ಬ್ರೇಕಿಂಗ್ ನ್ಯೂಸ್
09-02-25 09:32 pm HK News Desk ದೇಶ - ವಿದೇಶ
ಮೆಕ್ಸಿಕೋ, ಫೆ.9: 48 ಜನರನ್ನು ಒಯ್ಯುತ್ತಿದ್ದ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗನೆ ಉರಿದಿದ್ದು 41 ಜನರು ಸಜೀವ ದಹನವಾದ ಘಟನೆ ದಕ್ಷಿಣ ಮೆಕ್ಸಿಕೋ ನಗರದಲ್ಲಿ ನಡೆದಿದೆ.
ಪ್ರಯಾಣಿಕರಿದ್ದ ಬಸ್ಸಿನಲ್ಲಿ ಬೆಂಕಿ ಉಂಟಾಗಿದ್ದರಿಂದ 38 ಪ್ರಯಾಣಿಕರು ಮತ್ತು ಟ್ರಕ್ ಹಾಗೂ ಬಸ್ಸಿನ ಇಬ್ಬರು ಚಾಲಕರು ನೋಡ ನೋಡುತ್ತಲೇ ಸುಟ್ಟು ಕರಕಲಾಗಿದ್ದಾರೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ಈ ಘಟನೆ ಶನಿವಾರ ಬೆಳಗಿನ ಜಾವ ತಬಾಸ್ಕೊ ರಾಜ್ಯದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಟ್ರಕ್ ಚಾಲಕನೂ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳದಲ್ಲಿ ಇದುವರೆಗೆ 18 ಜನರ ಅವಶೇಷಗಳನ್ನು ಗುರುತಿಸಲಾಗಿದೆ. ಹಲವರು ಗಂಭೀರ ಗಾಯಗೊಂಡಿದ್ದು ಸಾವು- ನೋವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಪೂರ್ತಿ ಸುಟ್ಟು ಹೋಗಿದ್ದು ಕೊನೆಗೆ ಕೇವಲ ಲೋಹದ ವಸ್ತುಗಳು ಮಾತ್ರ ಉಳಿದುಕೊಂಡಿವೆ. ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಏರಿದ್ದು ಇದರ ವಿಡಿಯೋಗಳು ಹರಿದಾಡಿವೆ. ಹೀಗಾಗಿ ಮೃತದೇಗದ ಅವಶೇಷಗಳು ಗುರುತೇ ಸಿಗದಂತಾಗಿದ್ದು ಗುರುತು ಪತ್ತೆಹಚ್ಚುವ ಕಾರ್ಯ ಮುಂದುವರೆದಿದೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ. ಬಸ್ ಅತಿ ವೇಗವೇ ಅಪಘಾತಕ್ಕೆ ಕಾರಣವೇ, ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಮತ್ತು ಟ್ರಕ್ ನಲ್ಲಿ ಏನಾದರೂ ಹೊತ್ತಿಕೊಳ್ಳಬಲ್ಲ ಪದಾರ್ಥ ಇತ್ತೇ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಪ್ರಯಾಣಿಕರನ್ನು ಹೊತ್ತ ಬಸ್ ಕಾನ್ಕೂನ್ ನಗರದಿಂದ ತಬಾಸ್ಕೋ ನಗರಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
A traffic accident involving a bus in southern Mexico, which took place in the early hours of Saturday morning, killed 41 people, the government of Tabasco state said in a statement, adding that recovery work was still ongoing.
13-03-25 02:56 pm
HK News Desk
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
Pramod Muthalik, Love Jihad: ವೇಶ್ಯಾವಾಟಿಕೆ, ಭಯ...
12-03-25 03:51 pm
Mangalore Chakravarti Sulibele, Prakash Raj:...
11-03-25 06:19 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
13-03-25 09:20 pm
Mangalore Correspondent
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
Diganth Missing case, Reunite with family: 17...
12-03-25 10:16 pm
13-03-25 06:44 pm
Mangalore Correspondent
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm