ಬ್ರೇಕಿಂಗ್ ನ್ಯೂಸ್
28-12-24 09:46 pm HK News Desk ದೇಶ - ವಿದೇಶ
ನವದೆಹಲಿ, ಡಿ.28: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ ಬೆನ್ನಲ್ಲೇ ಅವರ ಹೆಸರಿನಲ್ಲಿ ಸ್ಮಾರಕ ನಿರ್ಮಿಸುವ ವಿಚಾರ ವಿವಾದಕ್ಕೀಡಾಗಿದೆ. ಕೇಂದ್ರ ಸರ್ಕಾರ ಸ್ಮಾರಕ ನಿರ್ಮಾಣಕ್ಕೆ ಜಾಗ ಕೊಡುತ್ತೇವೆ ಎಂದಿದ್ದರೂ, ಎಲ್ಲಿ ಎನ್ನುವುದನ್ನು ಸ್ಪಷ್ಟಪಡಿಸಿಲ್ಲ. ಇತ್ತ ಕಾಂಗ್ರೆಸ್ ನಾಯಕರು ಅಂತ್ಯಸಂಸ್ಕಾರ ನಡೆದ ನಿಗಮ್ ಬೋಧ್ ಘಾಟ್ ನಲ್ಲೇ ಸ್ಮಾರಕ ನಿರ್ಮಿಸಲು ಜಾಗ ನೀಡಬೇಕೆಂದು ಪಟ್ಟು ಹಿಡಿದಿದೆ. ಈ ವಿಚಾರ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಜಟಾಪಟಿಗೆ ಕಾರಣವಾಗಿದೆ.
ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರು ಮನಮೋಹನ್ ಸಿಂಗ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಆರೋಪಿಸಿದ್ದಾರೆ. ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಮೊದಲೇ ಸ್ಥಳ ನಿಗದಿ ಮಾಡದೆ, ದೇಶದ ಮೊದಲ ಸಿಖ್ ಪ್ರಧಾನಿಗೆ ಬಿಜೆಪಿ ಅವಮಾನ ಮಾಡಿದೆ. ಇದನ್ನು ಜನರು ಅರಿತುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.

ಜೈರಾಮ್ ರಮೇಶ್ ಮಾತಿಗೆ ಬಿಜೆಪಿ ಮಾಜಿ ಪ್ರಧಾನಿ, ದಿವಂಗತ ಪಿವಿ ನರಸಿಂಹ್ ರಾವ್ ಅವರ ವಿಚಾರ ಪ್ರಸ್ತಾಪಿಸಿ ತಿರುಗೇಟು ನೀಡಿದೆ. ಮಾಜಿ ಪ್ರಧಾನಿ ನರಸಿಂಹ ರಾವ್ ಅವರ ಮರಣದ ನಂತರ ಕಾಂಗ್ರೆಸ್ ಹೇಗೆ ನಡೆದುಕೊಂಡಿತ್ತು ಎನ್ನುವುದನ್ನು ಕಾಂಗ್ರೆಸ್ ನೆನಪಿಸಿಕೊಳ್ಳಬೇಕು ಅಂತ ಬಿಜೆಪಿ ಟ್ವೀಟ್ ಮಾಡಿದೆ. ಪ್ರಣಬ್ ಮುಖರ್ಜಿ ಅವರ ಪುತ್ರಿ ಕೂಡ ಮಾಜಿ ರಾಷ್ಟ್ರಪತಿಯಾಗಿದ್ದ ತಮ್ಮ ತಂದೆಯನ್ನು ಕಾಂಗ್ರೆಸ್ ಎಷ್ಟು ಹೀನಾಯವಾಗಿ ನಡೆಸಿಕೊಂಡಿದೆ ಎನ್ನುವುದನ್ನು ಹೇಳಿದ್ದಾರೆ ಎಂದೂ ಬಿಜೆಪಿ ನೆನಪಿಸಿದೆ.
ಅಲ್ಲದೆ, ಪಿವಿ ನರಸಿಂಹ ರಾವ್ ಅವರ ಮೊಮ್ಮಗ ಹಾಗೂ ತೆಲಂಗಾಣ ಬಿಜೆಪಿ ನಾಯಕ ಎನ್‌ವಿ ಸುಭಾಷ್ ಕೂಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರನ್ನು ಗೌರವಿಸುವಲ್ಲಿ ಕಾಂಗ್ರೆಸ್ ಬೂಟಾಟಿಕೆ ಮಾಡಿದೆ. ಭಾರತದ ಆರ್ಥಿಕ ಸುಧಾರಣೆಗಳನ್ನು ಪ್ರಾರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಅವರ ಸ್ಮಾರಕವನ್ನು ದೆಹಲಿಯಲ್ಲಿ ನಿರ್ಮಿಸಲು ಕಾಂಗ್ರೆಸ್ ನಿರಾಕರಿಸಿತ್ತು ಎಂದು ಆರೋಪಿಸಿದ್ದಾರೆ.
ತಮ್ಮ ಜೀವನದುದ್ದಕ್ಕೂ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿದ್ದ ನರಸಿಂಹರಾವ್ 2004ರಲ್ಲಿ ನಿಧನರಾದಾಗ ಕಾಂಗ್ರೆಸ್ ಕೆಟ್ಟದಾಗಿ ನಡೆಸಿಕೊಂಡಿತ್ತು ಎಂದು ಸುಭಾಷ್ ಹೇಳಿದ್ದಾರೆ. ಪಿವಿಎನ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು ಬಿಜೆಪಿ ಎಂದು ಸುಭಾಷ್ ಹೇಳಿದ್ದಾರೆ.
In a strong statement, NV Subhash, the grandson of former PM PV Narasimha Rao and BJP leader, launched a scathing critique of the Congress party, accusing it of hypocrisy in honouring its leaders. He mentioned how the Congress allegedly denied a memorial in Delhi for former Prime Minister PV Narasimha Rao who was instrumental in initiating India’s economic reforms.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm