ಬ್ರೇಕಿಂಗ್ ನ್ಯೂಸ್
15-12-20 12:18 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿಸೆಂಬರ್ 15: ಕೊರೊನಾ ಸೋಂಕಿನ ಭಯದಿಂದಾಗಿ ಈ ಬಾರಿ ಸಂಸತ್ ಚಳಿಗಾಲದ ಅಧಿವೇಶನ ನಡೆಸುವುದಿಲ್ಲ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಜನವರಿಯಲ್ಲಿ ನಡೆಸಲು ಉದ್ದೇಶಿಸಲಾಗಿರುವ ಸಂಸತ್ ಅಧಿವೇಶನವನ್ನು ಮೊಟಕುಗೊಳಿಸಲು ವಿರೋಧಪಕ್ಷ ನಾಯಕರು ಕೂಡ ಒಪ್ಪಿಗೆ ನೀಡಿದ್ದಾರೆ. ಹೀಗಾಗಿ ಈ ಬಾರಿ ಸಂಸತ್ ಚಳಿಗಾಲದ ಅಧಿವೇಶನ ನಡೆಯುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಲು ಚಳಿಗಾಲದ ಅಧಿವೇಶನ ನಡೆಸಬೇಕು ಎಂದು ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಪತ್ರ ಬರೆದಿದ್ದರು.
ಅವರ ಬೇಡಿಕೆಗಳಿಗೆ ಪ್ರತಿಕ್ರಿಯಿಸಿರುವ ಪ್ರಲ್ಹಾದ್ ಜೋಶಿ ಈ ಬಾರಿ ಸಂಸತ್ ಅಧಿವೇಶನ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.
ಎಲ್ಲಾ ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಿದ್ದೇನೆ, ಮತ್ತು ಕೊರೊನಾ ಸೋಂಕಿನ ಕಾರಣದಿಂದ ಅಧಿವೇಶನವನ್ನು ಕರೆಯದಿರಲು ಒಮ್ಮತವಿದೆ ಎಂದರು.ಸೆಪ್ಟೆಂಬರ್‌ನಲ್ಲಿ ನಡೆಸ ಮುಂಗಾರು ಅಧಿವೇಶನವು ಕೊರೊನಾ ಸೋಂಕಿನಿಂದಾಗಿ ವಿಳಂಬವಾಗಿತ್ತು.
ಸಂಸತ್ ಆರು ತಿಂಗಳಲ್ಲಿ ಸಭೆ ಸೇರಬೇಕು ಎಂದು ಹೇಳುತ್ತದೆ. ಫೆಬ್ರವರಿ 1 ರಂದು ಬಜೆಟ್ ಮಂಡನೆಯಾಗುವ ಮುಂಚಿತವಾಗಿ ಜನವರಿ ಕೊನೆಯ ವಾರದಲ್ಲಿ ಅಧಿವೇಶನ ನಡೆಯುವ ಸಾಧ್ಯತೆ ಇದೆ.

ಸಾಂಕ್ರಾಮಿಕ ರೋಗವನ್ನು ನಿರ್ವಹಿಸಲು ಚಳಿಗಾಲದ ತಿಂಗಳುಗಳು ಬಹಳ ನಿರ್ಣಾಯಕವಾಗಿವೆ. ಏಕೆಂದರೆ ಈ ಅವಧಿಯಲ್ಲಿ ವಿಶೇಷವಾಗಿ ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚಿದೆ ಎಂದು ಹೇಳಿದ್ದಾರೆ.
ಹೊಸ ಸಂಸತ್ ಭವನ ನಿರ್ಮಾಣವಾಗುತ್ತಿದ್ದು, 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದೇ ಭವನದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಭೂಮಿ ಪೂಜೆ ನಂತರ ಕೆಲವೇ ದಿನಗಳಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ.
ಹೊಸ ಸಂಸತ್ ಭವನದಲ್ಲಿ ಲೋಕಸಭೆಯ ಚೇಂಬರ್‌ನಲ್ಲಿ ಈ ಗಿರುವ 543 ಆಸನಗಳ ಬದಲು 888 ಆಸನಗಳು ಹಾಗೂ ರಾಜ್ಯಸಭೆ ಚೇಂಬರ್‌ನಲ್ಲಿ ಈಗಿರುವ 245 ಆಸನಗಳ ಬದಲು 384 ಆಸನಗಳಿರಲಿವೆ. ಜಂಟಿ ಸಮಾವೇಶ ನಡೆಸಲು ಹೆಚ್ಚು ಆಸನಗಳ ಸಭಾಂಗಣ ನಿರ್ಮಾಣವಾಗಲಿದೆ. ಇಡೀ ಕಟ್ಟಡ ಭೂಕಂಪ ನಿರೋಧಕ ಶಕ್ತಿ ಹೊಂದಿರಲಿದೆ.
The government has said there will be no Winter Session of Parliament this year due to the coronavirus pandemic. Parliament will meet for the Budget Session in January next year.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm