Maha Kumbh Mela 2025: 12 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಮಹಾ ಕುಂಭಮೇಳ ; 40 ಕೋಟಿ ಜನರ ಆಗಮನ ನಿರೀಕ್ಷೆ, ಮೈಸೂರಿನಿಂದ ಲಖನೌಗೆ ವಿಶೇಷ ರೈಲು ಸೇವೆ, ಮಾಹಿತಿ ಒದಗಿಸಲು ಚಾಟ್‌ಬಾಟ್ ವ್ಯವಸ್ಥೆ !

29-12-24 10:23 pm       HK News Desk   ದೇಶ - ವಿದೇಶ

12 ವರ್ಷಗಳ ಬಳಿಕ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಸಲು ಉತ್ತರ ಪ್ರದೇಶ ಸಜ್ಜಾಗಿದೆ. ಇದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಹಿಂದೂ ಧರ್ಮದ ಅತ್ಯಂತ ಮಹತ್ವದ ಮೇಳ ಇದಾಗಿದ್ದು, ಲಕ್ಷಾಂತರ ಮಂದಿ ಭಕ್ತರು ಇದರಲ್ಲಿ ಭಾಗವಹಿಸಲಿದ್ದಾರೆ.

ನವದೆಹಲಿ, ಡಿ 29: 12 ವರ್ಷಗಳ ಬಳಿಕ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಸಲು ಉತ್ತರ ಪ್ರದೇಶ ಸಜ್ಜಾಗಿದೆ. ಇದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಹಿಂದೂ ಧರ್ಮದ ಅತ್ಯಂತ ಮಹತ್ವದ ಮೇಳ ಇದಾಗಿದ್ದು, ಲಕ್ಷಾಂತರ ಮಂದಿ ಭಕ್ತರು ಇದರಲ್ಲಿ ಭಾಗವಹಿಸಲಿದ್ದಾರೆ. ಅನೇಕ ಮಂದಿ ಭಕ್ತರು ಸೇರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಯೋಗಿ ಸರ್ಕಾರ ಸಕಲ ಸಿದ್ಧತೆಗಳೊಂದಿಗೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ. ಹಾಗಿದ್ರೆ ಹೇಗೆ ನಡೆಯಲಿದೆ ಮಹಾ ಕುಂಭಮೇಳ? ಸಿದ್ಧತೆ ಹೇಗಿದೆ? ವಿಶೇಷತೆಗಳೇನು ಎಂಬ ಕುರಿತು ಇಲ್ಲಿ ವಿವರಿಸಲಾಗಿದೆ.

ಉತ್ತರ ಪ್ರದೇಶದ ಪ್ರಯಾಗ್ ​ರಾಜ್​ನಲ್ಲಿ ನಡೆಯಲಿರುವ ಮಹಾಕುಂಭಮೇಳದ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಪ್ರಯಾಗ್ ರಾಜ್ ನ ಸಂಗಮ್ ಪ್ರದೇಶದಲ್ಲಿ ದಿನದ 24 ಗಂಟೆಯೂ ಕಣ್ಗಾವಲು ನೀಡಬಲ್ಲ, 100 ಮೀಟರ್ ವರೆಗೆ ನೀರಿನೊಳಗೆ ಇಳಿಯಬಲ್ಲ 'ಅಂಡರ್ ವಾಟರ್ ಡ್ರೋನ್'ಗಳನ್ನು ನಿಯೋಜಿಸಲಾಗುವುದು ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ.

From Underwater To Air: Drones To Watch Over Pilgrims At Maha Kumbh 2025

Drones to secure Maha Kumbh 2025: From 100m underwater to 120m in air |  India News - Business Standard

Drones to secure Maha Kumbh 2025: From 100m underwater to 120m in air

ಇದಲ್ಲದೆ, ಯಾತ್ರಾರ್ಥಿಗಳು ಮತ್ತು ಇತರ ಸಂದರ್ಶಕರಿಗೆ ಅನುಕೂಲವಾಗುವಂತೆ ಭಾರತದ ಸಂಸ್ಕೃತಿ ಮತ್ತು ವೈವಿಧ್ಯತೆಯನ್ನು ಪ್ರದರ್ಶಿಸುವ 800 ಬಹುಭಾಷಾ ಬೋರ್ಡ್​ಗಳನ್ನು ಅಳವಡಿಸಲಾಗುತ್ತಿದ್ದು, 92 ರಸ್ತೆಗಳನ್ನು ನವೀಕರಣ ಮಾಡಲಾಗುತ್ತಿದೆ. ಅಲ್ಲದೆ 30 ಸಣ್ಣ ಸೇತುವೆಗಳನ್ನು ಕೂಡ ನಿರ್ಮಿಸಲಾಗುತ್ತಿದೆ.

ಕೃತಕ ಬುದ್ಧಿಮತ್ತೆ (ಎಐ) ಸಾಮರ್ಥ್ಯದ 2,700 ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದ್ದು, ಇವು ನೈಜ-ಸಮಯದ ಮೇಲ್ವಿಚಾರಣೆಗೆ ಸಹಾಯಕವಾಗಲಿವೆ ಮತ್ತು ಹೆಚ್ಚಿನ ಸುರಕ್ಷತೆಗಾಗಿ ಪ್ರವೇಶ ಸ್ಥಳಗಳಲ್ಲಿ ಮುಖ ಗುರುತಿಸುವಿಕೆ ತಂತ್ರಜ್ಞಾನವನ್ನು ಬಳಸಲಾಗುವುದು. 56 ಸೈಬರ್ ತಜ್ಞರ ತಂಡವು ಆನ್ ಲೈನ್ ಬೆದರಿಕೆಗಳ ಬಗ್ಗೆ ಪರಿಶೀಲನೆ ನಡೆಸಲಿದೆ. ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸೈಬರ್ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ಉತ್ತರ ಪ್ರದೇಶ ಸರ್ಕಾರವು "ಪ್ರಯಾಗ್ ರಾಜ್​​ನಲ್ಲಿ ನಡೆಯಲಿರುವ 2025 ಮಹಾಕುಂಭವು ಭವ್ಯ, ಸುರಕ್ಷಿತ ಮತ್ತು ಆಧ್ಯಾತ್ಮಿಕವಾಗಿ ಸಮೃದ್ಧ ಕಾರ್ಯಕ್ರಮವನ್ನಾಗಿಸಲು ವ್ಯಾಪಕ ಸಿದ್ಧತೆಗಳನ್ನು ಮಾಡುತ್ತಿದೆ" ಎಂದು ಸಚಿವಾಲಯ ತಿಳಿಸಿದೆ.

ಜನವರಿ 13 ರಿಂದ ಫೆಬ್ರವರಿ 26 ರವರೆಗೆ 45 ದಿನಗಳ ಕಾಲ ನಡೆಯಲಿರುವ ಈ ಉತ್ಸವದಲ್ಲಿ ವಿಶ್ವದೆಲ್ಲೆಡೆಯಿಂದ 40 ಕೋಟಿಗೂ ಹೆಚ್ಚು ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ.

ಗೂಗಲ್‌ನಿಂದ ‘ನ್ಯಾವಿಗೇಷನ್ ಸಿಸ್ಟಮ್’:

ಮಹಾ ಕುಂಭಮೇಳಕ್ಕಾಗಿ ವಿಶೇಷ ನ್ಯಾವಿಗೇಷನ್ ಸಿಸ್ಟಮ್ ಅನ್ನು ಗೂಗಲ್ ಅಭಿವೃದ್ಧಿಪಡಿಸುತ್ತಿದೆ. ಗೂಗಲ್ ತಾತ್ಕಾಲಿಕ ನಗರಕ್ಕೆ ನ್ಯಾವಿಗೇಷನ್ ಸಿಸ್ಟಮ್ ಅನ್ನು ರಚಿಸುತ್ತಿರುವುದು ಇದೇ ಮೊದಲು. ಇದು ಪ್ರವಾಸಿಗರಿಗೆ ಅಥವಾ ಭಕ್ತರಿಗೆ ಪ್ರಮುಖ ರಸ್ತೆಗಳು, ಧಾರ್ಮಿಕ ಸ್ಥಳಗಳು, ಘಾಟ್‌ಗಳ ಬಗ್ಗೆ ಮಾಹಿತಿಯನ್ನು ನೀಡುತ್ತದೆ.

ಐಷಾರಾಮಿ ಟೆಂಟ್ ಸಿಟಿ:

ಯಾತ್ರಾರ್ಥಿಗಳ ಸಂಚಾರಕ್ಕೆ ಅನುವಾಗಲು ಹಾಗೂ ಪರಿಸರಸ್ನೇಹಿ ಪ್ರಯಾಣ ಖಚಿತಕ್ಕಾಗಿ ಆ್ಯಪ್ ಆಧಾರಿತ ಇ-ರಿಕ್ಷಾ ಸೇವೆಯನ್ನು ಸರ್ಕಾರ ಒದಗಿಸುತ್ತಿದೆ. ಯಾತ್ರಾರ್ಥಿಗಳಿಗಾಗಿ ಟೆಂಟ್ ಸಿಟಿ ನಿರ್ಮಿಸಲಾಗುತ್ತಿದೆ. ವಿಲ್ಲಾ, ಮಹಾರಾಜ, ಸ್ವಿಜ್ ಕಾಟೇಜ್, ಡಾರ್ಮೆಟ್ರಿ ಎಂಬ 4 ವಿಧಗಳ ಟೆಂಟ್ ಇರಲಿದ್ದು, ಐಷಾರಾಮಿ ಸೇವೆಯ 2000 ಸ್ವಿಜ್ ಕಾಟೇಜ್‌ಗಳನ್ನೂ ನಿರ್ಮಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.

ಮಾಹಿತಿ ಒದಗಿಸಲು ಚಾಟ್‌ಬಾಟ್:

ಭಾರತ ತಂತ್ರಜ್ಞಾನದಲ್ಲಿ ಸಾಧಿಸುತ್ತಿರುವ ಪ್ರಗತಿಯನ್ನು ಕುಂಭಮೇಳಕ್ಕೂ ವಿಸ್ತರಿಸಿದೆ. ಪ್ರಯಾಣಿಕರಿಗೆ ನೆರವು ನೀಡುವುದಕ್ಕಾಗಿ ಕೃತಕ ಬುದ್ಧಿಮತ್ತೆ ಚಾಟ್‌ಬಾಟನ್ನು ಸ್ಥಾಪನೆ ಮಾಡಿದೆ. ಈ ಚಾಟ್‌ಬಾಟ್ ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಇದೊಂದು ಆ್ಯಪ್ ಆಗಿದ್ದು, ‘ಓಲಾ ಕೃತಿಮ್’ ಇದನ್ನು ತಯಾರು ಮಾಡಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತಮಿಳು, ತೆಲುಗು, ಮರಾಠಿ, ಮಲಯಾಳ, ಉರ್ದು, ಗುಜರಾತಿ, ಪಂಜಾಬಿ ಮತ್ತು ಬೆಂಗಾಲಿಗಳಲ್ಲಿ ಇದು ಮಾಹಿತಿ ಒದಗಿಸಲಿದೆ. ಅಲ್ಲದೇ ಇಡೀ ಕುಂಭಮೇಳದ ಮ್ಯಾಪ್ ಒದಗಿಸಲಿದ್ದು, ಕುಂಭಮೇಳದ ಇತಿಹಾಸ, ಪದ್ಧತಿ ಸೇರಿದಂತೆ ಹಲವು ಮಾಹಿತಿಯನ್ನು ಒದಗಿಸಲಿದೆ.

ರೈಲ್ವೆಯಿಂದ ವಿಶೇಷ ರೈಲು;

ಇನ್ನು ಕುಂಭಮೇಳದಲ್ಲಿ ಪಾಲ್ಗೊಳ್ಳುವ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಲು ನೈರುತ್ಯ ರೈಲ್ವೆಯಿಂದ ಏಕಮುಖ ವಿಶೇಷ ರೈಲು ಸಂಚರಿಸಲಿವೆ.  ರೈಲು ಸಂಖ್ಯೆ 06216 ಮೈಸೂರು-ಲಖನೌ ಜಂಕ್ಷನ್ ಏಕಮುಖ ಸ್ಪೆಷಲ್ ಎಕ್ಸ್‌ಪ್ರೆಸ್‌ ಡಿ.29 ರ ಭಾನುವಾರ ರಾತ್ರಿ 12:30 ಕ್ಕೆ ಮೈಸೂರಿನಿಂದ ಹೊರಟು ಡಿ.31 ರ ಮಂಗಳವಾರ ನಸುಕಿನ 4 ಗಂಟೆಗೆ ಲಕ್ನೋ ಜಂಕ್ಷನ್ ತಲುಪಲಿದೆ.

ಈ ರೈಲು ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ ಜಂಕ್ಷನ್, ತುಮಕೂರು, ಅರಸೀಕೆರೆ ಜಂಕ್ಷನ್, ಕಡೂರು, ಚಿಕ್ಕಜಾಜೂರು ಜಂಕ್ಷನ್, ದಾವಣಗೆರೆ, ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ ಜಂಕ್ಷನ್, ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್ ಜಂಕ್ಷನ್, ಸಾಂಗ್ಲಿ, ಕರಡ್, ಪುಣೆ ಜಂಕ್ಷನ್, ದೌಂಡ್ ಕಾರ್ಡ್ ಲೈನ್, ಅಹ್ಮದ್ನಗರ, ಮನ್ಮಾಡ್ ಜಂಕ್ಷನ್, ಭೂಸಾವಲ್ ಜಂಕ್ಷನ್, ಖಾಂಡ್ವಾ, ತಲ್ವಾಡಿಯಾ, ಭೋಪಾಲ್, ಖಾಂಡ್ವಾ, ತಲ್ವಾಡಿಯಾ, ಚನೇರಾ, ಖಾಂಡ್ವಾ, ತಲ್ವಾಡ್ಯ, ಚನೇರಾ, ಖಾಂಡ್ವಾ ನಿಲ್ದಾಣಗಳಲ್ಲಿ ನಿಲ್ಲಲಿದ್ದು, ಪ್ರಯಾಣಿಕರು ಸೇವೆಯನ್ನ ಬಳಸಿಕೊಳ್ಳಬಹುದು.  

ವಿಶೇಷ ರೈಲು 11 ಸೆಕೆಂಡ್ ಜನರಲ್ ಕ್ಲಾಸ್ ಬೋಗಿಗಳು, 7 ಸ್ಲೀಪರ್ ಕ್ಲಾಸ್ ಬೋಗಿಗಳು ಮತ್ತು ಎಸ್ಎಲ್ಆರ್/ಡಿ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ. ಹೆಚ್ಚಿನ ಮಾಹಿತಿಯು ಭಾರತೀಯ ರೈಲ್ವೆಯ ವೆಬ್‌ಸೈಟ್ www.enquiry.indianrail.gov.in ನಲ್ಲಿ ಲಭ್ಯವಿದೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ.

The upcoming Maha Kumbh will feature unprecedented security measures with the deployment of drones capable of monitoring 100 metres underwater and 120 metres above ground, officials said. More than 45 crore pilgrims are expected to participate in the grand gathering.