ಬ್ರೇಕಿಂಗ್ ನ್ಯೂಸ್
13-02-25 02:45 pm HK News Desk ದೇಶ - ವಿದೇಶ
ಚೆನ್ನೈ, ಫೆ.13: ಲಾರ್ಸನ್ & ಟಬ್ರೊ ಅಧ್ಯಕ್ಷ ಎಸ್.ಎನ್. ಸುಬ್ರಹ್ಮಣ್ಯನ್ ಸರ್ಕಾರ ನೀಡುತ್ತಿರುವ ಉಚಿತ ಯೋಜನೆಗಳ ಬಗ್ಗೆ ಟೀಕಿಸಿದ್ದಾರೆ. ಉಚಿತ ಯೋಜನೆಗಳ ಕಾರಣದಿಂದಾಗಿ ಕಾರ್ಮಿಕರು ಕಠಿಣ ಕೆಲಸ ಮಾಡಲ ಹಿಂಜರಿಯುತ್ತಿದ್ದಾರೆ. ಅಲ್ಲದೆ, ಉದ್ಯೋಗಕ್ಕಾಗಿ ಬೇರೆ ಸ್ಥಳಗಳಿಗೆ ಹೋಗಲು ಹಿಂಜರಿಯುತ್ತಿದ್ದಾರೆ. ಇದರ ಪರಿಣಾಮ ನಿರ್ಮಾಣ ಕ್ಷೇತ್ರದ ಮೇಲಾಗುತ್ತಿದೆ ಎಂದು ಹೇಳಿದ್ದಾರೆ.
ಸುಬ್ರಹ್ಮಣ್ಯನ್ ಇತ್ತೀಚೆಗೆ ಸಾಫ್ಟ್‌ವೇರ್ ಕಂಪನಿ ನೌಕರರು ವಾರದಲ್ಲಿ 90 ಗಂಟೆಗಳ ಕಾಲ ಕೆಲಸ ಮಾಡುವುದನ್ನು ಬಯಸುತ್ತೇನೆ ಎನ್ನುವ ಮೂಲಕ ವ್ಯಾಪಕ ಚರ್ಚೆಗೆ ಕಾರಣವಾಗಿದ್ದರು. ಇದೀಗ ಚೆನ್ನೈನಲ್ಲಿ ನಡೆದ CII Mystic South Global Linkages Summit 2025 ರಲ್ಲಿ ಮಾತನಾಡಿದ ಸುಬ್ರಹ್ಮಣ್ಯನ್, ಎಂಜಿಎನ್‌ಆರ್‌ಇಜಿಎ (MGNREGA), ನೇರ ಪ್ರಯೋಜನ ವರ್ಗಾವಣೆ ಮತ್ತು ಜನಧನ್ ಖಾತೆಗಳಂತಹ ಯೋಜನೆಗಳಿಂದಾಗಿ ಕಾರ್ಮಿಕರು ಆರಾಮದಾಯಕ ವಾತಾವರಣ ಬಿಟ್ಟು ಹೊರಬರಲು ಬಯಸುತ್ತಿಲ್ಲ, ಇದರಿಂದಾಗಿ ಕಾರ್ಮಿಕರನ್ನು ಒಗ್ಗೂಡಿಸಲು ಕಷ್ಟವಾಗುತ್ತಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಗಳು ಸವಾಲಾಗಿ ಪರಿಣಮಿಸಿವೆ ಎಂದು ಹೇಳಿದ್ದಾರೆ.
ಸೌಕರ್ಯಕ್ಕಾಗಿ ಆದ್ಯತೆ ನೀಡುವ ಕಾರಣದಿಂದಾಗಿ ಕಟ್ಟಡ ನಿರ್ಮಾಣ ಉದ್ಯಮದಲ್ಲಿರುವವರು ತಮ್ಮ ಊರಿಂದ ಬೇರೆಡೆಗೆ ಪ್ರಯಾಣಿಸಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಅಗತ್ಯ ಕೆಲಸಕ್ಕೆ ಕಾರ್ಮಿಕರನ್ನು ಪಡೆಯುವುದು ಕಷ್ಟವಾಗುತ್ತಿದೆ ಎಂದು ಸುಬ್ರಹ್ಮಣ್ಯನ್ ಹೇಳಿದ್ದಾರೆ. ಕಾರ್ಮಿಕರು ಉದ್ಯೋಗ ಅವಕಾಶಗಳಿಗಾಗಿ ತಾವು ಸ್ಥಳಾಂತರಗೊಳ್ಳಲು ಮುಂದಾಗುತ್ತಿಲ್ಲ. ಬಹುಶಃ ಅವರ ಸ್ಥಳೀಯ ಆರ್ಥಿಕತೆ ಉತ್ತಮವಾಗಿದೆ ಎನ್ನಬಹುದು. ವಿವಿಧ ಸರ್ಕಾರಿ ಯೋಜನೆಗಳ ಕಾರಣದಿಂದಾಗಿ ಇಂತಹ ಸ್ಥಿತಿ ಬಂದಿರಬಹುದು ಎಂದವರು ಹೇಳಿದ್ದಾರೆ.
Larsen & Toubro Chairman and Managing Director SN Subrahmanyan has raised concerns over the declining migration of construction labourers in India, attributing it to the availability of government welfare schemes and a growing preference for comfort.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm