆ 56, ಎನ್ ಸಿಪಿ 54, ಕಾಂಗ್ರೆಸ್ 44, ಪಕ್ಷೇತರರು 13 ಹಾಗೂ ಇತರೇ 16 ಮಂದಿ ಶಾಸಕರು ಗೆಲುವು ಸಾಧಿಸಿದ್ದರು. ಈ ಬಾರಿ ಕಾಂಗ್ರೆಸ್ ಸ್ಥಿತಿ ಮತ್ತಷ್ಟು ಹೀನಾಯವಾಗಿದ್ದು, ಶರದ್ ಪವಾರ್ ನೇತೃತ್ವದ ಎನ್ ಸಿಪಿ ಸ್ಥಿತಿಯೂ ಅಧೋಗತಿಗೆ ಇಳಿದಿದೆ. ಈ ಬಾರಿ ನ.20ರಂದು ಒಂದೇ ಹಂತದಲ್ಲಿ ಮಹಾರಾಷ್ಟ್ರದ 288 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಈ ಬಾರಿ 66 ಶೇಕಡಾ ಮತದಾನ ಆಗಿದ್ದರೆ, 2019ರಲ್ಲಿ 61 ಶೇಕಡಾ ಮತದಾನ ಆಗಿತ್ತು. ಬಹುಜನ ಸಮಾಜವಾದಿ ಪಾರ್ಟಿ 237 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, ಒವೈಸಿ ನೇತೃತ್ವದ ಎಐಎಂಐಎಂ ಪಕ್ಷವು 17 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು ಒಂದಷ್ಟು ಮತಗಳನ್ನು ಚದುರಿಸಲು ಕಾರಣವಾಗಿತ್ತು.
2014ರಲ್ಲಿ ಬಿಜೆಪಿ 125 ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದರೆ, 2019ರಲ್ಲಿ 105 ಕ್ಷೇತ್ರಗಳಲ್ಲಿ ಗೆದ್ದಿತ್ತು. ಮೊದಲಿಗೆ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದು ಬಳಿಕ ಶಿವಸೇನೆಯ ಉದ್ಧವ್ ಠಾಕ್ರೆ ಕಾಂಗ್ರೆಸ್ ಸೇರಿ ಮುಖ್ಯಮಂತ್ರಿಯಾಗಿದ್ದು ಭಾರೀ ರಾಜಕೀಯ ವಿಪ್ಲವಕ್ಕೆ ಕಾರಣವಾಗಿತ್ತು. ಆನಂತರ, ಶಿವಸೇನೆಯ ಏಕನಾಥ ಶಿಂಧೆ ನೇತೃತ್ವದ 30ಕ್ಕೂ ಹೆಚ್ಚು ಶಾಸಕರು ಪಕ್ಷವನ್ನೇ ಒಡೆದು ಬಿಜೆಪಿಗೆ ಬೆಂಬಲ ನೀಡಿದ್ದರು. ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೇರಿದ್ದಲ್ಲದೆ, ಶಿಂಧೆಯನ್ನೇ ಮುಖ್ಯಮಂತ್ರಿ ಮಾಡಿತ್ತು. ಇದೀಗ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಮೂಡಿಬಂದಿದ್ದಲ್ಲದೆ, ನಿರೀಕ್ಷೆಗೂ ಮೀರಿದ ಸ್ಥಾನಗಳನ್ನು ಗೆದ್ದುಕೊಂಡಿದೆ. ಸಹಜವಾಗಿಯೇ ಸಿಎಂ ಸ್ಥಾನವನ್ನು ದೇವೇಂದ್ರ ಫಡ್ನವಿಸ್ ಅವರಿಗೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ. ಹಾಲಿ ಸರಕಾರದಲ್ಲಿ ಏಕನಾಥ ಶಿಂಧೆ ಸಿಎಂ, ಫಡ್ನವಿಸ್ ಮತ್ತು ಅಜಿತ್ ಪವಾರ್ ಡಿಸಿಎಂ ಸ್ಥಾನದಲ್ಲಿದ್ದಾರೆ.
Maharashtra CM Eknath Shinde has expressed heartfelt gratitude to the voters for a decisive victory as projections showed Mahayuti leading in 225 seats, far ahead of the MVA’s 55. “This is a landslide victory,” he proclaimed, thanking diverse groups from farmers to senior citizens for their support. “Our schemes turned common man to Superman… people rejected politics of hate,” he added.
04-04-25 10:54 pm
HK News Desk
Mla Pradeep Eshwar, H D Kumaraswamy: ಕುಮಾರಸ್ವ...
04-04-25 09:55 pm
Waqf Amendment, Deve Gowda, Rajya Sabha: ವಕ್ಫ...
04-04-25 12:00 pm
MLC Vishwanath, Siddaramaiah: ಫ್ರೀ ಬಸ್ ಕೊಟ್ಟ...
04-04-25 10:28 am
Mandya Mysuru Bangalore Accident, KSRTC, Car:...
03-04-25 09:44 pm
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
04-04-25 11:07 pm
Mangalore Correspondent
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
Mangalore Police, Inspector Balakrishna: ಪ್ರಕ...
03-04-25 10:14 pm
Mangalore Court, Lawyers Protest, Judge: ಜಡ್ಜ...
03-04-25 04:04 pm
04-04-25 03:03 pm
Mangalore Correspondent
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm