ಬ್ರೇಕಿಂಗ್ ನ್ಯೂಸ್
10-04-25 09:10 pm HK News Desk ದೇಶ - ವಿದೇಶ
ಹೈದರಾಬಾದ್, ಎ.10 : 2013ರಲ್ಲಿ ನಡೆದ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ.
2013ರಲ್ಲಿ ನಡೆದ ಹೈದರಾಬಾದ್ ಬಾಂಬ್ ಸ್ಫೋಟ ಘಟನೆಯಲ್ಲಿ 18 ಜನರು ಸಾವನ್ನಪ್ಪಿದ್ದು 131 ಜನರು ಗಾಯಗೊಂಡಿದ್ದರು. ಹೈಕೋರ್ಟ್ ನ್ಯಾಯಮೂರ್ತಿಗಳಾದ ಲಕ್ಷ್ಮಣ್ ಮತ್ತು ಪಿ. ಶ್ರೀಸುಧಾ ಅವರಿದ್ದ ಪೀಠವು, ಭಯೋತ್ಪಾದಕರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ, ಎನ್ಐಎ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ.
ಇದಕ್ಕೂ ಹಿಂದೆ ಡಿಸೆಂಬರ್ 13, 2016 ರಂದು ಇಂಡಿಯನ್ ಮುಜಾಹಿದೀನ್ ಸಂಸ್ಥಾಪಕರಲ್ಲಿ ಒಬ್ಬನಾದ ಮೊಹಮ್ಮದ್ ಅಹ್ಮದ್ ಸಿದ್ದಿಬಾಪಾ ಅಲಿಯಾಸ್ ಯಾಸಿನ್ ಭಟ್ಕಳ್, ಪಾಕಿಸ್ತಾನಿ ಪ್ರಜೆ ಜಿಯಾ-ಉರ್-ರೆಹಮಾನ್ ಅಲಿಯಾಸ್ ವಕಾಸ್, ಅಸಾದುಲ್ಲಾ ಅಖ್ತರ್ ಅಲಿಯಾಸ್ ಮೊನ್ಜಾ ಹದ್ದಿ ಸೇರಿದಂತೆ ಐವರು ಉಗ್ರರನ್ನು ಎನ್‌ಐಎ ನ್ಯಾಯಾಲಯ ದೋಷಿ ಎಂದು ಘೋಷಿಸಿತ್ತು.
ಫೆಬ್ರವರಿ 21, 2013 ರಂದು ಹೈದರಾಬಾದ್ ನಗರದ ಜನದಟ್ಟಣೆ ಪ್ರದೇಶ ದಿಲ್‌ಸುಖ್ ನಗರದಲ್ಲಿ ಎರಡು ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಮೊದಲ ಸ್ಫೋಟ ಬಸ್ ನಿಲ್ದಾಣದಲ್ಲಿ ಮತ್ತು ಎರಡನೆಯದು ದಿಲ್‌ಸುಖ್ ನಗರದ ತಿನಿಸು ಮಳಿಗೆ (ಎ1 ಮಿರ್ಚಿ ಸೆಂಟರ್) ಬಳಿ ಸಂಭವಿಸಿತ್ತು. ಎನ್ಐಎ ವಿಶೇಷ ತನಿಖಾ ತಂಡ ತನಿಖೆ ನಡೆಸಿ ನಾಲ್ಕು ಸಾವಿರ ಪುಟಗಳ ದೋಷಾರೋಪ ವರದಿ ನೀಡಿತ್ತು. ಪ್ರಮುಖ ಆರೋಪಿ ರಿಯಾಜ್ ಭಟ್ಕಳ್ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ.
On 8th April 2025, the Telangana High Court upheld the death sentences awarded to five convicts in the 2013 Dilsukhnagar twin bomb blasts case. The Division Bench comprising Justice K Lakshman and Justice P Sree Sudha dismissed the criminal appeal filed by the convicts, who are linked to the Pakistan-based terror outfit. Founder of the terror organisation Indian Mujahideen, Yasin Bhatkal, is one of the convicts sentenced to death.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm