ಬ್ರೇಕಿಂಗ್ ನ್ಯೂಸ್
03-02-25 02:57 pm HK News Desk ದೇಶ - ವಿದೇಶ
ಪ್ರಯಾಗರಾಜ್, ಫೆ.3: ಮೌನಿ ಅಮಾವಾಸ್ಯೆಯಂದು ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ದೊಡ್ಡ ಸಂಚು ಇದ್ಯಾ ಎನ್ನುವ ಶಂಕೆ ಈಗ ಎದ್ದಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಕಾಲ್ತುಳಿತ ಸಂಭವಿಸಿದ ದಿನದಲ್ಲಿ ಪಾಲ್ಗೊಂಡ ಜನರ ಮೊಬೈಲ್ ಸಂಖ್ಯೆಗಳು, ಸಿಸಿಟಿವಿಗಳನ್ನು ತನಿಖೆ ನಡೆಸುತ್ತಿದ್ದಾರೆ.
ಕಾಲ್ತುಳಿತ ಸಂಭವಿಸಿದ ಸ್ಥಳದಲ್ಲಿ ಸಕ್ರಿಯವಾಗಿದ್ದ ಸುಮಾರು 16 ಸಾವಿರ ಮೊಬೈಲ್ ಫೋನ್ ದತ್ತಾಂಶಗಳನ್ನು ತನಿಖೆ ಮಾಡಲಾಗಿದ್ದು ಈ ಪೈಕಿ ಬಹುತೇಕ ಮೊಬೈಲ್ ಫೋನ್‌ಗಳು ಸ್ವಿಚ್ ಆಫ್ ಆಗಿರುವುದು ಅನುಮಾನಕ್ಕೆ ಕಾರಣವಾಗಿದೆ. ತನಿಖಾ ತಂಡ ಸ್ವಿಚ್ ಆಫ್ ಆಗಿರುವ ಮೊಬೈಲ್ ಸಂಖ್ಯೆಗಳ ಗ್ರಾಹಕರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ಪೊಲೀಸ್ ಕಂಟ್ರೋಲ್ ರೂಮ್‌ನಲ್ಲಿ ಸಂಗ್ರಹಿಸಲಾದ ಸಿಸಿಟಿವಿ ದೃಶ್ಯಗಳಿಂದ ಮುಖ ಗುರುತಿಸುವಿಕೆ ಅಪ್ಲಿಕೇಶನ್ ಮೂಲಕ ಶಂಕಿತರನ್ನು ಗುರುತಿಸಲಾಗುತ್ತಿದೆ. ಜನವರಿ 29ರಂದು ಮೌನಿ ಅಮಾವಾಸ್ಯೆಯಂದು ಸ್ನಾನ ಮಾಡಲು ನೂಕು ನುಗ್ಗಲು ಉಂಟಾಗಿ ಸುಮಾರು 30 ಮಂದಿ ಕಾಲ್ತುಳಿತಕ್ಕೆ ಬಲಿಯಾಗಿದ್ದರು. ಜನಸಮೂಹವು ಬ್ಯಾರಿಕೇಡ್‌ಗಳನ್ನು ಹಾರಿ ಮುನ್ನುಗ್ಗಿದ್ದರಿಂದ ಈ ದುರಂತ ಸಂಭವಿಸಿತ್ತು. ಯೋಗಿ ಅದಿತ್ಯನಾಥ್ ಸರ್ಕಾರ ಈ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಮೂವರು ಸದಸ್ಯರ ನ್ಯಾಯಾಂಗ ಆಯೋಗವು ಶುಕ್ರವಾರ ಘಟನೆಯ ಸ್ಥಳಕ್ಕೆ ಭೇಟಿ ನೀಡಿತ್ತು. ಸಮಿತಿ ತನಿಖೆ ಮುಗಿಸಿ ವರದಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.
ಕುಂಭಮೇಳದಲ್ಲಿ ಪವಿತ್ರ ಬಸಂತ ಪಂಚಮಿ ಹಿನ್ನೆಲೆಯಲ್ಲಿ ಫೆ.3ರಂದು ಸೋಮವಾರ ಕನಿಷ್ಠ ಮೂರು ಕೋಟಿ ಜನರು ಪವಿತ್ರ ಸ್ನಾನ ಮಾಡುವ ನಿರೀಕ್ಷೆಯಿದೆ.
Investigators probing the January 29 stampede at the ongoing Maha Kumbh Mela in Prayagraj have shifted their focus to a conspiracy angle that might have played a part in the tragic incident that left 30 pilgrims dead, sources. According to the sources, investigators are conducting data analysis of more than 16,000 mobile numbers which were said to be active in the Sangam Nose area -- ground zero of stampede -- on the day of the incident.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm