ಬ್ರೇಕಿಂಗ್ ನ್ಯೂಸ್
16-04-25 03:54 pm HK News Desk ದೇಶ - ವಿದೇಶ
ನವದೆಹಲಿ, ಎ.16 : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಮಾಡಿರುವ ವಿಚಾರದಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಸಾಗರೋತ್ತರ ವಿಭಾಗದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿರುದ್ಧ ದೆಹಲಿ ನ್ಯಾಯಾಲಯದಲ್ಲಿ ಇಡಿ ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ. ಸುಮನ್ ದುಬೆ ಮತ್ತು ಇತರರ ಹೆಸರುಗಳನ್ನು ಸಹ ಈ ಆರೋಪ ಪಟ್ಟಿಯಲ್ಲಿ ಸೇರಿಸಲಾಗಿದೆ. ಪ್ರಕರಣದ ಬಗ್ಗೆ ನ್ಯಾಯಾಲಯ ಏಪ್ರಿಲ್ 25ರಂದು ವಿಚಾರಣೆ ಆರಂಭಿಸಲಿದೆ.
ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಏಪ್ರಿಲ್ 9ರಂದು ಸಲ್ಲಿಸಲಾದ ಆರೋಪ ಪಟ್ಟಿಯನ್ನು ಪರಿಶೀಲನೆ ನಡೆಸಿದ್ದು ಪ್ರಕರಣವನ್ನು ಮುಂದಿನ ವಿಚಾರಣೆಗೆ ಏಪ್ರಿಲ್ 25ಕ್ಕೆ ಮುಂದೂಡಿದ್ದಾರೆ. 661 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ವಶಕ್ಕೆ ಪಡೆಯಲು ಇಡಿ ನೋಟಿಸ್ ಜಾರಿ ಮಾಡಿತ್ತು. ಈ ಹಿಂದೆ, ಕಾಂಗ್ರೆಸ್ ನಿಯಂತ್ರಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಜಪ್ತಿ ಮಾಡಿದ್ದ 661 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ವಶಕ್ಕೆ ಪಡೆಯಲು ಇಡಿ ನೋಟಿಸ್ ಜಾರಿ ಮಾಡಿತ್ತು.
ಪ್ರಕರಣ ಸಂಬಂಧ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಇಡಿ ಆರೋಪ ಪಟ್ಟಿ ಸಲ್ಲಿಸಿರುವುದು ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಪಕ್ಷ ಅಥವಾ ಗಾಂಧಿ ಕುಟುಂಬ ಇಲ್ಲಿಯವರೆಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. ಶನಿವಾರ ಇಡಿ 661 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಳ್ಳಲು ನೋಟಿಸ್ ನೀಡಿತ್ತು. ದೆಹಲಿ, ಮುಂಬೈನ ಬಾಂದ್ರಾ ಪ್ರದೇಶ ಮತ್ತು ಲಕ್ನೋ ನಗರದ ಬಿಶ್ವೇಶ್ವರ ನಾಥ್ ರಸ್ತೆಯಲ್ಲಿರುವ ಎಜೆಎಲ್ ಕಟ್ಟಡದ ಆಸ್ತಿಗಳ ಮೇಲೆ ನೋಟಿಸ್ಗಳನ್ನು ಅಂಟಿಸಲಾಗಿತ್ತು.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯ ಹೆಸರಲ್ಲಿ ಎಜೆಎಲ್ಗೆ ಸೇರಿದ ರೂ. 2,000 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಮೋಸದಿಂದ ಸ್ವಾಧೀನಪಡಿಸಿಕೊಂಡಿದ್ದು ಅದರ ಹಣವನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಹ್ಮಣ್ಯ ಸ್ವಾಮಿ ಇಡಿಗೆ ದೂರು ನೀಡಿದ್ದರು. ನ್ಯಾಷನಲ್ ಹೆರಾಲ್ಡ್ ಯಂಗ್ ಇಂಡಿಯನ್ ಒಡೆತನದ ಪತ್ರಿಕೆಯಾಗಿತ್ತು. ಸೋನಿಯಾ ಮತ್ತು ರಾಹುಲ್ ಇದರ ದೊಡ್ಡ ಷೇರುದಾರರಾಗಿದ್ದು, ತಲಾ ಶೇ. 38ರಷ್ಟು ಷೇರುಗಳನ್ನು ಹೊಂದಿದ್ದಾರೆ.
The Enforcement Directorate has filed a chargesheet against Congress leaders Sonia Gandhi, Rahul Gandhi and others in connection with alleged money laundering in the National Herald case.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 01:32 pm
Mangalore Correspondent
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm