ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವಕ್ಪ್ ಕಾನೂನು ಯಾವುದೇ ಧರ್ಮಕ್ಕೆ ಸಂಬಂಧಿಸಿಲ್ಲ, ವಿಪಕ್ಷಗಳು ಮತ್ತು ಧಾರ್ಮಿಕ ಮುಖಂಡರು “ಮುಗ್ಧ ಮುಸ್ಲಿಮರನ್ನು” ದಾರಿ ತಪ್ಪಿಸುತ್ತಿದ್ದಾರೆ ; ಸಚಿವ ಕಿರಣ್ ರಿಜಿಜು 

02-04-25 07:35 pm       HK News Desk   ದೇಶ - ವಿದೇಶ

ವಕ್ಫ್ ತಿದ್ದುಪಡಿ ವಿಧೇಯಕವನ್ನು ಬುಧವಾರ ಲೋಕಸಭೆಯಲ್ಲಿ ಮಂಡನೆ ಮಾಡಿದ್ದು, ಮಸೂದೆಗೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಮಸೂದೆ ಮಂಡಿಸಿದ್ದಾರೆ. 

ನವದೆಹಲಿ, ಎ.2 : ವಕ್ಫ್ ತಿದ್ದುಪಡಿ ವಿಧೇಯಕವನ್ನು ಬುಧವಾರ ಲೋಕಸಭೆಯಲ್ಲಿ ಮಂಡನೆ ಮಾಡಿದ್ದು, ಮಸೂದೆಗೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಮಸೂದೆ ಮಂಡಿಸಿದ್ದಾರೆ. 

ಜಂಟಿ ಸಂಸದೀಯ ಸಮಿತಿಯಿಂದ (ಜೆಪಿಸಿ) ಸುದೀರ್ಘ ಸಮಾಲೋಚನೆ ಬಳಿಕ ಕೇಂದ್ರ ಸಚಿವ ಸಂಪುಟ ಮಸೂದೆಯನ್ನು ಅಂಗೀಕರಿಸಿತ್ತು. ಇದೇ ಅಧಿವೇಶನದಲ್ಲಿ ಮಸೂದೆ ಮಂಡಿಸಿ ಸಂಸತ್ತಿನ ಅಂಗೀಕಾರ ಪಡೆಯಲಾಗುವುದು ಎಂದು ಇತ್ತೀಚೆಗೆ ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡಿದ್ದರು. 

ಮಸೂದೆ ವಿಚಾರದಲ್ಲಿ 25 ರಾಜ್ಯಗಳ ವಕ್ಫ್‌ ಬೋರ್ಡ್‌ಗಳ ಅಭಿಪ್ರಾಯ ಪಡೆಯಲಾಗಿದೆ. ಮಸೂದೆ ಕುರಿತು 96ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದೇವೆ. 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಕ್ಫ್ ಮಂಡಳಿಗಳ ಜೊತೆಗೆ 284 ನಿಯೋಗಗಳು ಮಸೂದೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿವೆ. ಕಾನೂನು ತಜ್ಞರು, ದತ್ತಿ ಸಂಸ್ಥೆಗಳು, ಶಿಕ್ಷಣ ತಜ್ಞರು ಮತ್ತು ಧಾರ್ಮಿಕ ಮುಖಂಡರು ಸೇರಿದಂತೆ ಇತರರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದಾರೆ. ಈ ಮಸೂದೆ ಬಗ್ಗೆ ನಡೆದಷ್ಟು ಚರ್ಚೆ ಯಾವುದರಲ್ಲಿಯೂ ನಡೆದಿಲ್ಲ. ಸಂಸದೀಯ ಜಂಟಿ ಸಮಿತಿಯಲ್ಲೂ ವಿಧೇಯಕದ ಬಗ್ಗೆ ಹೆಚ್ಚು ಚರ್ಚೆ ನಡೆದಿದೆ ಎಂದು ಮಸೂದೆ ಮಂಡಿಸಿದ ಸಚಿವ ಕಿರಣ್ ರಿಜಿಜು ಹೇಳಿದರು. 

ಕೇಂದ್ರ ಸರ್ಕಾರವು ಯಾವುದೇ ಧಾರ್ಮಿಕ ಸಂಸ್ಥೆಯ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಈ ಮಸೂದೆ ಯಾವುದೇ ಧರ್ಮಕ್ಕೆ ಸಂಬಂಧಿಸಿದ್ದಲ್ಲ. ಆದರೆ, ವಕ್ಫ್ ಆಸ್ತಿಗಳೊಂದಿಗೆ ಮಾತ್ರ ವ್ಯವಹರಿಸುತ್ತದೆ. ಮಸೂದೆ ಪ್ರಕಾರ, ಯಾವುದೇ ಕಾನೂನಿನ ಅಡಿಯಲ್ಲಿ ಮುಸ್ಲಿಮರು ರಚಿಸಿದ ಟ್ರಸ್ಟ್‌ಗಳನ್ನು ಇನ್ನು ಮುಂದೆ ವಕ್ಫ್ ಎಂದು ಪರಿಗಣಿಸಲಾಗುವುದಿಲ್ಲ. ಇದು ಟ್ರಸ್ಟ್‌ಗಳ ಮೇಲೆ ಸಂಪೂರ್ಣ ನಿಯಂತ್ರಣವನ್ನು ಖಚಿತಪಡಿಸುತ್ತದೆ. ಮುಸ್ಲಿಮರು (ಕನಿಷ್ಠ ಐದು ವರ್ಷಗಳ ಕಾಲ) ಮಾತ್ರ ತಮ್ಮ ಆಸ್ತಿಯನ್ನು ವಕ್ಫ್‌ಗೆ ಅರ್ಪಿಸಬಹುದು, 2013 ರ ಪೂರ್ವದ ನಿಯಮಗಳನ್ನು ಪುನಃ ಸ್ಥಾಪಿಸಬಹುದು. ಆಸ್ತಿ ವಕ್ಫ್ ಎಂದು ಘೋಷಣೆಯಾಗುವುದಕ್ಕೂ ಮುನ್ನ ವಿಧವೆಯರು, ವಿಚ್ಛೇದಿತ ಮಹಿಳೆಯರು ಹಾಗೂ ಅನಾಥರು ಉತ್ತರಾಧಿಕಾರ ಪಡೆಯಬೇಕು. ವಕ್ಫ್ ಎಂದು ಹೇಳಲಾದ ಸರ್ಕಾರಿ ಆಸ್ತಿಗಳನ್ನು ಕಲೆಕ್ಟರ್ ಹುದ್ದೆಗಿಂತ ಮೇಲಿನ ಅಧಿಕಾರಿಯೊಬ್ಬರು ತನಿಖೆ ನಡೆಸಬೇಕೆಂದು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ವಿವಾದಗಳಿದ್ದಲ್ಲಿ ಆಸ್ತಿ ವಕ್ಫ್‌ಗೆ ಸೇರಿದೆಯೇ ಅಥವಾ ಸರ್ಕಾರಕ್ಕೆ ಸೇರಿದೆಯೇ ಎಂಬುದರ ಕುರಿತು ಹಿರಿಯ ಸರ್ಕಾರಿ ಅಧಿಕಾರಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. 

ವಕ್ಫ್ ನ್ಯಾಯ ಮಂಡಳಿಗಳು ನಿರ್ಧಾರಗಳನ್ನು ತೆಗೆದುಕೊಳ್ಳಲು ಅಸ್ತಿತ್ವದಲ್ಲಿರುವ ವ್ಯವಸ್ಥೆಯನ್ನು ಇದು ಬದಲಾಯಿಸುತ್ತದೆ. ಅಲ್ಲದೆ, ಮುಸ್ಲಿಮೇತರ ಸದಸ್ಯರನ್ನು ಕೇಂದ್ರ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಸೇರಿಸಲಾಗುತ್ತದೆ. ಪ್ರಧಾನಿ ಮೋದಿಯವರ ಆಳ್ವಿಕೆಯಲ್ಲಿ ಪರಿಚಯಿಸಲಾಗುತ್ತಿರುವ ಈ ಮಸೂದೆಯನ್ನು ಜನರು ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ. ಇದು ದೇಶದ ಬಡ ಮುಸ್ಲಿಮರನ್ನು ನ್ಯಾಯ ನೀಡುತ್ತದೆ. ವಕ್ಫ್ ಮಂಡಳಿ ತನ್ನ ಅಧಿಕಾರವನ್ನು ದುರುಪಯೋಗಪಡಿಸಿ ಬಡವರಿಗೆ ಸೇರಿದ ಆಸ್ತಿಯನ್ನು ಲೂಟಿ ಮಾಡುತ್ತಿರುವ ರೀತಿಯನ್ನು ಕೊನೆಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ರಾಜಕೀಯ ಪಕ್ಷಗಳು ಮತ್ತು ಧಾರ್ಮಿಕ ಹ ಮುಖಂಡರು “ಮುಗ್ಧ ಮುಸ್ಲಿಮರನ್ನು” ದಾರಿ ತಪ್ಪಿಸುತ್ತಿದ್ದಾರೆ. ಆ ತಪ್ಪು ದಾರಿಯನ್ನು ಬಯಲಿಗೆ ಎಳೆಯುತ್ತೇವೆ. ಸಿಎಎ ಕಾಯ್ದೆ ಮುಸ್ಲಿಮರ ಪೌರತ್ವ ಕಸಿದುಕೊಳ್ಳುತ್ತದೆ ಎಂದು ವಿಪಕ್ಷಗಳು ಸುಳ್ಳನ್ನು ಹಬ್ಬಿಸಿತ್ತು. ಆದರೆ, ಅದು ಸುಳ್ಳು ಎಂದು ಜನರಿಗೂ ಅರಿವಿಗೆ ಬಂದಿದೆ. ವಕ್ಫ್​ ಬಿಲ್​ ವಿಚಾರದಲ್ಲೂ ಅದೇ ರೀತಿಯ ಸುಳ್ಳನ್ನು ಹರಿ ಬಿಡುತ್ತಿದ್ದಾರೆ ಎಂದು ಕಿಡಿಕಾರಿದರು.

The promised eight-hour debate on the Waqf Amendment Bill - which proposes changes to laws that decide how Muslim charitable properties are administered - began Wednesday afternoon with Minority Affairs Minister Kiren Rijiju and the opposition trading jabs after the bill was tabled in the Lok Sabha.