ಬ್ರೇಕಿಂಗ್ ನ್ಯೂಸ್
21-02-25 12:17 pm HK News Desk ದೇಶ - ವಿದೇಶ
Photo credits : Money Control
ನವದೆಹಲಿ, ಫೆ.21: ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಜಗತ್ತಿನ ಅತಿ ಸಿರಿವಂತ ಉದ್ಯಮಿ ಎಲಾನ್ ಮಸ್ಕ್ ಅವರನ್ನು ಅಮೆರಿಕದಲ್ಲಿ ಭೇಟಿಯಾದ ಬೆನ್ನಲ್ಲೇ ಟೆಸ್ಲಾ ಕಂಪನಿ ಭಾರತದಲ್ಲಿ ಮಾರುಕಟ್ಟೆ ವೃದ್ಧಿಗೆ ಮುಂದಾಗಿದೆ. ಮಸ್ಕ್ ಒಡೆತನದ ಟೆಸ್ಲಾ ಕಂಪನಿ ಮುಂದಿನ ಏಪ್ರಿಲ್ ವೇಳೆಗೆ ಭಾರತದಲ್ಲಿ ಟೆಸ್ಲಾ ಎಲೆಕ್ಟ್ರಿಕ್ ಕಾರುಗಳನ್ನ ಮಾರುಕಟ್ಟೆಗೆ ಬಿಡುಗಡೆಗೊಳಿಸಲು ಯೋಜನೆ ಹಾಕಿದೆ.
ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಟೆಸ್ಲಾ ಕಂಪನಿಗೆ ಮಾರುಕಟ್ಟೆ ಇದ್ದರೂ, ಭಾರತದಲ್ಲಿ ಹೆಜ್ಜೆ ಇಡಲು ಸಾಧ್ಯವಾಗಿರಲಿಲ್ಲ. ಇದೀಗ ರಿಟೇಲ್ ಉದ್ಯಮಕ್ಕಿಳಿದಿರುವ ಟೆಸ್ಲಾ ಕಂಪನಿಯು ತನ್ನ ಬರ್ಲಿನ್ ಪ್ಲ್ಯಾಂಟ್‌ನಿಂದ ಎಲೆಕ್ಟ್ರಿಕ್ ಕಾರುಗಳನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲು ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಮುಂಬೈನ ಬಾಂದ್ರಾನಲ್ಲಿ ಮತ್ತು ದೆಹಲಿಯ ಏರೋಸಿಟಿಯಲ್ಲಿ ಶೋರೂಮ್ ಸ್ಥಾಪಿಸಲು ಸ್ಥಳಗಳನ್ನು ಗುರುತಿಸಿದೆ. ಆದ್ರೆ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ತಯಾರಿಸುವ ಯೋಜನೆ ಟೆಸ್ಲಾ ಸದ್ಯಕ್ಕೆ ಹೊಂದಿಲ್ಲ ಎನ್ನಲಾಗುತ್ತಿದೆ.
ತನ್ನ ಕಂಪನಿಯ ಆಕರ್ಷಕ ಕಾರುಗಳನ್ನು ಭಾರತೀಯ ಮಾರುಕಟ್ಟೆಗೆ ಇಳಿಸಲು ಮುಂದಾಗಿರುವ ಟೆಸ್ಲಾ ಆರಂಭದಲ್ಲಿ 25,000 ಡಾಲರ್ (ಸುಮಾರು 22 ಲಕ್ಷ ರೂ.) ಆರಂಭಿಕ ಬೆಲೆಯ ಕಾರುಗಳನ್ನು ಮಾರಾಟಕ್ಕಿಳಿಸಲು ಪ್ಲ್ಯಾನ್ ಮಾಡಿದೆ. ಇದರೊಂದಿಗೆ 2025ರ ಅಂತ್ಯದ ವೇಳೆಗೆ 1 ಶತಕೋಟಿ ವಹಿವಾಟು ನಡೆಸುವ ಗುರಿ ಇರಿಸಿಕೊಂಡಿದೆ.
ಅಮೆರಿಕದಲ್ಲಿ ಮೋದಿ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗುತ್ತಲೇ ಟೆಸ್ಲಾ ಆಟೋಮೊಬೈಲ್ ಸಂಸ್ಥೆಯು ಭಾರತದಲ್ಲಿ ನೇಮಕಾತಿಯನ್ನು ಆರಂಭಿಸಿದೆ. ಟೆಸ್ಲಾ ಕಂಪನಿಯು ಗ್ರಾಹಕ ಸಂಪರ್ಕ ಮತ್ತು ಆಡಳಿತ ಸೇರಿದಂತೆ ಒಟ್ಟು 13 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಮುಂಬೈ ಮತ್ತು ದೆಹಲಿ ಕೇಂದ್ರಿತ ನೇಮಕಾತಿಗಳಿಗೆ ಟೆಸ್ಲಾ ಮುಂದಡಿ ಇಟ್ಟಿದೆ. ಇನ್ನೆರಡು ವರ್ಷಗಳಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಟೆಸ್ಲಾ ಶೋರೂಮ್ ಓಪನ್ ಆಗಲಿದೆ.
Tesla has started recruiting in India, hinting at its plans to enter the country’s electric vehicle (EV) market. This follows Tesla CEO Elon Musk and Prime Minister Narendra Modi’s meeting during the latter’s recent trip to the United States.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm