ಮುನ್ನಾರ್‌ನಲ್ಲಿ ಭೂಕುಸಿತ ; 24 ಮಂದಿ ಸಾವು, 80 ಮಂದಿ ನಾಪತ್ತೆ

08-08-20 03:22 pm       Headline Karnataka News Network   ದೇಶ - ವಿದೇಶ

ಮುನ್ನಾರ್‌ನಲ್ಲಿ ಭೂಕುಸಿತ ಉಂಟಾಗಿದ್ದು, 24 ಮಂದಿ ಮೃತಪಟ್ಟಿದ್ದು, 50 ಮಂದಿ ಕಾಣೆಯಾಗಿದ್ದಾರೆ. ಇನ್ನು ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರುಪಾಯಿ ಪರಿಹಾರ ಘೋಷಿಸಿದ್ದಾರೆ.

ತಿರುವನಂತಪುರಂ, ಆಗಸ್ಟ್ 08: ಮುನ್ನಾರ್‌ನಲ್ಲಿ ಭೂಕುಸಿತ ಉಂಟಾಗಿದ್ದು, 24 ಮಂದಿ ಮೃತಪಟ್ಟಿದ್ದು, 50 ಮಂದಿ ಕಾಣೆಯಾಗಿದ್ದಾರೆ. ಇನ್ನು ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರುಪಾಯಿ ಪರಿಹಾರ ಘೋಷಿಸಿದ್ದಾರೆ.

ಇನ್ನು ಅವಶೇಷಗಳಡಿಯಲ್ಲಿ 80 ಮಂದಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಧರೆಗುರುಳಿದ್ದು ಹಲವರು ಸಿಕ್ಕಿಹಾಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ನಸುಕಿನ ಜಾವ ಈ ದುರಂತ ಸಂಭವಿಸಿದ್ದರಿಂದ ನಿದ್ದೆಯಲ್ಲಿದ್ದ ಜನರಿಗೆ ಬೆಟ್ಟ ಕುಸಿದು ಬೀಳುವಾಗ ಎದ್ದು ಓಡಿಹೋಗಿ ತಪ್ಪಿಸಿಕೊಳ್ಳಲು ಸಮಯ ಇರಲಿಲ್ಲ. ಇದರಿಂದ ಸಾವು ನೋವು ಹೆಚ್ಚಾಗಿದೆ. ಭಾರೀ ಮಳೆಗೆ ಪ್ರವಾಹ ಉಂಟಾಗಿ ಪೆರಿಯವರ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದ್ದರಿಂದ ರಕ್ಷಣಾ ಪಡೆಗಳಿಗೆ ದುರ್ಘಟನೆ ನಡೆದ ಸ್ಥಳಕ್ಕೆ ಬೇಗ ತಲುಪಲು ಸಾಧ್ಯವಾಗಿಲ್ಲ.

ಇದುವರೆಗೆ 24 ಮಂದಿಯ ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಏಳು ಮಂದಿಯನ್ನು ಮಣ್ಣಿನಡಿಯಿಂದ ರಕ್ಷಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಕ್ಕಿಹಾಕಿಕೊಂಡವರಲ್ಲಿ ಬಹುತೇಕರು ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದಾರೆ. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಕೇರಳಕ್ಕೆ ತೆರಳಿ ಅಲ್ಲಿಯ ಜನರಿಗೆ ಸಹಾಯ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟ್ಟರ್‌ನಲ್ಲಿ ಮನವಿ ಮಾಡಿದ್ದಾರೆ.