ಬ್ರೇಕಿಂಗ್ ನ್ಯೂಸ್
17-12-24 05:31 pm HK News ದೇಶ - ವಿದೇಶ
ನವದೆಹಲಿ, ಡಿ.17: ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ 'ಒಂದು ದೇಶ- ಒಂದು ಚುನಾವಣೆ' ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.
ಒಂದು ದೇಶ, ಒಂದು ಚುನಾವಣೆ" ಮಸೂದೆ ಎಂದು ಕರೆಯಲ್ಪಡುವ ಸಂವಿಧಾನ (129ನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ ಮಂಡಿಸಿದರು. ಈ ವೇಳೆ, ಪ್ರಧಾನಿ ಮೋದಿ ಸಹಿತ ಆಡಳಿತ ಪಕ್ಷದ ಎಲ್ಲಾ ಸದಸ್ಯರು ಮೇಜು ತಟ್ಟುವ ಮೂಲಕ ಮಸೂದೆಗೆ ಬೆಂಬಲ ಸೂಚಿಸಿದರೆ, ವಿಪಕ್ಷ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇದು ಅಸಾಂವಿಧಾನಿಕ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಮತ್ತು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ. ಹೀಗಾಗಿ ಮಸೂದೆ ಹಿಂಪಡೆಯಬೇಕು ಎಂದು ವಿಪಕ್ಷ ಸದಸ್ಯರು ಒತ್ತಾಯಿಸಿದರು.
ಬಳಿಕ ಮಸೂದೆಗೆ ಒಪ್ಪಿಗೆ ಪಡೆಯಲು ಮತಯಂತ್ರದ ಮೂಲಕ ಮತಕ್ಕೆ ಹಾಕಲಾಯಿತು. ಮಸೂದೆ ಪರವಾಗಿ 269 ಮತ ಹಾಗೂ ವಿರುದ್ಧವಾಗಿ 198 ಮತಗಳು ಚಲಾವಣೆಯಾದವು. 70 ಸದಸ್ಯರು ಸದನಕ್ಕೆ ಈ ವೇಳೆ ಗೈರಾಗಿದ್ದರು. ಹೊಸ ಸಂಸತ್ ಭವನದಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರವನ್ನು ಬಳಸಲಾಯಿತು. ಮತದಾನದ ನಂತರ ಕಲಾಪವನ್ನು ಮಧ್ಯಾಹ್ನ 3 ಗಂಟೆಯ ವರೆಗೆ ಒಂದು ಗಂಟೆಗೂ ಹೆಚ್ಚು ಕಾಲ ಮುಂದೂಡಲಾಯಿತು.
ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆ ತರುವ ಅಗತ್ಯ ಏನಿದೆ ಎಂದು ಸಮಾಜವಾದಿ ಲಕ್ಷದ ಸಂಸದ ಧರ್ಮೇಂದ್ರ ಯಾದವ್ ಪ್ರಶ್ನಿಸಿದ್ದಾರೆ. ಇದಕ್ಕು ಮುನ್ನ 'ಒಂದು ದೇಶ, ಒಂದು ಚುನಾವಣೆ' ಮಸೂದೆ ಮಂಡಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಲೋಕಸಭೆ ಪ್ರಧಾನ ಕಾರ್ಯದರ್ಶಿಗೆ ಔಪಚಾರಿಕ ನೋಟಿಸ್ ಸಲ್ಲಿಸಿದ್ದರು.
Two bills that lay down the mechanism to hold simultaneous elections – The Constitution (One Hundred and Twenty-Ninth Amendment) Bill, 2024′ and ‘The Union Territories Laws (Amendment) Bill, 2024’, were formally introduced in the Lok Sabha on Tuesday, amid a fiery debate.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm