ಬ್ರೇಕಿಂಗ್ ನ್ಯೂಸ್
12-01-25 05:07 pm HK News Desk ದೇಶ - ವಿದೇಶ
ನವದೆಹಲಿ, ಜ.12: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಿಂದ ಪಾಕಿಸ್ತಾನ ಪರಮಾಣು ಇಂಧನ ಆಯೋಗದ (PAEC) 18 ವಿಜ್ಞಾನಿಗಳನ್ನು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ ಉಗ್ರರು ಅಪಹರಿಸಿದ್ದಾರೆ. ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಎಂಟು ಮಂದಿಯನ್ನು ರಕ್ಷಿಸಿದ್ದಾರೆ.
ಕಾಬೂಲ್ ಖೇಲ್ ಪರಮಾಣು ವಿದ್ಯುತ್ ಯೋಜನೆಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕರ ಮೇಲೆ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ದಾಳಿ ನಡೆಸಿದ್ದು 18 ಜನರನ್ನು ಬಂದೂಕು ತೋರಿಸಿ ಒತ್ತೆಯಾಳಾಗಿ ಇರಿಸಿದ್ದರು. ದಾಳಿಕೋರರು ವಿಜ್ಞಾನಿಗಳಿದ್ದ ವಾಹನಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಈ ವೇಳೆ, ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಟು ಒತ್ತೆಯಾಳುಗಳನ್ನು ರಕ್ಷಿಸಿದ್ದಾರೆ. ಕಾರ್ಯಾಚರಣೆ ವೇಳೆ ರಕ್ಷಣೆ ಆದವರ ಪೈಕಿ ಮೂವರು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.
ತಾಲಿಬಾನ್ ಪ್ರೇರಿತ ಉಗ್ರರು ಅಪಹರಣದ ಹೊಣೆ ಹೊತ್ತಿದ್ದು, ಅಪಹರಿಸಿದ ಉದ್ಯೋಗಿಗಳ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ದೃಶ್ಯಾವಳಿಯಲ್ಲಿ ಕೆಲವು ಒತ್ತೆಯಾಳುಗಳು ಟಿಟಿಪಿಯ ಬೇಡಿಕೆಗಳನ್ನು ಪೂರೈಸಿ ತಮ್ಮ ಜೀವ ಕಾಪಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಉಗ್ರರ ಬೇಡಿಕೆಗಳಲ್ಲಿ ಪಾಕಿಸ್ತಾನದ ಜೈಲಿನಲ್ಲಿರುವ ಕೈದಿಗಳ ಬಿಡುಗಡೆಯೂ ಸೇರಿದೆ. ಭಯೋತ್ಪಾದಕರು ಯುರೇನಿಯಂ ಅನ್ನು ಸಹ ಲೂಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು ಪರಮಾಣು ಬಾಂಬ್ ತಯಾರಿಸಿ ವಿಧ್ವಂಸಕ ಕೃತ್ಯಕ್ಕೆ ಸಂಚು ಹೆಣೆಯುತ್ತಿದ್ದಾರೆಯೇ ಎಂಬ ಆತಂಕ ವ್ಯಕ್ತವಾಗಿದೆ.
ಟಿಟಿಪಿ ಮತ್ತು ಬಲೂಚ್ ದಂಗೆಕೋರರು ಅಫ್ಘಾನಿಸ್ತಾನದ ಆಶ್ರಯ ತಾಣಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪಾಕಿಸ್ತಾನಿ ಅಧಿಕಾರಿಗಳು ಹೇಳುತ್ತಿದ್ದಾರೆ. ವಿಶ್ವಸಂಸ್ಥೆಯಿಂದ ಜಾಗತಿಕ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲ್ಪಟ್ಟ ಟಿಟಿಪಿ ಅಫ್ಘಾನಿಸ್ತಾನದ ಅತಿದೊಡ್ಡ ಉಗ್ರಗಾಮಿ ಗುಂಪು ಎಂದು ಹೇಳಲಾಗಿದೆ.
The Tehrik-i-Taliban Pakistan (TTP) has captured 18 Pakistani nuclear engineers in Dera Ismail Khan district of Khyber Pakhtunkhwa province, according to a report. A video of engineers has surfaced that purportedly shows them in custody. The engineers are said to be requesting their government to rescue them in the video.
11-01-25 10:53 pm
HK News Desk
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
12-01-25 05:07 pm
HK News Desk
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
12-01-25 12:33 pm
Mangalore Correspondent
CM Siddaramaiah, Kambala Mangalore, Naringana...
11-01-25 10:34 pm
Mangalore Lit Fest 2025, Hardeep Singh Puri;...
11-01-25 07:19 pm
DYFI, CM Siddaramaiah, IPS Anupam Agrawal; ಪೊ...
11-01-25 04:57 pm
Lava Kusha Jodukare Kambala, Mangalore; ತೃತೀಯ...
11-01-25 02:25 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm