'ಒಂದು ದೇಶ, ಒಂದು ಚುನಾವಣೆ’ ನೂತನ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ, ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಸಾಧ್ಯತೆ 

12-12-24 06:42 pm       HK News Desk   ದೇಶ - ವಿದೇಶ

ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಗಳ ಚುನಾವಣೆ ನಡೆಯಲು ಅವಕಾಶ ನೀಡಬಲ್ಲ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎನ್ನುವ ನೂತನ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ನವದೆಹಲಿ, ಡಿ.12: ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಗಳ ಚುನಾವಣೆ ನಡೆಯಲು ಅವಕಾಶ ನೀಡಬಲ್ಲ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎನ್ನುವ ನೂತನ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿದೆ.

ಪ್ರಸ್ತುತ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು.

ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಗೀಕರಿಸಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವಂತೆ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿತ್ತು. 

ಆದರೆ, ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಗಳ ಚುನಾವಣೆ ನಡೆಸುವ ಕಾಯ್ದೆಗೆ ಕಾಂಗ್ರೆಸ್ ಮತ್ತು ಎಎಪಿಯಂತಹ ಹಲವಾರು ಇಂಡಿಯಾ ಬ್ಲಾಕ್ ಪಕ್ಷಗಳಿಂದ ವಿರೋಧ ವ್ಯಕ್ತವಾಗಿದೆ. ಇದು ಕೇಂದ್ರದಲ್ಲಿ ಆಡಳಿತಾರೂಢ ಪಕ್ಷಕ್ಕೆ ಲಾಭವಾಗಲಿದೆ ಎಂದು ವಿಪಕ್ಷಗಳು ಆರೋಪಿಸಿದ್ದು, ಆದರೆ ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಚಿರಾಗ್ ಪಾಸ್ವಾನ್‌ ಅವರ ಪ್ರಮುಖ ಎನ್‌ಡಿಎ ಮಿತ್ರಪಕ್ಷಗಳು ಏಕಕಾಲದ ಚುನಾವಣೆಯನ್ನು ಬೆಂಬಲಿಸಿವೆ ಅನ್ನೋದು ಗಮನಾರ್ಹ.

The Union Cabinet has cleared bills required to implement the 'one nation, one election' proposal - which proposes simultaneous Lok Sabha and Assembly elections and, at a later stage, municipal polls too - sources told NDTV Thursday afternoon. These bills - which look to amend at least five Articles of the Constitution - will likely be introduced in the ongoing Winter Session of Parliament, sources added.