ಬ್ರೇಕಿಂಗ್ ನ್ಯೂಸ್
09-01-25 12:11 pm HK News Desk ದೇಶ - ವಿದೇಶ
ಲಾಸ್ ಏಂಜಲೀಸ್, ಜ 09: ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು ಉಂಟಾಗಿ ಭಾರೀ ಅಲ್ಲೋಲ ಕಲ್ಲೋಲ ಉಂಟಾಗಿದ್ದು, ಬರೋಬ್ಬರಿ 30000ಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ.
ದಕ್ಷಿಣ ಕ್ಯಾಲಿಫೋರ್ನಿಯಾಗೆ ಅಪ್ಪಳಿಸಿದ ಭೀಕರ ಗಾಳಿಯಿಂದಾಗಿ ಬೆಂಕಿ ಎಲ್ಲೆಂದರಲ್ಲಿ ಹರಡಿಕೊಂಡಿದ್ದು, ಆರಂಭದಲ್ಲಿ 20 ಎಕರೆ ಪ್ರದೇಶದಲ್ಲಿ ಕಾಣಿಸಿಕೊಂಡಿ ಬೆಂಕಿ ನಂತರ ಕೆಲವೇ ಗಂಟೆಗಳಲ್ಲಿ 1,200 ಎಕರೆ ಪ್ರದೇಶಕ್ಕೆ ವ್ಯಾಪಿಸಿದೆ. ಇದರಿಂದಾಗಿ 13,000 ಕ್ಕೂ ಹೆಚ್ಚು ಕಟ್ಟಡಗಳು ಮತ್ತು 10,000 ಮನೆಗಳು ಅಪಾಯಕ್ಕೆ ಗುರಿಯಾಗಿದೆ. 250ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ, ಹೆಲಿಕಾಪ್ಟರ್‌ಗಳು, ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ಬೆಂಕಿ ನಂದಿಸಲು ನಿಯೋಜಿಸಲಾಗಿದ್ದು, 30000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಾಸ್ ಏಂಜಲೀಸ್ ಅಗ್ನಿಶಾಮಕ ಮುಖ್ಯಸ್ಥ ಕ್ರಿಸ್ಟಿನ್ ಕ್ರೌಲಿ ಅವರು 30,000 ಕ್ಕೂ ಹೆಚ್ಚು ಜನರು ಈಗಾಗ್ಲೇ ಸ್ಥಳಾಂತರಿಸಲಾಗಿದೆ. 13,000 ಕ್ಕೂ ಹೆಚ್ಚು ಕಟ್ಟಡಗಳು ಮತ್ತು 10,000 ಮನೆಗಳು ಅಪಾಯದಲ್ಲಿದೆ. ಆದರೆ ಇಲ್ಲಿಯವರೆಗೆ ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದ್ದಾರೆ.
ಮಂಗಳವಾರ ಲಾಸ್ ಏಂಜಲೀಸ್‌ನಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು, ದಕ್ಷಿಣ ಕ್ಯಾಲಿಫೋರ್ನಿಯಾಗೆ ಅಪ್ಪಳಿಸಿದ ಭೀಕರ ಗಾಳಿಯ ನಡುವೆ ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳದವರು ಹರಸಾಹಸ ಪಡುತ್ತಿದ್ದಾರೆ. ವೇಗವಾಗಿ ಬೀಸುವ ಗಾಳಿಯಿಂದಾಗಿ ಬೆಂಕಿ ನಂದಿಸುವ ಕಾರ್ಯಕ್ಕೆ ತೊಡಕುಂಟಾಗಿದೆ. ಪರ್ವತಗಳು ಮತ್ತು ಬೆಟ್ಟ ಗುಡ್ಡಗಳಿಂದ ಗಂಟೆಗೆ 160 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರೋದ್ರಿಂದ ಕಾಡ್ಗಿಚ್ಚು ಇನ್ನೂ ಭಯಾನಕವಾಗಿ ವ್ಯಾಪಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿರುವ ಲಾಸ್ ಏಂಜಲೀಸ್ ಕೌಂಟಿಯ ಮೇಲ್ವಿಚಾರಕಿ ಲಿಂಡ್ಸೆ ಹೊರ್ವತ್ ಅವರು, ಕಾಡ್ಗಿಚ್ಚು ಹರಡುವಿಕೆಯಿಂದಾಗಿ ಕೆಲವು ಶಾಲೆಗಳನ್ನು ಸ್ಥಳಾಂತರಿಸಲಾಗುತ್ತಿದೆ. ಈ ಬೆಂಕಿಯನ್ನು ತುರ್ತಾಗಿ ತಡೆಯಲು ನಾವು ಪ್ರತಿ ಸಂಪನ್ಮೂಲವನ್ನು ಉಪಯೋಗಿಸುತ್ತಿದ್ದೇವೆ. ಇದು ಭಯಾನಕವಾಗಿದೆ, ಜನರ ರಕ್ಷಣೆಗೆ ನಾವು ಕೈ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಆಕ್ಟಿಂಗ್ ಮೇಯರ್ ಮತ್ತು ಲಾಸ್ ಏಂಜಲೀಸ್ ಸಿಟಿ ಕೌನ್ಸಿಲ್ ಅಧ್ಯಕ್ಷ ಮಾರ್ಕ್ವೀಸ್ ಹ್ಯಾರಿಸ್-ಡಾಸನ್ ಅವರು ಭಯಾನಕ ಕಾಡ್ಗಿಚ್ಚು ಬಗ್ಗೆ ಅಮೆರಿಕಾದ ನಗರವು ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದು ಹೇಳಿದ್ದಾರೆ.
At least five people have lost their lives and over 1,000 structures have been reduced to ash as raging wildfires swept through the Los Angeles area, officials confirmed.
14-03-25 03:39 pm
HK News Desk
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 11:02 am
Mangalore Correspondent
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm